ನನ್ನ ಅತ್ತೆ ಹೊಡದಿದ್ದಾರೆ… ಮಹಿಳಾ ಸಾಂತ್ವಾನ ಸಹಾಯವಾಣಿ ಕೇಂದ್ರಕ್ಕೆ ಕರೆ ಮಾಡಿದ ಸಚಿವೆ ಹೆಬ್ಬಾಳ್ಕರ್

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವ ಲಕ್ಷ್ಮೀ ಹೆಬ್ಬಾಳರ್​​ ಇಂದು (ಸೆಪ್ಟೆಂಬರ್ 03) ತುಮಕೂರಿನಲ್ಲಿ ಸಭೆ ಮಾಡಿದ್ದು, ಇಲಾಖೆಯ ಸಹಾಯವಾಣಿ ಕಾರ್ಯಕ್ಷಮತೆ ಪರಿಶೀಲಿಸಿದರು. ಅಲ್ಲದೇ ರಿಯಾಲಿಟಿ ಚೆಕ್ ಮಾಡಲು ಮಹಿಳಾ ಸಾಂತ್ವಾನ ಸಹಾಯವಾಣಿ ಕೇಂದ್ರಕ್ಕೆ ಕರೆ ಸಮಸ್ಯೆ ಹೇಳಿಕೊಂಡರು.

ನನ್ನ ಅತ್ತೆ ಹೊಡದಿದ್ದಾರೆ... ಮಹಿಳಾ ಸಾಂತ್ವಾನ ಸಹಾಯವಾಣಿ ಕೇಂದ್ರಕ್ಕೆ ಕರೆ ಮಾಡಿದ ಸಚಿವೆ ಹೆಬ್ಬಾಳ್ಕರ್
| Updated By: ರಮೇಶ್ ಬಿ. ಜವಳಗೇರಾ

Updated on: Sep 03, 2024 | 5:12 PM

ತುಮಕೂರು, (ಸೆಪ್ಟೆಂಬರ್ 03): ಮಹಿಳಾ ಸಾಂತ್ವಾನ ಸಹಾಯವಾಣಿ ಸಕ್ರಿಯವಾಗಿದ್ಯಾ ಇಲ್ಲ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್​ ರಿಯಾಲಿಟಿ ಚೆಕ್ ಮಾಡಿದರು. ತುಮಕೂರು ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ನಡೆದ ಸಭೆಯಲ್ಲೇ ಜಿಲ್ಲಾಧಿಕಾರಿ ಫೋನ್​ನಿಂದ ಕರೆ ಮಾಡಿದ ಸಹಾಯವಾಣಿ ಕಾರ್ಯಕ್ಷಮತೆ ಪರಿಶೀಲಿಸಿದರು. ಕರೆ ಮಾಡುವ ಮೊದಲು ದಿನದ 24 ಗಂಟೆ ಸಹಾಯವಾಣಿ ಕೆಲಸ ಮಾಡುತ್ತದೆಯೇ ಎಂದು ಜಿಲ್ಲಾ ಮಹಿಳಾ ಮತ್ತು ಮಕ್ಕಳ‌ಕಲ್ಯಾಣ ಇಲಾಖೆ ಅಧಿಕಾರಿಗೆ ಪ್ರಶ್ನಿಸಿದರು. ಇದಕ್ಕೆ ಉತ್ತರಿಸಿದ ಅಧಿಕಾರಿ, ಸಹಾಯವಾಣಿ ವಿಭಾಗದಲ್ಲಿ ನಾಲ್ವರು ಕೆಲಸ ಮಾಡುತ್ತಾರೆ.‌ ಹಗಲು ರಾತ್ರಿ ಪಾಳಯದಲ್ಲಿ ಕೆಲಸ ಮಾಡುತ್ತಾರೆ. ಸಹಾಯವಾಣಿಯ ದೂರವಾಣಿ 24 ಗಂಟೆ ಸಕ್ರಿಯವಾಗಿರುತ್ತೆ ಎಂದರು. ಬಳಿಕ ರಿಯಾಲಿಟಿ ಚೆಕ್​ ಮಾಡಲು ಸಭೆಯಲ್ಲೇ ಸಹಾಯವಾಣಿಗೆ ಕರೆ ಮಾಡಿದರು.

