ಇದಪ್ಪ ಕಠಿಣ ಕ್ರಮ ಅಂದ್ರೆ: ಸಚಿವ ಕೃಷ್ಣಭೈರೇಗೌಡ ದಿಢೀರ್ ಪರಿಶೀಲನೆಗೆ ಮೊದಲ ವಿಕೆಟ್ ಪತನ

Updated on: Jun 20, 2026 | 8:17 PM

ಡಿಕೆ ಶಿವಕುಮಾರ್ ಅವರು ಸಿಎಂ ಆಗಿ ಅಧಿಕಾರ ಸ್ವೀಕರಿಸುತ್ತಿದ್ದಂತೆಯೇ ಅಧಿಕಾರಗಳ ಸಭೆ ನಡೆಸಿ ಭ್ರಷ್ಟಾಚಾರ ಮುಕ್ತ, ಪಾದರ್ಶಕ ಕಾರ್ಯ ಕೆಲಸದ ಬಗ್ಗೆ ಪಾಠ ಮಾಡಿದ್ದರು.ಇದರ ಮಧ್ಯೆ ರಾಜಧಾನಿ ಬೆಂಗಳೂರಿನಲ್ಲಿ ಅಧಿಕಾರಿಯೊಬ್ಬರ ಡಾಂಬರೀಕರಣ ಕಳ್ಳಾಟ ಬಯಲಿಗೆ ಬಂದಿದೆ. ಹಲವು ಗೊಂದಲಗಳ ನಡುವೆಯೇ ಬೆಂಗಳೂರು ನಗರಾಭಿವೃದ್ಧಿ ಸಚಿವರಾಗಿ ಅಧಿಕಾರ ಸ್ವೀಕಾರ ಮಾಡಿರುವ ಕೃಷ್ಣಬೈರೇಗೌಡ ಅವರು ಅಧಿಕಾರಿಯನ್ನು ಅಮಾನತು ಮಾಡಿದ್ದಾರೆ.

ಬೆಂಗಳೂರು, (ಜೂನ್ 20): ಹಲವು ಗೊಂದಲಗಳ ನಡುವೆಯೇ ಬೆಂಗಳೂರು ನಗರಾಭಿವೃದ್ಧಿ ಸಚಿವರಾಗಿ ಅಧಿಕಾರ ಸ್ವೀಕರಿಸಿದ್ದ ಕೃಷ್ಣಭೈರೇಗೌಡ ಅವರು ಮೊದಲ ಸಭೆಯಲ್ಲೇ ನಗರದ ರಸ್ತೆಗಳ ಬಗ್ಗೆ ಅಧಿಕಾರಿಗಳನ್ನ ತರಾಟೆಗೆ ತೆಗೆದುಕೊಂಡು ಬಿಸಿ ಮುಟ್ಟಿಸಿದ್ದರು. ಬೆಂಗಳೂರು ರಸ್ತೆ ಗುಂಡಿ ಮುಚ್ಚೋದು ರಾಕೆಟ್ ಸೈನ್ಸಾ? ಎಂದು ಜಿಬಿಎ ಅಧಿಕಾರಿಗಳ ಚಳಿ ಬಿಡಿಸಿದ್ದರು. ಇದರ ಮಧ್ಯೆಯೇ ಕೃಷ್ಣಭೈರೇಗೌಡ ದಿಢೀರ್ ಪರಿಶೀಲನೆಗೆ ಮೊದಲ ವಿಕೆಟ್ ಪತನವಾಗಿದೆ. ಹೌದು… ಕ್ರೆಸೆಂಟ್ ರಸ್ತೆಯ ಡಾಂಬರೀಕರಣದಲ್ಲಿ ಕಳ್ಳಾಟವಾಡಿ ಅಧಿಕಾರಿಯನ್ನು ಅಮಾನತು ಮಾಡಿದ್ದಾರೆ. ಸಂಪಂಗಿರಾಮನಗರ ಸಹಾಯಕ ಇಂಜಿನಿಯರ್ ಪೂಜಾರಪ್ಪ ಅಮಾನತುಗೊಂಡವರು.

ಸರಿಯಾದ ಪ್ರಮಾಣದಲ್ಲಿ ಮತ್ತು ದಪ್ಪ ಆಸ್ಪಾಲ್ಟಿಂಗ್ ಮಾಡದೇ ಅಸಡ್ಡೆ ಬೇಜವಾಬ್ದಾರಿತನದಿಂದ ಕರ್ತವ್ಯಲೋಪ ಹಿನ್ನಲೆಯಲ್ಲಿ ಎಇ ಪೂಜಾರಪ್ಪನನ್ನು ಜಿಬಿಎ ಅಮಾನತು ಮಾಡಿದೆ. ಅಲ್ಲದೇ ಕೃಷ್ಣಭೈರೇಗೌಡ ಅವರು, ರಸ್ತೆ ಮಾಡಿದ ಗುತ್ತಿಗೆದಾರರನ ಪೂರ್ಣ ವಿವರ ಕೇಳಿದ್ದು, ಜೊತೆಗೆ ಗುತ್ತಿಗೆದಾರರನ್ನು ಬ್ಲ್ಯಾಕ್ ಲಿಸ್ಟ ಸೇರ್ಪಡೆಗೆ ಸೂಚನೆ ನೀಡಿದ್ದಾರೆ.

ಇದನ್ನೂ ಓದಿ: ಗುಂಡಿ ಇಲ್ಲದ ರಸ್ತೆ ನಿರ್ಮಾಣ ರಾಕೆಟ್ ಸೈನ್ಸಾ? ಮೊದಲ ಸಭೆಯಲ್ಲೇ ಜಿಬಿಎ ಅಧಿಕಾರಿಗಳಿಗೆ ಕೃಷ್ಣ ಬೈರೇಗೌಡ ಕ್ಲಾಸ್

Published on: Jun 20, 2026 08:14 PM
Loading...
Unable to load recommendations.
Follow Us
ರಮೇಶ್ ಬಿ. ಜವಳಗೇರಾ

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More