ಬೀದಿ ದೀಪ ಅಳವಡಿಸದ ಹಿನ್ನೆಲೆ ಜಿಬಿಎ ಸಭೆಯಲ್ಲಿ ಅಧಿಕಾರಿಗಳಿಗೆ ಸಚಿವ ಕೃಷ್ಣ ಭೈರೇಗೌಡ ಕ್ಲಾಸ್
ಬೆಂಗಳೂರು ಮಹಾನಗರದಲ್ಲಿನ ಎಲ್‌ಇಡಿ ಬೀದಿ ದೀಪಗಳ ನಿರ್ವಹಣೆ ಮತ್ತು ವಿದ್ಯುತ್ ಬಿಲ್ ಸಂಬಂಧಿಸಿದಂತೆ ಮೂಲಭೂತ ಮಾಹಿತಿ ನೀಡುವಲ್ಲಿ ವಿಫಲರಾದ ಅಧಿಕಾರಿಗಳಿಗೆ ಸಚಿವ ಕೃಷ್ಣಬೈರೇಗೌಡರು ಜಿಬಿಎ ಸಭೆಯಲ್ಲಿ ತೀವ್ರ ತರಾಟೆ ತೆಗೆದುಕೊಂಡಿದ್ದಾರೆ. ಸಭೆಗೆ ಸಿದ್ಧತೆಯಿಲ್ಲದೆ ಬರುವ ಅಧಿಕಾರಿಗಳ ವರ್ತನೆಗೆ ಸಚಿವರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಬೆಂಗಳೂರು, ಆಗಸ್ಟ್ 04: ಜಿಬಿಎ ಮುಖ್ಯ ಕಚೇರಿಯಲ್ಲಿ ಅಧಿಕಾರಿಗಳ ಜತೆ ಕೃಷ್ಣ ಭೈರೇಗೌಡ ಸಭೆ ನಡೆಸಿದ್ದು, ನಗರದಲ್ಲಿ ಬೀದಿ ದೀಪ ಅಳವಡಿಸದ ಹಿನ್ನೆಲೆ ಬೆಂಗಳೂರು ನಗರಾಭಿವೃದ್ಧಿ ಸಚಿವರು ಗರಂ ಆದ ಪ್ರಸಂಗ ನಡೆದಿದೆ. ಸಭೆಗೆ ಸಿದ್ಧತೆ ಇಲ್ಲದೆ ಬಂದಿದ್ದೀರೆಂದು ಅಧಿಕಾರಿಗಳಿಗೆ ಸಚಿವರು ತರಾಟೆಗೆ ಪಡೆದಿದ್ದು, ಬೇಸಿಕ್ ಡೇಟಾ ಇಲ್ಲ, ಪ್ರಶ್ನೆಗೆ ಉತ್ತರ ಇಲ್ಲ, ಸಿದ್ಧತೆಯೊಂದಿಗೆ ಬರಲಾಗಲ್ವಾ? ಡೇಟಾ ಇಲ್ಲದೆ ಬಂದಿದ್ದೀರಿ, ಸರ್ಕಾರಿ ಕೆಲಸ ಅಂದ್ರೆ ಕೈಬೀಸಿ ಬಂದು ಹೋಗೋದಲ್ಲ ಎಂದು ಇಂಜಿನಿಯರ್‌ಗಳ ನಿರ್ಲಕ್ಷ್ಯಕ್ಕೆ ಸಚಿವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಬೀದಿ ದೀಪ ಸಮಸ್ಯೆ ಬಗೆಹರಿಸುವಂತೆ ಇದೇ ವೇಳೆ ಅಧಿಕಾರಿಗಳಿಗೆ ಅವರು ಖಡಕ್ ಸೂಚನೆ ನೀಡಿದ್ದಾರೆ.
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.
Follow Us
Latest Videos
ರಿಷಬ್ ಶೆಟ್ಟಿ ಹೊಸ ಸಿನಿಮಾನಲ್ಲಿ ನಟಿಸಲು ನೂಕು ನುಗ್ಗಲು: ವಿಡಿಯೋ ನೋಡಿ
ಕಾಂಗ್ರೆಸ್ ಸೇವಾದಳದಿಂದ ಎಡವಟ್ಟು: ಉಲ್ಟಾ ಧ್ವಜ ನೀಡಿ ಅಧಿಕಾರ ಹಸ್ತಾಂತರ
ಉಪ್ಪಿನ ಕೇಕ್ ತಿಂದ ಶಾಸ್ತ್ರಿ, ಅದ್ಭುತ ನಟನೆ ಎಂದ ಕಿಚ್ಚ: ವಿಡಿಯೋ ನೋಡಿ
ಗಣಪತಿ ಮೂರ್ತಿ ಮೆರವಣಿಗೆಯಲ್ಲಿ ರಾರಾಜಿಸಿದ ಪೈಲಟ್ ಸ್ಮಿತ್ ಮಚ್ಚರ್ ಫೋಟೋ!

