ಸುರ್ಜೇವಾಲ ಸಂಧಾನ ಸಕ್ಸಸ್​​: 13 ದಿನಗಳ ನಂತರ ಖಾತೆ ವಹಿಸಿಕೊಂಡ ಕೃಷ್ಣ ಭೈರೇಗೌಡ

Edited By:

Updated on: Jun 16, 2026 | 12:01 PM

13 ದಿನಗಳ ಅಸಮಾಧಾನದ ನಂತರ ಸಚಿವ ಕೃಷ್ಣ ಭೈರೇಗೌಡ ಅವರು ಬೆಂಗಳೂರು ನಗರಾಭಿವೃದ್ಧಿ ಖಾತೆ ವಹಿಸಿಕೊಂಡಿದ್ದಾರೆ. ಜಿಬಿಎ ಕೇಂದ್ರ ಕಚೇರಿಯಲ್ಲಿ ನಡೆದ ಮೊದಲ ಸಭೆಯ ಅಧ್ಯಕ್ಷತೆ ವಹಿಸಿದ ಅವರು, ಮುಖ್ಯ ಆಯುಕ್ತ ಮಹೇಶ್ವರ್ ರಾವ್, ಐದು ಪಾಲಿಕೆಗಳ ಆಯುಕ್ತರು ಹಾಗೂ ಮುಖ್ಯ ಇಂಜಿನಿಯರ್‌ಗಳೊಂದಿಗೆ ನಗರದ ಅಭಿವೃದ್ಧಿ ಕುರಿತು ಪರಿಶೀಲನೆ ನಡೆಸಿದ್ದಾರೆ.

ಬೆಂಗಳೂರು, ಜೂನ್​​ 16: 13 ದಿನಗಳ ಅಸಮಾಧಾನದ ನಂತರ ಸಚಿವ ಕೃಷ್ಣ ಭೈರೇಗೌಡ ಅವರು ಬೆಂಗಳೂರು ನಗರಾಭಿವೃದ್ಧಿ ಖಾತೆಯ ಜವಾಬ್ದಾರಿಯನ್ನು ವಹಿಸಿಕೊಂಡಿದ್ದಾರೆ. ಖಾತೆ ಹಂಚಿಕೆಯಲ್ಲಿ ಪೂರ್ಣ ಪ್ರಮಾಣದ ಅಧಿಕಾರ ಸಿಕ್ಕಿಲ್ಲ ಎಂಬ ಕಾರಣಕ್ಕೆ ಅವರು ಬೇಸರಗೊಂಡಿದ್ದರು. ಆದರೆ ಸಚಿವರ ಮುನಿಸನ್ನು ಎಐಸಿಸಿ ಪ್ರಧಾನ ಕಾರ್ಯದರ್ಶಿ ಮತ್ತು ಕರ್ನಾಟಕ ಕಾಂಗ್ರೆಸ್​​ ಉಸ್ತುವಾರಿಯಾಗಿರುವ ಸುರ್ಜೇವಾಲ ತಣಿಸಿದ್ದಾರೆ. ಈ ಬೆನ್ನಲ್ಲೇ ಜಿಬಿಎ ಕೇಂದ್ರ ಕಚೇರಿಯಲ್ಲಿ ತಮ್ಮ ಅಧ್ಯಕ್ಷತೆಯಲ್ಲಿಯೇ ಮೊದಲ ಸಭೆಯನ್ನು ಸಚಿವ ಕೃಷ್ಣ ಭೈರೇಗೌಡ ನಡೆಸಿದ್ದಾರೆ. ಈ ಸಭೆಯಲ್ಲಿ ಜಿಬಿಎ ಮುಖ್ಯ ಆಯುಕ್ತ ಮಹೇಶ್ವರ್ ರಾವ್, ಬೆಂಗಳೂರಿನ ಐದು ಪಾಲಿಕೆಗಳ ಆಯುಕ್ತರು ಹಾಗೂ ಮುಖ್ಯ ಇಂಜಿನಿಯರ್‌ಗಳು ಭಾಗವಹಿಸಿದ್ದರು.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Published on: Jun 16, 2026 12:00 PM
Follow Us
ಕಿರಣ್​ ಸೂರ್ಯ

ಕಿರಣ್ ಸೂರ್ಯ (Kiran Surya) ಅವರು ಟಿವಿ9 ಕನ್ನಡ (TV9 Kannada) ವಾಹಿನಿಯಲ್ಲಿ ಹಿರಿಯ ವರದಿಗಾರರಾಗಿ (Senior Reporter) ಕಾರ್ಯನಿರ್ವಹಿಸುತ್ತಿದ್ದಾರೆ

Read More