Loading video

ಇನ್ನು 8-10 ದಿನಗಳಲ್ಲಿ ಗೃಹಲಕ್ಷ್ಮಿ ಯೋಜನೆ ಫಲಾನುಭವಿಗಳಿಗೆ ಹಣ ವರ್ಗಾಯಿಸುವ ಭರವಸೆ ನೀಡಿದ ಲಕ್ಷ್ಮಿ ಹೆಬ್ಬಾಳ್ಕರ್

|

Updated on: Feb 21, 2025 | 12:42 PM

ಕಾರು ಅಪಘಾತದ ಸಂಗತಿಯನ್ನು ಲಕ್ಷ್ಮಿ ಹೆಬ್ಬಾಳ್ಕರ್ ಹೇಳುತ್ತಾರೆ. ಅದರೆ ಅದಕ್ಕೂ ಮೊದಲಿನ ಎರಡು ತಿಂಗಳು ಗೃಹಲಕ್ಷ್ಮಿ ಫಲಾನುಭವಿಗಳಿಗೆ ಹಣ ಸಿಕ್ಲಿಲ್ಲ. ತಾಂತ್ರಿಕ ಸಮಸ್ಯೆ ಮತ್ತು ಹಣ ಬದಲಾಯಿಸುವ ವಿಧಾನದಲ್ಲಿ ತಂದಿರುವ ಬದಲಾವಣೆಗಳು ಹಣ ಬಿಡುಗಡೆ ವಿಳಂಬಕ್ಕೆ ಕಾರಣವೆಂದು ಸಚಿವೆ ಹೇಳುತ್ತಾರೆ. ಕಾರಣಗಳೇನೇ ಇರಲಿ, ತಡವಂತೂ ಆಗಿದೆ ಮತ್ತು ಮಹಿಳೆಯರು ಸರ್ಕಾರವನ್ನು ಶಪಿಸುತ್ತಿದ್ದಾರೆ, ಅದನ್ನು ಸಚಿವೆ ಅರ್ಥಮಾಡಿಕೊಳ್ಳಬೇಕು.

ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಖಾತೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಚೇತರಿಸಿಕೊಂಡಿದ್ದಾರೆ ಮತ್ತು ನಮ್ಮ ಬೆಳಗಾವಿ ವರದಿಗಾರನೊಂದಿಗೆ ಮಾತಾಡಿದ್ದಾರೆ. ಗೃಹಲಕ್ಷ್ಮಿ ಯೋಜನೆಯ ದುಡ್ಡು ಮೂರ್ನಾಲ್ಕು ತಿಂಗಳುಗಳಿಂದ ಬಂದಿಲ್ಲವೆಂದು ರಾಜ್ಯದಾದ್ಯಂತ ಮಹಿಳೆಯರು ರೊಚ್ಚಿಗೆದ್ದಿದ್ದಾರೆ. ಇದಕ್ಕೆ ಸ್ಪಷ್ಟನೆ ನೀಡಿರುವ ಸಚಿವೆ ತಾನು ಕಾರು ಅಪಘಾತದಿಂದಾಗಿ ಒಂದು ತಿಂಗಳಿಗೂ ಹೆಚ್ಚು ಅವಧಿಗೆ ಆಸ್ಪತ್ರೆ ಮತ್ತು ಮನೆಯಲ್ಲೇ ಉಳಿಯುವಂತಾಗಿದ್ದರಿಂದ ಹಣ ವರ್ಗಾವಣೆ ವಿಳಂಬವಾಗಿರುವುದಕ್ಕೆ ಒಂದು ಕಾರಣವಾಗಿದೆ. ತಾನು ಕಚೇರಿಯಲ್ಲಿದಿದ್ದರೆ ಹಣಕಾಸು ಇಲಾಖೆ ಮೇಲೆ ನಿರಂತರವಾಗಿ ಒತ್ತಡ ಹಾಕಿ ಹಣ ಬಿಡುಗಡೆ ಮಾಡಿಸಲು ಪ್ರಯತ್ನಿಸುತ್ತಿದ್ದೆ, ಗೃಹಲಕ್ಷ್ಮಿಯರು ಆತಂಕಪಡುವ ಅಗತ್ಯವಿಲ್ಲ, ಬಜೆಟ್ ಅಧಿವೇಶನದಲ್ಲಿ ಭಾಗಿಯಾಗಲು ಬೆಂಗಳೂರಿಗೆ ಹೋಗುತ್ತಿರುವೆ, ಎಂಟ್ಹತ್ತು ದಿನಗಳಲ್ಲಿ ಹಣವನ್ನು ಫಲಾನುಭವಿಗಳ ಖಾತೆಗೆ ಹಾಕಿಸುವುದಾಗಿ ಸಚಿವೆ ಹೇಳುತ್ತಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:  ಗೃಹಲಕ್ಷ್ಮಿ, ಅನ್ನಭಾಗ್ಯ ಹಣವೇನು ತಿಂಗಳ ಸಂಬಳ ಅಲ್ವಲ್ಲಾ: ಸಚಿವ ಜಾರ್ಜ್ ಉಡಾಫೆ ಉತ್ತರ