ಸತೀಶ್ ಜಾರಕಿಹೊಳಿಯನ್ನು ‘ಕ್ಲೀನ್ ಬೋಲ್ಡ್’ ಮಾಡಿದ ಲಕ್ಷ್ಮೀ ಹೆಬ್ಬಾಳಕರ್..!

Edited By:

Updated on: Feb 06, 2026 | 3:13 PM

ರಾಜಕೀಯದ ಜಂಜಾಟ, ಅಧಿಕಾರದ ಒತ್ತಡಗಳನ್ನು ಬದಿಗಿಟ್ಟು ಬೆಳಗಾವಿಯ (Belagavi)  ಪ್ರಭಾವಿ ಕಾಂಗ್ರೆಸ್ ನಾಯಕರು ಇಂದು (ಫೆಬ್ರವರಿ 06) ಕ್ರಿಕೆಟ್ ಆಟವಾಡಿ ಗಮನ ಸೆಳೆದಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ (Satish Jarkiholi)  ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳಕರ್  ಅವರ 'ಬಾಕ್ಸ್ ಕ್ರಿಕೆಟ್'  ನೆರೆದಿದ್ದ ಜನರಿಗೆ ಭರಪೂರ ಮನರಂಜನೆ ನೀಡಿದೆ.  ಹೌದು.. ಬೆಳಗಾವಿಯಲ್ಲಿ ಬಾಲಭವನ ವತಿಯಿಂದ ನಿರ್ಮಿಸಲಾದ ನೂತನ ಬಾಕ್ಸ್ ಕ್ರಿಕೆಟ್ ಮೈದಾನದ ಉದ್ಘಾಟನೆ  ನೆರವೇರಿತು. ಉದ್ಘಾಟನೆಯ ಪ್ರಯುಕ್ತ ಸಚಿವ ಸತೀಶ್ ಜಾರಕಿಹೊಳಿ ಬ್ಯಾಟಿಂಗ್‌ಗೆ ಇಳಿದರು.  ಮತ್ತೊಂದೆಡೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಮಾಡಿದ ಬೌಲಿಂಗ್​​​​ಗೆ  ಸತೀಶ್ ಜಾರಕಿಹೊಳಿ 'ಕ್ಲೀನ್ ಬೋಲ್ಡ್' ಆಗಿದ್ದಾರೆ. ಇದನ್ನು ಕಂಡ ನೆರೆದಿದ್ದ ಕಾರ್ಯಕರ್ತರು ಮತ್ತು ಜನರು ಶಿಳ್ಳೆ, ಚಪ್ಪಾಳೆ ತಟ್ಟಿದರು.

ಬೆಳಗಾವಿ, (ಫೆಬ್ರವರಿ 06): ರಾಜಕೀಯದ ಜಂಜಾಟ, ಅಧಿಕಾರದ ಒತ್ತಡಗಳನ್ನು ಬದಿಗಿಟ್ಟು ಬೆಳಗಾವಿಯ (Belagavi)  ಪ್ರಭಾವಿ ಕಾಂಗ್ರೆಸ್ ನಾಯಕರು ಇಂದು (ಫೆಬ್ರವರಿ 06) ಕ್ರಿಕೆಟ್ ಆಟವಾಡಿ ಗಮನ ಸೆಳೆದಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ (Satish Jarkiholi)  ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳಕರ್  ಅವರ ‘ಬಾಕ್ಸ್ ಕ್ರಿಕೆಟ್’  ನೆರೆದಿದ್ದ ಜನರಿಗೆ ಭರಪೂರ ಮನರಂಜನೆ ನೀಡಿದೆ.  ಹೌದು.. ಬೆಳಗಾವಿಯಲ್ಲಿ ಬಾಲಭವನ ವತಿಯಿಂದ ನಿರ್ಮಿಸಲಾದ ನೂತನ ಬಾಕ್ಸ್ ಕ್ರಿಕೆಟ್ ಮೈದಾನದ ಉದ್ಘಾಟನೆ  ನೆರವೇರಿತು. ಉದ್ಘಾಟನೆಯ ಪ್ರಯುಕ್ತ ಸಚಿವ ಸತೀಶ್ ಜಾರಕಿಹೊಳಿ ಬ್ಯಾಟಿಂಗ್‌ಗೆ ಇಳಿದರು.  ಮತ್ತೊಂದೆಡೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಮಾಡಿದ ಬೌಲಿಂಗ್​​​​ಗೆ  ಸತೀಶ್ ಜಾರಕಿಹೊಳಿ ‘ಕ್ಲೀನ್ ಬೋಲ್ಡ್’ ಆಗಿದ್ದಾರೆ. ಇದನ್ನು ಕಂಡ ನೆರೆದಿದ್ದ ಕಾರ್ಯಕರ್ತರು ಮತ್ತು ಜನರು ಶಿಳ್ಳೆ, ಚಪ್ಪಾಳೆ ತಟ್ಟಿದರು.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ಸಹದೇವ್​ ಮಾನೆ

