ಬೀದಿ ದೀಪ ಅಳವಡಿಸದ ಹಿನ್ನೆಲೆ ಜಿಬಿಎ ಸಭೆಯಲ್ಲಿ ಅಧಿಕಾರಿಗಳಿಗೆ ಸಚಿವ ಕೃಷ್ಣ ಭೈರೇಗೌಡ ಕ್ಲಾಸ್​​

Updated on: Aug 04, 2026 | 5:55 PM

ಬೆಂಗಳೂರು ಮಹಾನಗರದಲ್ಲಿನ ಎಲ್‌ಇಡಿ ಬೀದಿ ದೀಪಗಳ ನಿರ್ವಹಣೆ ಮತ್ತು ವಿದ್ಯುತ್ ಬಿಲ್ ಸಂಬಂಧಿಸಿದಂತೆ ಮೂಲಭೂತ ಮಾಹಿತಿ ನೀಡುವಲ್ಲಿ ವಿಫಲರಾದ ಅಧಿಕಾರಿಗಳಿಗೆ ಸಚಿವ ಕೃಷ್ಣಬೈರೇಗೌಡರು ಜಿಬಿಎ ಸಭೆಯಲ್ಲಿ ತೀವ್ರ ತರಾಟೆ ತೆಗೆದುಕೊಂಡಿದ್ದಾರೆ. ಸಭೆಗೆ ಸಿದ್ಧತೆಯಿಲ್ಲದೆ ಬರುವ ಅಧಿಕಾರಿಗಳ ವರ್ತನೆಗೆ ಸಚಿವರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಬೆಂಗಳೂರು, ಆಗಸ್ಟ್​​ 04: ಜಿಬಿಎ ಮುಖ್ಯ ಕಚೇರಿಯಲ್ಲಿ ಅಧಿಕಾರಿಗಳ ಜತೆ ಕೃಷ್ಣ ಭೈರೇಗೌಡ ಸಭೆ ನಡೆಸಿದ್ದು, ನಗರದಲ್ಲಿ ಬೀದಿ ದೀಪ ಅಳವಡಿಸದ ಹಿನ್ನೆಲೆ ಬೆಂಗಳೂರು ನಗರಾಭಿವೃದ್ಧಿ ಸಚಿವರು ಗರಂ ಆದ ಪ್ರಸಂಗ ನಡೆದಿದೆ. ಸಭೆಗೆ ಸಿದ್ಧತೆ ಇಲ್ಲದೆ ಬಂದಿದ್ದೀರೆಂದು ಅಧಿಕಾರಿಗಳಿಗೆ ಸಚಿವರು ತರಾಟೆಗೆ ಪಡೆದಿದ್ದು, ಬೇಸಿಕ್ ಡೇಟಾ ಇಲ್ಲ, ಪ್ರಶ್ನೆಗೆ ಉತ್ತರ ಇಲ್ಲ, ಸಿದ್ಧತೆಯೊಂದಿಗೆ ಬರಲಾಗಲ್ವಾ? ಡೇಟಾ ಇಲ್ಲದೆ ಬಂದಿದ್ದೀರಿ, ಸರ್ಕಾರಿ ಕೆಲಸ ಅಂದ್ರೆ ಕೈಬೀಸಿ ಬಂದು ಹೋಗೋದಲ್ಲ ಎಂದು ಇಂಜಿನಿಯರ್‌ಗಳ ನಿರ್ಲಕ್ಷ್ಯಕ್ಕೆ ಸಚಿವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಬೀದಿ ದೀಪ ಸಮಸ್ಯೆ ಬಗೆಹರಿಸುವಂತೆ ಇದೇ ವೇಳೆ ಅಧಿಕಾರಿಗಳಿಗೆ ಅವರು ಖಡಕ್ ಸೂಚನೆ ನೀಡಿದ್ದಾರೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Loading...
Unable to load recommendations.
Follow Us
ಪ್ರಸನ್ನ ಹೆಗಡೆ

ಪ್ರಸನ್ನ ಹೆಗಡೆ ಹುಟ್ಟಿದ್ದು ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕು. 9 ವರ್ಷಗಳಿಂದ ಪತ್ರಕರ್ತನಾಗಿ ಕೆಲಸ ಮಾಡಿರುವ ಅನುಭವವಿದೆ. ಮುದ್ರಣ, ಟಿವಿ ಮತ್ತು ಡಿಜಿಟಲ್​ ಮಾಧ್ಯಮಗಳಲ್ಲಿ ವಿವಿಧ ಜವಾಬ್ದಾರಿ ನಿಭಾಯಿಸಿದ್ದೇನೆ. ರಾಜಕೀಯ, ಸಿನಿಮಾ ವಿಷಯಗಳಲ್ಲಿ ಹೆಚ್ಚಿನ ಆಸಕ್ತಿ ಇದೆ. ಕವನಗಳ ರಚನೆ, ಪುಸ್ತಕಗಳನ್ನ ಓದುವುದು ನೆಚ್ಚಿನ ಹವ್ಯಾಸಗಳು.

Read More