ಮೆಟ್ರೋ ಪಿಂಕ್ ಲೈನ್ ಉದ್ಘಾಟನಾ ಸಮಾರಂಭದಲ್ಲಿ ಸಚಿವರ ಭಾಷಣಕ್ಕೆ ಕೋಕ್​​: ಕೃಷ್ಣ ಭೈರೇಗೌಡ ಅಸಮಾಧಾನ

Edited By:

Updated on: Nov 12, 2026 | 3:24 PM

ನಮ್ಮ ಮೆಟ್ರೋ ಪಿಂಕ್ ಲೈನ್ ಉದ್ಘಾಟನಾ ಸಮಾರಂಭದ ಅಂತಿಮ ಪಟ್ಟಿಯಲ್ಲಿ ತಮ್ಮ ಭಾಷಣಕ್ಕೆ ಅವಕಾಶ ನೀಡದಿರುವುದಕ್ಕೆ ಸಚಿವ ಕೃಷ್ಣ ಭೈರೇಗೌಡ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ರಾಜ್ಯಕ್ಕೆ ನ್ಯಾಯಯುತ ಪಾಲು ಕೇಳಿದ್ದಕ್ಕೆ ಈ ಶಿಕ್ಷೆ ಸಿಕ್ಕಿದೆ ಎಂದು ಅವರು ಎಕ್ಸ್‌ನಲ್ಲಿ ಕಿಡಿಕಾರಿದ್ದಾರೆ. ಮಾರಂಭದಲ್ಲಿ ನೀವು ನನ್ನ ಭಾಷಣ ಕಟ್ ಮಾಡಬಹುದು. ಆದರೆ ಬೆಂಗಳೂರು ಅಭಿವೃದ್ಧಿಗೆ ಕೆಲಸ ಮಾಡುವುದನ್ನು ನಿಲ್ಲಿಸಲು ಆಗಲ್ಲ ಎಂದೂ ಕೌಂಟರ್​​ ಕೊಟ್ಟಿದ್ದಾರೆ.

ಬೆಂಗಳೂರು, ನವೆಂಬರ್​​ 12: ಪ್ರಧಾನಿ ಮೋದಿ ನಾಳೆ (ನವೆಂಬರ್​​ 13) ನಮ್ಮ ಮೆಟ್ರೋ ಪಿಂಕ್ ಲೈನ್ ಉದ್ಘಾಟಿಸಲಿದ್ದು, ಸಮಾರಂಭದಲ್ಲಿ ಬೆಂಗಳೂರು ಅಭಿವೃದ್ಧಿ ಮಂತ್ರಿಗೆ ಮಾತಾಡಲು ಅವಕಾಶವಿಲ್ಲ. ಕರ್ನಾಟಕ ರಾಜ್ಯಕ್ಕೆ ನ್ಯಾಯ ಕೇಳಿದ್ದಕ್ಕೆ ಸಿಕ್ಕ ಬಹುಮಾನ ಇದು ಎಂದು ಎಕ್ಸ್ ಖಾತೆಯಲ್ಲಿ ಸಚಿವ ಕೃಷ್ಣ ಭೈರೇಗೌಡ ಪೋಸ್ಟ್ ಮಾಡಿದ್ದಾರೆ.  ಮೆಟ್ರೋ ಉದ್ಘಾಟನಾ ಸಮಾರಂಭದ ಡ್ರಾಫ್ಟ್​ನಲ್ಲಿ ಅವಕಾಶ ನಿಗದಿಯಾಗಿತ್ತು. ಆದರೆ ನಿನ್ನೆ ರಾತ್ರಿ ಬಂದ ಅಂತಿಮಪಟ್ಟಿಯಲ್ಲಿ ನನ್ನ ಮಾತನ್ನು ಕಟ್ ಮಾಡಲಾಗಿದೆ. ನಮ್ಮ ಮೆಟ್ರೋ ಯೋಜನೆಗೆ ಬಹುತೇಕ ಬಂಡವಾಳ ನಮ್ಮದೇ ಆಗಿದ್ದು, ಕರ್ನಾಟಕ ರಾಜ್ಯಕ್ಕೆ ನ್ಯಾಯಯುತವಾದ ಪಾಲು ಕೇಳಿದರೆ ಈ ರೀತಿ ಶಿಕ್ಷೆ ಸಿಕ್ಕಿದೆ. ಪರವಾಗಿಲ್ಲ, ಸಮಾರಂಭದಲ್ಲಿ ನೀವು ನನ್ನ ಭಾಷಣ ಕಟ್ ಮಾಡಬಹುದು. ಆದರೆ ಬೆಂಗಳೂರು ಅಭಿವೃದ್ಧಿಗೆ ಕೆಲಸ ಮಾಡುವುದನ್ನು ನಿಲ್ಲಿಸಲು ಆಗಲ್ಲ. ಇನ್ನೂ ಹೆಚ್ಚಿನ ಪರಿಶ್ರಮದಿಂದ ಕೆಲಸ ಮಾಡುತ್ತೇನೆಂದು ಕೃಷ್ಣ ಭೈರೇಗೌಡ ಪೋಸ್ಟ್​​ನಲ್ಲಿ ಬರೆದುಕೊಂಡಿದ್ದಾರೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Loading...
Unable to load recommendations.
Follow Us
ಪ್ರಸನ್ನ ಗಾಂವ್ಕರ್​

