AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಾಲಾ ಮಕ್ಕಳನ್ನು ಹತ್ತಿಸಿಕೊಳ್ಳದೇ ಹೋದ ಸರ್ಕಾರಿ ಬಸ್ ಚಾಲಕ: ವಿಭಾಗೀಯ ನಿಯಂತ್ರಣಾಧಿಕಾರಿಗೆ ಸಚಿವ ಎಂ.ಬಿ. ಪಾಟೀಲ್​​ ತರಾಟೆ

ಶಾಲಾ ಮಕ್ಕಳನ್ನು ಹತ್ತಿಸಿಕೊಳ್ಳದೇ ಹೋದ ಸರ್ಕಾರಿ ಬಸ್ ಚಾಲಕ: ವಿಭಾಗೀಯ ನಿಯಂತ್ರಣಾಧಿಕಾರಿಗೆ ಸಚಿವ ಎಂ.ಬಿ. ಪಾಟೀಲ್​​ ತರಾಟೆ

ಅಶೋಕ ಯಡಳ್ಳಿ, ವಿಜಯಪುರ
| Edited By: |

Updated on: Aug 12, 2026 | 9:01 AM

Share

ವಿಜಯಪುರ ಜಿಲ್ಲೆಯ ಬಬಲೇಶ್ವರ ತಾಲೂಕಿನ ಮಮದಾಪುರ ಗ್ರಾಮದ ಬಳಿ ಶಾಲಾ ಮಕ್ಕಳನ್ನು ಹತ್ತಿಸಿಕೊಳ್ಳದೇ ಹೋದ ಸರ್ಕಾರಿ ಬಸ್ ಚಾಲಕನ ವಿರುದ್ಧ ಭಾರಿ ಆಕ್ರೋಶ ವ್ಯಕ್ತವಾಗಿದ್ದು, ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ್ ಅವರು ತಕ್ಷಣವೇ ವಿಭಾಗೀಯ ನಿಯಂತ್ರಣಾಧಿಕಾರಿಗೆ ಕರೆ ಮಾಡಿ ತರಾಟೆಗೆ ತೆಗೆದುಕೊಂಡಿದ್ದಾರೆ. ಜೊತೆಗೆ ಕೂಡಲೇ ಮಕ್ಕಳಿಗೆ ಬಸ್ ವ್ಯವಸ್ಥೆ ಮಾಡುವ ಜೊತೆಗೆ ಮಮದಾಪುರಕ್ಕೆ ಆಗಮಿಸಿ ಸಮಸ್ಯೆ ಬಗೆಹರಿಸುವಂತೆ ತಾಕೀತು ಮಾಡಿರುವ ಪ್ರಸಂಗ ನಡೆದಿದೆ.

ವಿಜಯಪುರ, ಆಗಸ್ಟ್​​ 12: ಸರ್ಕಾರಿ ಬಸ್ ಚಾಲಕ ಶಾಲಾ ಮಕ್ಕಳನ್ನು ಹತ್ತಿಸಿಕೊಳ್ಳದೇ ಹೋದ ಕಾರಣ ಮಾರ್ಗ ಮಧ್ಯೆ ನಿಂತಿದ್ದ ಮಕ್ಕಳನ್ನು ಕಂಡು ಸಮಸ್ಯೆ ಆಲಿಸಿದ ಸಚಿವ ಎಂ.ಬಿ.ಪಾಟೀಲ್, ಕೂಡಲೇ ವಿಭಾಗೀಯ ನಿಯಂತ್ರಣಾಧಿಕಾರಿಗೆ ಕರೆ ಮಾಡಿ ತರಾಟೆಗೆ ಪಡೆದ ಘಟನೆ ನಿನ್ನೆ ಸಂಜೆ ವಿಜಯಪುರದ ಬಬಲೇಶ್ವರ ತಾಲೂಕಿನ ಮಮದಾಪುರ ಗ್ರಾಮದ ಬಳಿ ನಡೆದಿದೆ. ಚಾಲಕನ‌ ನಿರ್ಲಕ್ಷ್ಯದ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ ಸಚಿವರು ವಿಜಯಪುರ, ಕಿಲಾರಹಟ್ಟಿ, ಮಮದಾಪುರ ಮಾರ್ಗದ ಬಸ್ ಚಾಲಕನನ್ನು ಅಮಾನತು ಮಾಡುವಂತೆ ವಿಭಾಗೀಯ ನಿಯಂತ್ರಣಾಧಿಕಾರಿ ಡಿ.ಎ.ಬಿರಾದಾರಗೆ ಸೂಚನೆ ನೀಡಿದ್ದಾರೆ. ಜೊತೆಗೆ ಕೂಡಲೇ ಮಕ್ಕಳಿಗೆ ಬಸ್ ವ್ಯವಸ್ಥೆ ಮಾಡುವ ಜೊತೆಗೆ ಮಮದಾಪುರಕ್ಕೆ ಆಗಮಿಸಿ ಸಮಸ್ಯೆ ಬಗೆಹರಿಸುವಂತೆ ತಾಕೀತು ಮಾಡಿದ್ದಾರೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Follow Us
ಅಶೋಕ ಯಡಳ್ಳಿ, ವಿಜಯಪುರ
ಅಶೋಕ ಯಡಳ್ಳಿ, ವಿಜಯಪುರ