ಸಹದೇವ ಯಲ್ಲಪ್ಪ ಮಾನೆ. ಹುಟ್ಟಿದ್ದು ಧಾರವಾಡ ತಾಲೂಕಿನ ಗುಳೇದಕೊಪ್ಪ ಗ್ರಾಮ. ಕರ್ನಾಟಕ ವಿಶ್ವ ವಿದ್ಯಾಲಯದಲ್ಲಿ ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದು, ಕಳೆದ 12 ವರ್ಷದಿಂದ ಟಿವಿ ಮಾಧ್ಯಮದಲ್ಲಿ ಕೆಲಸ ನಿರ್ವಹಿಸುತ್ತಿದ್ದೇನೆ. 2014ರಲ್ಲಿ ಬೀದರ್ ಜಿಲ್ಲೆಯಿಂದ ವೃತ್ತಿ ಜೀವನ ಪ್ರಾರಂಭ ಮಾಡಿ ಕಲಬುರಗಿ, ಹುಬ್ಬಳ್ಳಿಯಲ್ಲಿ ಕೆಲಸ ಮಾಡಿ ಸದ್ಯ ‘ಟಿವಿ9’ ಕನ್ನಡ ಸುದ್ದಿ ವಾಹಿನಿಯಲ್ಲಿ 9ವರ್ಷಗಳಿಂದ ಬೆಳಗಾವಿ ಜಿಲ್ಲೆಯಲ್ಲಿ ಹಿರಿಯ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದೇನೆ. ಬೀದರ್ ಜಿಲ್ಲೆಯಲ್ಲಿ ಅತ್ಯುತ್ತಮ ಜಿಲ್ಲಾ ವರದಿಗಾರ ಪ್ರಶಸ್ತಿ ಪಡೆದಿದ್ದು, ಗಡಿ ಜಿಲ್ಲೆ ಬೆಳಗಾವಿಯಲ್ಲಿ ಜಿಲ್ಲಾ ಮಟ್ಟದ ರಾಜ್ಯೋತ್ಸವ ಪ್ರಶಸ್ತಿ ಕೂಡ ದೊರೆತಿದೆ. ರೈತರ ಸಮಸ್ಯೆಗಳತ್ತ ಬೆಳಕು ಚೆಲ್ಲುವ ವರದಿ ಸೇರಿ ಗಡಿ ಸಮಸ್ಯೆ, ಕ್ರೈಮ್, ಪ್ರವಾಹ ಪರಿಸ್ಥಿತಿ, ನೆರೆಯ ಮಹಾರಾಷ್ಟ್ರ, ಗೋವಾದಲ್ಲಿನ ಬೆಳವಣಿಗೆ ಕುರಿತು ವರದಿ ಮಾಡುತ್ತಿರುವುದು ವಿಶೇಷ.

Read More