ಬೆಂಗಳೂರು ದಕ್ಷಿಣ ತಾಲ್ಲೂಕು ತಹಶಿಲ್ದಾರ್ ಕಚೇರಿಯಲ್ಲಿ ಅಧಿಕಾರಿಗಳು, ನೌಕರರಿಗೆ ಸಚಿವ ಕೃಷ್ಣಭೈರೇಗೌಡ ಕ್ಲಾಸ್
ಕಂದಾಯ ಸಚಿವ ಕೃಷ್ಣಭೈರೇಗೌಡ ಗುರುವಾರ ಹಠಾತ್ತಾಗಿ ಬೆಂಗಳೂರು ಜಿಲ್ಲಾಧಿಕಾರಿ ಕಚೇರಿಗೆ ಭೇಟಿ ನೀಡಿ ಆಡಳಿತಕ್ಕೆ ಚುರುಕುಮುಟ್ಟಿಸುವ ಕೆಲಸ ಮಾಡಿದರು. ದಕ್ಷಿಣ ತಾಲ್ಲೂಕು ತಹಶಿಲ್ದಾರರ್ ಕಚೇರಿಯಲ್ಲಿ ಕಾರ್ಯಕಲಾಪಗಳ ಪರಾಮರ್ಶೆ ನಡೆಸಿ, ಕೆಲಸ ಬಹಳ ನಿಧಾನವಾಗುತ್ತಿರುವ ಬಗ್ಗೆ ಅಧಿಕಾರಿಗಳು ಮತ್ತು ನೌಕರರನ್ನು ತರಾಟೆಗೆ ತೆಗೆದುಕೊಂಡರು.
ಬೆಂಗಳೂರು, ಜೂನ್ 19: ಬೆಂಗಳೂರು ಡಿಸಿ ಕಚೇರಿಗೆ ಕಂದಾಯ ಸಚಿವ ಕೃಷ್ಣಭೈರೇಗೌಡ ಗುರುವಾರ ದಿಢೀರ್ ಬೇಟಿ ನೀಡಿದರು. ದಕ್ಷಿಣ ತಾಲ್ಲೂಕು ತಹಶಿಲ್ದಾರರ್ ಕಚೇರಿಗೆ ತೆರಳಿ ಅಲ್ಲಿ ನಡೆಯುತ್ತಿರುವ ಕೆಲಸಕಾರ್ಯಗಳ ಬಗ್ಗೆ ಪರಾಮರ್ಶೆ ನಡೆಸಿದರು. ಇದೇ ವೇಳೆ, ಕಚೇರಿಯಲ್ಲಿ ಸಮರ್ಪಕವಾಗಿ ಕೆಲಸಕಾರ್ಯಗಳು ನಡೆಯದ ಬಗ್ಗೆ ಅಧಿಕಾರಿಗಳು ಹಾಗೂ ನೌಕರರನ್ನು ತರಾಟೆಗೆ ತೆಗೆದುಕೊಂಡರು.

