MB Patil: ತಮಗೆ ಸಿಕ್ಕ ಖಾತೆ ಕುರಿತು ಅಸಮಾಧಾನ ತೋಡಿಕೊಳ್ಳಲು ಎಂಬಿ ಪಾಟೀಲ್ ಮುಖ್ಯಮಂತ್ರಿಗಳ ನಿವಾಸಕ್ಕೆ ಆಗಮಿಸಿದರೇ?

ಅರುಣ್​ ಕುಮಾರ್​ ಬೆಳ್ಳಿ

Updated on: May 29, 2023 | 1:16 PM

ಪಾಟೀಲ್ ಇಂದು ಮುಂಜಾನೆ ಸಮಯದಲ್ಲೇ ಮುಖ್ಯಮಂತ್ರಿಗಳ ನಿವಾಸಕ್ಕೆ ಆಗಮಿಸಿದರು.

ಬೆಂಗಳೂರು: ಮೊದಲ ಮತ್ತು ಎರಡನೇ ಹಂತದಲ್ಲಿ ಪ್ರಮಾಣ ವಚನ ಸ್ವೀಕರಿಸಿದ ಎಲ್ಲ ಸಚಿವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು (Siddaramaiah) ಖಾತೆಗಳನ್ನು ಹಂಚಿದ್ದಾರೆ. ಆದರೆ ಕೆಲ ಸಚಿವರಿಗೆ ಅದರಲ್ಲೂ ವಿಶೇಷವಾಗಿ ಹಿರಿಯರಿಗೆ (seniors) ತಮಗೆ ಸಿಕ್ಕ ಖಾತೆಯಿಂದ ಸಮಾಧಾನವಿಲ್ಲ. ಅಸಮಾಧಾನಗೊಂಡಿರುವವರು ಮಿನಿಸ್ಟ್ರಾಗುವ ಆಸೆಯಿಟ್ಟುಕೊಂಡು ನಿರಾಶೆಗೊಂಡ ಶಾಸಕರನ್ನು ನೋಡಿ ಸಮಾಧಾನಪಟ್ಟುಕೊಂಡರೆ ಸರ್ಕಾರ ಸುಗಮವಾಗಿ ನಡೆಯುತ್ತದೆ. ಜಲಸಂಪನ್ಮೂಲ ಖಾತೆ ಮೇಲೆ ಕಣ್ಣಿಟ್ಟಿದ್ದ ಎಂಬಿ ಪಾಟೀಲ್ (MB Patil) ಅವರಿಗೆ ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಜೊತೆ ಐಟಿ-ಬಿಟಿ ಖಾತೆ ಸಿಕ್ಕಿವೆ. ಪಾಟೀಲ್ ಇಂದು ಮುಂಜಾನೆ ಸಮಯದಲ್ಲೇ ಮುಖ್ಯಮಂತ್ರಿಗಳ ನಿವಾಸಕ್ಕೆ ಆಗಮಿಸಿದರು. ಅಸಮಾಧಾನವನ್ನು ತೋಡಿಕೊಳ್ಳಲು ಅವರು ಆಗಮಿಸಿರಬಹುದೆಂದು ವದಂತಿ ಹಬ್ಬಿದೆ.

ಮತ್ತಷ್ಟು ವಿಡಿಯೋ ಸುದ್ದ್ದಿಗಳಿಗಾಗಿ ಇಲ್ಲಿ ಕ್ಲಿಕ್ಕಿಸಿ

Loading...
Unable to load recommendations.
Follow Us
ಅರುಣ್​ ಕುಮಾರ್​ ಬೆಳ್ಳಿ

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.