ಸಿಟಿ ರವಿ ಬಂಧನ, ಟಿವಿ9 ಪ್ರತಿನಿಧಿಗೆ ಪ್ರತಿಕ್ರಿಯೆ ನೀಡಲು ನಿರಾಕರಿಸಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್
ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಸಿಟಿ ರವಿ ವಿರುದ್ಧ ಸಭಾಪತಿ ಮತ್ತು ಪೊಲೀಸರಿಗೆ ದೂರು ನೀಡಿದಾಗಲೇ ಅವರ ಬಂಧನ ಹೆಚ್ಚು ಕಡಿಮೆ ಖಚಿತವಾಗಿತ್ತು. ಬೆಳಗಾವಿಯಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ, ರವಿ ಬಳಸಿದ ಪದ ಕ್ರಿಮಿನಲ್ ಅಫೆನ್ಸ್ ಅನಿಸಿಕೊಳ್ಳುತ್ತದೆ ಅಂತ ಹೇಳಿದ್ದರು. ಮಾತಾಡುವಾಗ ಎಚ್ಚರತಪ್ಪದ ರವಿ ಅದ್ಯಾಕೆ ಈ ಬಾರಿ ಜನರ ನಿರೀಕ್ಷೆಗೆ ವಿರುದ್ಧ ಹೋದರು ಅನ್ನೋದೇ ಯಕ್ಷಪ್ರಶ್ನೆ.
ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರ ವಿರುದ್ಧ ವಿಧಾನ ಪರಿಷತ್ ನಲ್ಲಿ ಬಳಸಿದ ಅವಾಚ್ಯ ಶಬ್ದದ ಹಿನ್ನೆಲೆಯಲ್ಲಿ ಬಿಜೆಪಿಯ ವಿಧಾನ ಪರಿಷತ್ ಸದಸ್ಯ ಸಿಟಿ ರವಿ ಅವರನ್ನು ಬೆಳಗಾವಿ ಪೊಲೀಸರು ಬಂಧಿಸಿ ಪೊಲೀಸ್ ಠಾಣೆಗೆ ಕರೆದೊಯ್ದಿದ್ದಾರೆ. ಇದೇ ಹಿನ್ನೆಲೆಯಲ್ಲಿ ಸಚಿವೆ ಹೆಬ್ಬಾಳ್ಕರ್ ಅವರನ್ನು ನಮ್ಮ ಪ್ರತಿನಿಧಿ ಬೆಳಗಾವಿ ಸುವರ್ಣ ಸೌಧದಲ್ಲಿ ಸಂಪರ್ಕಿಸಿದಾಗ, ಮ್ಲಾನವದನದನರಾಗಿ ಕಂಡ ಅವರು, ಮನಸ್ಸಿಗೆ ಬಹಳ ನೋವಾಗಿದೆ, ಇವತ್ತು ಮಾತಾಡಲಾಗಲ್ಲ, ನಾಳೆ ಮಾತಾಡುವೆ ಎಂದು ಹೇಳಿದರು.
ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
ಇದನ್ನೂ ಓದಿ: ಲಕ್ಷ್ಮೀ ಹೆಬ್ಬಾಳ್ಕರ್ಗೆ ಅಶ್ಲೀಲ ಪದದಿಂದ ನಿಂದನೆ ಆರೋಪ : ಸಿಟಿ ರವಿ ವಿರುದ್ಧ ಎಫ್ಐಆರ್