ಮಂಗಳೂರು: ಜಿಲ್ಲಾಧಿಕಾರಿಗಳ ಕಚೇರಿ ನಿರ್ಮಾಣಕ್ಕೆ ನಿಗದಿತ ಮೊತ್ತಕ್ಕಿಂತ ಹೆಚ್ಚು ಖರ್ಚು ಮಾಡಿರುವ ಅಧಿಕಾರಿಗಳನ್ನು ಸಚಿವ ಕೃಷ್ಣ ಭೈರೇಗೌಡ ತರಾಟೆಗೆ ತೆಗೆದುಕೊಂಡರು!

ಅರುಣ್​ ಕುಮಾರ್​ ಬೆಳ್ಳಿ

Updated on: Aug 29, 2023 | 2:55 PM

ಮನ ಬಂದಂತೆ ಹಣ ಖರ್ಚು ಮಾಡಲು ಅದು ಯಾರ ಮನೆ ದುಡ್ಡು? ನಿಮ್ಮ ಮನೇದಾ ಇಲ್ಲ ನನ್ನ ಮನೇದಾ ಅಂತ ಅವರು ಮಂಗಳೂರು ನಗರ ಪಾಲಿಕೆಯ ಇಂಜಿನಿಯರಿಂಗ್ ಸಲಹೆಗಾರ ಧರ್ಮರಾಜ್​ಗೆ ಕೋಪದಲ್ಲಿ ಕೇಳಿತ್ತಿರುವುದನ್ನು ವಿಡಿಯೋದಲ್ಲಿ ನೋಡಬಹುದು. ಇದನ್ನೇ ನಾವು ಹೇಳುತ್ತಿರೋದು. ಸಿದ್ದರಾಮಯ್ಯ ಸರ್ಕಾರ ದುಂದುವೆಚ್ಚ, ಕಾಮಗಾರಿಗಳ ಮೇಲೆ ಅಗತ್ಯಕ್ಕಿಂತ ಹೆಚ್ಚಿನ ವೆಚ್ಚ ಮಾಡುವುದನ್ನು ನಿಲ್ಲಿಸಬೇಕಿದೆ.

ಮಂಗಳೂರು: ಸಿದ್ದರಾಮಯ್ಯ ಸರ್ಕಾರದ ಎಲ್ಲ ಮಂತ್ರಿಗಳು ಮತ್ತು ಶಾಸಕರು ಕಂದಾಯ ಸಚಿವ ಕೃಷ್ಣ ಬೈರೇಗೌಡ (Krishna Byre Gowda) ಅವರ ಮೈಂಡ್​ಸೆಟ್​ನೊಂದಿಗೆ ಕೆಲಸ ಮಾಡುವ ಅವಶ್ಯಕತೆಯಿದೆ ಮಾರಾಯ್ರೇ. ನಗರದ ಪಡೀಲ್ ನಲ್ಲಿ ಕಳೆದ 5 ವರ್ಷಗಳಿಂದ ನಿರ್ಮಾಣ ಹಂತದಲ್ಲಿರುವ ಜಿಲ್ಲಾಧಿಕಾರಿ ಕಚೇರಿ ಕಟ್ಟಡಕ್ಕೆ ಇಂದು ಭೇಟಿ ನೀಡಿದ ಸಚಿವರು; ಕಾಮಗಾರಿ ಆಮೆಗತಿಯಲ್ಲಿ (snail’s pace) ಸಾಗುತ್ತಿರುವುದಕ್ಕೆ ಮತ್ತು ನಿರ್ಮಾಣ ಕಾರ್ಯಕ್ಕೆ ನಿಗದಿತ ಮೊತ್ತಕ್ಕಿಂತ (stipulated budget) ಹೆಚ್ಚು ವೆಚ್ಚ ಮಾಡಿರುವುದಕ್ಕೆ ಲೋಕೋಪಯೋಗಿ ಇಲಾಖೆ ಅಧಿಕಾರಿಗಳ ಮೇಲೆ ಕಿಡಿಕಾರಿದರು. ಮನ ಬಂದಂತೆ ಹಣ ಖರ್ಚು ಮಾಡಲು ಅದು ಯಾರ ಮನೆ ದುಡ್ಡು? ನಿಮ್ಮ ಮನೇದಾ ಇಲ್ಲ ನನ್ನ ಮನೇದಾ ಅಂತ ಅವರು ಮಂಗಳೂರು ನಗರ ಪಾಲಿಕೆಯ ಇಂಜಿನಿಯರಿಂಗ್ ಸಲಹೆಗಾರ ಧರ್ಮರಾಜ್ ಗೆ (Dharmaraj) ಕೋಪದಲ್ಲಿ ಕೇಳಿತ್ತಿರುವುದನ್ನು ವಿಡಿಯೋದಲ್ಲಿ ನೋಡಬಹುದು. ಇದನ್ನೇ ನಾವು ಹೇಳುತ್ತಿರೋದು. ಸಿದ್ದರಾಮಯ್ಯ ಸರ್ಕಾರ ದುಂದುವೆಚ್ಚ, ಕಾಮಗಾರಿಗಳ ಮೇಲೆ ಅಗತ್ಯಕ್ಕಿಂತ ಹೆಚ್ಚಿನ ವೆಚ್ಚ ಮಾಡುವುದನ್ನು ನಿಲ್ಲಿಸಬೇಕಿದೆ. ಈ ವರ್ಷ ಕೊರತೆ ಮಳೆಯಿಂದ ಬರಗಾಲ ಕೂಡ ಘೋಷಣೆಯಾಗಲಿರುವುದರಿಂದ ವೆಚ್ಚಗಳ ಮೇಲೆ ಹಿಡಿತ ಸಾಧಿಸುವ ಜರೂರತ್ತಿದೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ಕಿಸಿ

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.