ವಿಪತ್ತು ನಿರ್ವಹಣಾ ಸಭೆಗೆ ಗೈರಾದ ಹೆಸ್ಕಾಂ ಅಧಿಕಾರಿ ವಿರುದ್ಧ ಎಂ.ಬಿ. ಪಾಟೀಲ್ ಗರಂ

Edited By:

Updated on: Jun 30, 2026 | 5:05 PM

ಮುಖ್ಯಾಂಶಗಳು

  • ಬಾಗಲಕೋಟೆಯಲ್ಲಿ ಎಂ.ಬಿ. ಪಾಟೀಲ್ ನೇತೃತ್ಬದಲ್ಲಿ ವಿಪತ್ತು ನಿರ್ವಹಣಾ ಸಭೆ
  • ಸಭೆಗೆ ಗೈರಾದ ಹೆಸ್ಕಾಂ ಕಾರ್ಯನಿರ್ವಾಹಕ ಇಂಜಿನಿಯರ್ ವಿರುದ್ಧ ಸಚಿವರು ಗರಂ
  • ಹೆಸ್ಕಾಂ ಅಧಿಕಾರಿಗಳಿಗೆ ಸಭೆಯಲ್ಲೇ ಖಡಕ್​​ ಎಚ್ಚರಿಕೆ ಕೊಟ್ಟ ಸಚಿವ ಎಂ.ಬಿ. ಪಾಟೀಲ್ಲ

ಸಚಿವ ಎಂ.ಬಿ. ಪಾಟೀಲ್ ಅವರು ಬಾಗಲಕೋಟೆಯಲ್ಲಿ ನಡೆದ ವಿಪತ್ತು ನಿರ್ವಹಣಾ ಸಭೆಗೆ ಗೈರಾದ ಹೆಸ್ಕಾಂ ಕಾರ್ಯನಿರ್ವಾಹಕ ಇಂಜಿನಿಯರ್‌ ವಿರುದ್ಧ ಗರಂ ಆದ ಪ್ರಸಂಗ ನಡೆದಿದೆ. ಬಾಗಲಕೋಟೆ ‌ಪಟ್ಟಣ ಅಭಿವೃದ್ಧಿ ಪ್ರಾಧಿಕಾರ ವ್ಯಾಪ್ತಿಯ ನೀರು ಸರಬರಾಜಿಗೆ ವಿದ್ಯುತ್ ಸಂಪರ್ಕ ಕಲ್ಪಿಸದ ಹಿನ್ನೆಲೆ ಕಠಿಣ ಕ್ರಮದ ಎಚ್ಚರಿಕೆಯನ್ನು ಅಧಿಕಾರಿಗಳಿಗೆ ಅವರು ನೀಡಿದ್ದಾರೆ.

ಬಾಗಲಕೋಟೆ, ಜೂನ್​​ 30: ಸಚಿವ ಎಂ.ಬಿ. ಪಾಟೀಲ್ ಅವರು ಬಾಗಲಕೋಟೆಯಲ್ಲಿ ನಡೆದ ವಿಪತ್ತು ನಿರ್ವಹಣಾ ಸಭೆಯ ಸಂದರ್ಭದಲ್ಲಿ ಹೆಸ್ಕಾಂ ಅಧಿಕಾರಿಗಳ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿ ತರಾಟೆಗೆ ತೆಗೆದುಕೊಂಡ ಪ್ರಸಂಗ ನಡೆದಿದೆ. ಸಭೆಗೆ ಹೆಸ್ಕಾಂ ಕಾರ್ಯನಿರ್ವಾಹಕ ಇಂಜಿನಿಯರ್ (EE) ಗೈರಾದ ವಿಚಾರ ಗಮನಕ್ಕೆ ಬಂದ ಕೂಡಲೇ, ನಿಮ್ಮ ಅಧಿಕಾರಿ ಯಾಕೆ ಸಭೆಗೆ ಬಂದಿಲ್ಲ ಎಂದು ಪ್ರಶ್ನಿಸಿ ಸಚಿವರು ಸಿಟ್ಟಾಗಿದ್ದಾರೆ. ಬಾಗಲಕೋಟೆ ‌ಪಟ್ಟಣ ಅಭಿವೃದ್ಧಿ ಪ್ರಾಧಿಕಾರ ವ್ಯಾಪ್ತಿಯ ನೀರು ಸರಬರಾಜಿಗೆ ವಿದ್ಯುತ್ ಸಂಪರ್ಕ ಕಲ್ಪಿಸದ ಹಿನ್ನೆಲೆ ಹೆಸ್ಕಾಂ ಅಧಿಕಾರಿಗಳನ್ನು ಸಚಿವರು ತರಾಟೆಗೆ ಪಡೆದಿದ್ದು, ಒಂದೂವರೆ ತಿಂಗಳಾದರೂ ಆರ್‌. ‌ಆರ್‌. ನಂಬರ್​​ ಕೊಟ್ಟಿಲ್ಲ. ಒಂದೂವರೆ ವರ್ಷದಿಂದ ಹೀಗೆ ಕೆಲಸ ಮಾಡ್ತಿದಿರಾ ಎಂದು ಹೇಳಿದ ಎಂ.ಬಿ. ಪಾಟೀಲ್​​, ಈ ಸಂಬಂಧ ಅಧಿಕಾರಿಗಳಿಗೆ ಖಡಕ್​​ ಎಚ್ಚರಿಕೆ ನೀಡಿದ್ದಾರೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Loading...
Unable to load recommendations.
Follow Us
ರವಿ ಹೆಚ್ ಮೂಕಿ, ಕಲಘಟಗಿ

