ತುಂಬಿ ನಿಂತ ಹೇಮಾವತಿ ಡ್ಯಾಂನ ಸೌಂದರ್ಯ ಕಣ್ತುಂಬಿಕೊಂಡ ಸಚಿವ ಕೃಷ್ಣ ಬೈರೇಗೌಡ
ಇಂದು ಹಾಸನದ ಉಸ್ತುವಾರಿ ಸಚಿವ ಕೃಷ್ಣ ಬೈರೇಗೌಡ ಹೇಮಾವತಿ ಅಣ್ಣೆಕಟ್ಟಿಗೆ ಬಾಗಿನ ಅರ್ಪಿಸಿ, ಹೇಮಾವತಿ ಡ್ಯಾಂನ ಸೌಂದರ್ಯವನ್ನು ಕಣ್ತುಂಬಿಕೊಂಡಿದ್ದಾರೆ. ಹಾಸನ ಜಿಲ್ಲೆಯ ಗೊರೂರು ಬಳಿ ಹೇಮಾವತಿ ಜಲಾಶಯದ ಅಣೆಕಟ್ಟು ಇದೆ. ಕಾವೇರಿ ನದಿಯ ಉಪನದಿಯಾದ ಹೇಮಾವತಿಗೆ ಅಡ್ಡಲಾಗಿ ನಿರ್ಮಿಸಲಾದ ಈ ಡ್ಯಾಂ ಮೈತುಂಬಿ ನಿಂತಿದೆ. ಇಲ್ಲಿ ಬಾಗಿನ ಅರ್ಪಿಸಿದ ಬಳಿಕ ಕೃಷ್ಣ ಬೈರೇಗೌಡ ಅವರು ಕನ್ನಡ ಧ್ವಜಾರೋಹಣ ಮಾಡಿ ಕನ್ನಡ ರಾಜ್ಯೋತ್ಸವವನ್ನು ಆಚರಿಸಿದರು.
ಹಾಸನ, ನವೆಂಬರ್ 1: ಹಾಸನದಲ್ಲಿ ಹೇಮಾವತಿ ನದಿ ತುಂಬಿ ಹರಿಯುತ್ತಿದೆ. ಹೀಗಾಗಿ, ಇಂದು ಹಾಸನದ ಉಸ್ತುವಾರಿ ಸಚಿವ ಕೃಷ್ಣ ಬೈರೇಗೌಡ ಹೇಮಾವತಿ ಅಣ್ಣೆಕಟ್ಟಿಗೆ ಬಾಗಿನ ಅರ್ಪಿಸಿ, ಹೇಮಾವತಿ ಡ್ಯಾಂನ ಸೌಂದರ್ಯವನ್ನು ಕಣ್ತುಂಬಿಕೊಂಡಿದ್ದಾರೆ. ಹಾಸನ ಜಿಲ್ಲೆಯ ಗೊರೂರು ಬಳಿ ಹೇಮಾವತಿ ಜಲಾಶಯದ ಅಣೆಕಟ್ಟು ಇದೆ. ಕಾವೇರಿ ನದಿಯ ಉಪನದಿಯಾದ ಹೇಮಾವತಿಗೆ ಅಡ್ಡಲಾಗಿ ನಿರ್ಮಿಸಲಾದ ಈ ಡ್ಯಾಂ ಮೈತುಂಬಿ ನಿಂತಿದೆ. ಇಲ್ಲಿ ಬಾಗಿನ ಅರ್ಪಿಸಿದ ಬಳಿಕ ಕೃಷ್ಣ ಬೈರೇಗೌಡ ಅವರು ಕನ್ನಡ ಧ್ವಜಾರೋಹಣ ಮಾಡಿ ಕನ್ನಡ ರಾಜ್ಯೋತ್ಸವವನ್ನು ಆಚರಿಸಿದರು.
ಇನ್ನಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ
Published on: Nov 01, 2025 05:06 PM