ಮಹಿಳಾ ಸಾಂತ್ವಾನ ಸಹಾಯವಾಣಿಗೆ ಕರೆ ಮಾಡಿ ಸರ್ ನಾನು ಶಿರಾದಿಂದ ಕಾಲ್ ಮಾಡ್ತಿದ್ದೀನಿ. ನಮ್ಮ ಅತ್ತೆ ಹೊಡೆದಿದ್ದಾರೆ. ಸಹಾಯ ಮಾಡ್ತೀರಾ ಎಂದು ಕೇಳಿದರು. ಆಗ ಅತ್ತ ಸಹಾಯವಾಣಿ ಸಿಬ್ಬಂದಿ, ಬೆಳಗ್ಗೆ ಬಂದಿದ್ದವ್ರಾ ನೀವು ಎಂದು ಲಕ್ಷ್ಮೀ ಹೆಬ್ಬಾಳ್ಕರ್​ಗೆ ಕೇಳಿದ್ದಾರೆ. ಇಲ್ಲ ನಾನು ಈಗಷ್ಟೇ ಕಾಲ್ ಮಾಡಿದ್ದೇನೆ ಎಂದ ಸಚಿವೆ ಉತ್ತರಿಸಿದರು. ಕೊನೆಗೆ ಕರೆ ಸ್ವೀಕರಿಸಿದ ಸಿಬ್ಬಂದಿಗೆ ನಾನು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಎಂದು ಪರಿಚಯ ಹೇಳಿಕೊಂಡರು. ಅಲ್ಲದೇ ಸಹಾಯವಾಣಿ ಸಕ್ರಿಯವಾಗಿದ್ದಕ್ಕೆ ಅಭಿನಂದನೆ ತಿಳಿಸಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow us
ಐಫೋನ್ 15 ಮೇಲೆ ₹10,000 ದರ ಕಡಿತ ಘೋಷಿಸಿದ ಆ್ಯಪಲ್!
ಐಫೋನ್ 15 ಮೇಲೆ ₹10,000 ದರ ಕಡಿತ ಘೋಷಿಸಿದ ಆ್ಯಪಲ್!
ಗಣೇಶ ಮೆರವಣಿಗೆ ವೇಳೆ ಕಲ್ಲೆಸೆತ: ಪ್ರತ್ಯಕ್ಷದರ್ಶಿಗಳಿಂದ ವಿವರವಾದ ಮಾಹಿತಿ
ಗಣೇಶ ಮೆರವಣಿಗೆ ವೇಳೆ ಕಲ್ಲೆಸೆತ: ಪ್ರತ್ಯಕ್ಷದರ್ಶಿಗಳಿಂದ ವಿವರವಾದ ಮಾಹಿತಿ
ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ, ನಾಗಮಂಗಲದಲ್ಲಿ ಹೇಗಿದೆ ಈಗ ಪರಿಸ್ಥಿತಿ?
ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ, ನಾಗಮಂಗಲದಲ್ಲಿ ಹೇಗಿದೆ ಈಗ ಪರಿಸ್ಥಿತಿ?
ಮಂಡ್ಯ ಹಿಂಸಾಚಾರ: ನಾಗಮಂಗಲ ಘಟನೆ ಬಗ್ಗೆ ಎಸ್​ಪಿ ಹೇಳಿದ್ದೇನು ನೋಡಿ
ಮಂಡ್ಯ ಹಿಂಸಾಚಾರ: ನಾಗಮಂಗಲ ಘಟನೆ ಬಗ್ಗೆ ಎಸ್​ಪಿ ಹೇಳಿದ್ದೇನು ನೋಡಿ
‘ಕಿರುಕುಳ ಆದಾಗಲೇ ಹೇಳಿ, ಐದು ವರ್ಷ ಬಿಟ್ಟೇಕೆ ಬರುತ್ತೀರಿ’; ನಟಿಯ ಪ್ರಶ್ನೆ
‘ಕಿರುಕುಳ ಆದಾಗಲೇ ಹೇಳಿ, ಐದು ವರ್ಷ ಬಿಟ್ಟೇಕೆ ಬರುತ್ತೀರಿ’; ನಟಿಯ ಪ್ರಶ್ನೆ
ಸಾವಿನ ಮನೆಯಲ್ಲಿ ಪಾಲಿಸಬೇಕಾದ ಶಿಷ್ಟಾಚಾರ
ಸಾವಿನ ಮನೆಯಲ್ಲಿ ಪಾಲಿಸಬೇಕಾದ ಶಿಷ್ಟಾಚಾರ
Nithya Bhavishya: ಭಾದ್ರಪದ ಮಾಸದ ಗುರುವಾರದ ದಿನಭವಿಷ್ಯ ತಿಳಿಯಿರಿ
Nithya Bhavishya: ಭಾದ್ರಪದ ಮಾಸದ ಗುರುವಾರದ ದಿನಭವಿಷ್ಯ ತಿಳಿಯಿರಿ
ಚಿತ್ರರಂಗದಲ್ಲಿ ನಟಿಯರ ನಡುವೆ ತಾರತಮ್ಯ: ಅಸಲಿ ವಿಚಾರ ತಿಳಿಸಿದ ಸಾಕ್ಷಿ ಮೇಘನ
ಚಿತ್ರರಂಗದಲ್ಲಿ ನಟಿಯರ ನಡುವೆ ತಾರತಮ್ಯ: ಅಸಲಿ ವಿಚಾರ ತಿಳಿಸಿದ ಸಾಕ್ಷಿ ಮೇಘನ
ಸಿನಿಮಾ ಬಿಡುಗಡೆ ಸಮಯದಲ್ಲಿ ನಟ ಕಿರಣ್ ರಾಜ್​ ಕಾರು ಅಪಘಾತ ಆಗಿದ್ದು ನಿಜವೇ?
ಸಿನಿಮಾ ಬಿಡುಗಡೆ ಸಮಯದಲ್ಲಿ ನಟ ಕಿರಣ್ ರಾಜ್​ ಕಾರು ಅಪಘಾತ ಆಗಿದ್ದು ನಿಜವೇ?
ಸಿಎಂ ಕುರ್ಚಿ ಖಾಲಿ ಇಲ್ಲ: ನಾನೇ ಮುಂದುವರಿಯುತ್ತೇನೆ ಎಂದ ಸಿದ್ದರಾಮಯ್ಯ
ಸಿಎಂ ಕುರ್ಚಿ ಖಾಲಿ ಇಲ್ಲ: ನಾನೇ ಮುಂದುವರಿಯುತ್ತೇನೆ ಎಂದ ಸಿದ್ದರಾಮಯ್ಯ