ರವಿ ಹೆಚ್ ಮೂಕಿ. ಮೂಲತಃ ಧಾರವಾಡ ಜಿಲ್ಲೆ ಕಲಘಟಗಿ ತಾಲ್ಲೂಕಿನ ಪರಸಾಪುರ ಗ್ರಾಮದವರು.ರವಿ ಮೂಕಿ ಪ್ರಸ್ತುತ ಟಿವಿ9 ನ್ಯೂಜ್ ಚಾನಲ್‌ ನಲ್ಲಿ ಬಾಗಲಕೋಟೆ ವರದಿಗಾರರು.ಪದವಿ ಮುಗಿಸಿ ಕೆಲ ತಿಂಗಳು ರಿಲಯನ್ಸ್ ಕಂಪನಿಯಲ್ಲಿ ಕೆಲಸ, ನಂತರ ಜನಶ್ರೀ ನ್ಯೂಜ್‌ ಹಾವೇರಿ ಜಿಲ್ಲಾ ವರದಿಗಾರರಾಗಿ ೨೦೧೦ ರಿಂದ ೨೦೧೫ ರವರೆಗೆ ಕೆಲಸ ಮಾಡಿದ್ದಾರೆ.೨೦೧೫ ರಿಂದ‌ ಟಿವಿ ೯ ಬಾಗಲಕೋಟೆ ಜಿಲ್ಲಾ ವರದಿಗಾರರಾಗಿ ‌ಕೆಲಸ ಮುಂದುವರೆಸಿದ್ದಾರೆ.ಮಾದ್ಯಮದಲ್ಲಿ ಸಕ್ರಿಯರಾಗಿದ್ದು,ಹಾವೇರಿ ಬಾಗಲಕೋಟೆ ಜಿಲ್ಲೆ ಸೇರಿ ಒಟ್ಟು.೧೪ ವರ್ಷ ಮಾದ್ಯಮ ಕ್ಷೇತ್ರದಲ್ಲಿ ಕಾರ್ಯನಿರ್ವಹಣೆ.ರಾಜಕೀಯ,ಕೃಷಿ,ಗ್ರಾಮೀಣ ಕ್ರೀಡೆ,ಮಾನವೀಯ ಸ್ಟೋರಿಗಳ ವರದಿ ಮಾಡಲು ಹೆಚ್ಚು ಆಸಕ್ತಿ.ಸಿನಿಮಾ ನೋಡುವುದು,ಸಂಗೀತ ಕೇಳೋದು ಹಾಡೋದು ಇಷ್ಟ. ಟಿರ್ವಿ ಬಾಗಲಕೋಟೆ ಜಿಲ್ಲಾ ವರದಿಗಾರನಾಗಿ ಉತ್ತರಕರ್ನಾಟಕ ದಲ್ಲಿನ ಪ್ರವಾಹ ಸಂಕಷ್ಟ ಕವರೇಜ್. ,ಬಾದಾಮಿ ಸಿದ್ದರಾಮಯ್ಯ- ರಾಮುಲು ಹೈವೋಲ್ಟೇಜ್ ಚುನಾವಣೆ ಕವರೇಜ್,ಅದೇ ಚುನಾವಣೆಯಲ್ಲಿ ಜೆಪಿ ಕೇಂದ್ರ ನಾಯಕ ಅಮಿತ್ ಷಾ ಇಂಟರ್ ವ್ಯೂ ಮಾಡೋಕೆ ಸಂಸ್ಥೆಯಲ್ಲಿ ಅವಕಾಶ ಸಿಕ್ಕಿದ್ದು ಖುಷಿ ಹೆಮ್ಮೆ.

Read More