ಹುಟ್ಟೂರು ಯಲ್ಲಾಪುರ, ಬೆಳೆದೂರು ದಾಂಡೇಲಿಯ ದಟ್ಟ ಕಾಡುಗಳ ನಡುವೆ. ರವಿ ಬೆಳಗೆರೆ ಎಂಬ ಅಕ್ಷರ ರಾಕ್ಷಸನ ಕಟ್ಟಾಭಿಮಾನದಿಂದ ಹಾಳಾಗಿ, ಸೈನ್ಸ್ ನಲ್ಲಿ ಡಿಗ್ರಿ ಪಡೆದು ಜರ್ನಲಿಸಂಗೆ ಹಿಂಬದಿ ಕಿಟಕಿಯಿಂದ ನುಸುಳಿದ್ದು 2010 ರ ಅಕ್ಟೋಬರ್ ನಲ್ಲಿ. ಉಡುಪಿಯಲ್ಲಿ ಮೊದಲ ಪತ್ರಿಕೋದ್ಯಮ ಕರ್ತವ್ಯ ಪ್ರಾರಂಭಿಸಿದ್ದು 2010 ರಲ್ಲಿಯೇ. ಜನಶ್ರೀ ನ್ಯೂಸ್ ಮೊದಲು ಅನ್ನ ನೀಡಿದ ಸಂಸ್ಥೆ. ಉಡುಪಿ ಜಿಲ್ಲಾ ವರದಿಗಾರನಾಗಿ ಮೂರು ವರ್ಷ ಕೆಲಸ ಮಾಡಿ 2013 ರ ಅಂತ್ಯಕ್ಕೆ ಸಮಯ ನ್ಯೂಸ್ ಮೂಲಕ ಬೆಂಗಳೂರಿಗೆ ಎಂಟ್ರಿ. ಬಿಗ್ ೩, ಬೆಂಗಳೂರ್ ಲೈವ್, ಸಮಯ ಸಕಾಲ ಕಾರ್ಯಕ್ರಮದಲ್ಲಿ ವರದಿಗಾರಿಕೆ ಮಾಡಿದ ಖುಷಿ. 2014 ರ ಡಿಸೆಂಬರ್ ನಿಂದ ಟಿವಿ9 ನಲ್ಲಿ ಕೆಲಸ ಪ್ರಾರಂಭ. ಟಿವಿ9 ನಲ್ಲಿ ಮೊದಲು ಮೆಟ್ರೋ ರಿಪೋರ್ಟಿಂಗ್ ಮೂಲಕ ಬೆಂಗಳೂರು ಸುತ್ತುವ ಅರಿಯುವ ರಾಜಧಾನಿಯ ನಾಡಿಮಿಡಿತ ಹುಡುಕುವ ಅವಕಾಶ. ಮೆಟ್ರೋ ಬ್ಯೂರೋ ದಲ್ಲಿ ಶೈಕ್ಷಣಿಕ ಹಾಗೂ ಬಿಬಿಎಂಪಿ ವರದಿಗಾರಿಕೆ. ಚಪ್ಪಲಿಯಿಂದ ಹಿಡಿದು ಚಾದರ್ ತನಕ ಸ್ಟೋರಿ ಮಾಡಿದ ಅನುಭವ. ಮೆಟ್ರೋ ಟೀಂ ನಿಂದ ರಾಜಕೀಯ ವರದಿಗಾರಿಕೆಗೆ ಶಿಫ್ಟ್ ಆದ ತಕ್ಷಣ- ಮುಂದುವರಿದಿದೆ ನಿರಂತರ ಪಯಣ. ಕಥೆ, ಕಾದಂಬರಿ, ಕವನ, ಸಿನಿಮಾ, ಸುತ್ತಾಟ, ಆಗಾಗ ಕಿತ್ತಾಟ, ಸ್ನೇಹಿತರೊಂದಿಗೆ ಒಡನಾಟ ಇವೆಲ್ಲ ಮಾಮೂಲಿ ದಿನಚರಿ. ಇವತ್ತಿಗೂ ಬರವಣಿಗೆಯೊಂದೇ ಖುಷಿ ಕೊಡುವ ಖರ್ಜೂರ. ಸ್ಟಾಕ್ ಮಾರ್ಕೆಟ್ ನಲ್ಲಿ 2019 ರಿಂದ ಆ್ಯಕ್ಟಿವ್.

Read More