ನನ್ನ ಹೆಸರು ಅಶೋಕ ಯಡಳ್ಳಿ, ಟಿವಿ9 ಕನ್ನಡ ಸುದ್ದಿ ವಾಹಿನಿಯಲ್ಲಿ ಕಳೆದ 2012 ರಿಂದ ವಿಜಯಪುರ ಜಿಲ್ಲಾ ಪ್ರತಿನಿಧಿಯಾಗಿ ಸೇವೆ ಸಲ್ಲಿಸುತ್ತಿದ್ದೇನೆ. ಟಿವಿ9 ಸಂಸ್ಥೆಗೂ ಮುನ್ನ ಹೈದರಾಬಾದಿನ ರಾಮೋಜಿ ರಾವ್ ಪೀಲ್ಮ್ ಸಿಟಿಯಲ್ಲಿದ್ದ ಈಟಿವಿ ಕನ್ನಡ ಮನರಂಜನೆ ಹಾಗೂ ಸುದ್ದಿ ವಾಹಿನಿಯಲ್ಲಿ ಸೇವೆ ಸಲ್ಲಿಸುತ್ತಿದ್ದೆ. ಇದು ನನ್ನ ಕೆಲಸದ ಬಗ್ಗೆ ಹೇಳಿರೋ ಮಾಹಿತಿಯಾಗಿದ್ದು ವೈಯುಕ್ತಿಕ ಮಾಹಿತಿ ಬಗ್ಗೆ ಹೇಳದಾದರೆ. ನಾನು ಮೂಲತಃ ಧಾರವಾಡ ಜಿಲ್ಲೆಯವ. ಧಾರವಾಡ ತಾಲೂಕಿನ ಅಮ್ಮಿನಬಾವಿ ಗ್ರಾಮ ನಮ್ಮೂರು. ತಂದೆ ತಾಯಿ ಸಹೋದರ ಸಹೋದರಿಯರ ತುಂಬು ಕುಟುಂಬ. ಮೂಲತಃ ಕೃಷಿ ಕುಟುಂಬವಾಗಿದ್ದು, ಹಿರಿಯರಿಂದ ಬಂದ ಜಮೀನುಗಳಿವೆ. ಪ್ರಾಥಮಿಕ ಶಿಕ್ಷಣ ನಮ್ಮೂರಲ್ಲೇ ಬಳಿಕ ಹೈಸ್ಕೂಲ್ ನಿಂದ ಹಿಡಿದು ಪಿಜಿವರೆಗೂ ಧಾರವಾಡ. ಕರ್ನಾಟಕ ವಿಶ್ವವಿದ್ಯಾಲಯದಿಂದ ಪತ್ರಿಕೋಧ್ಯಮ ಮತ್ತು ಸಮೂಹ ಸಂವಹನ ವಿಭಾಗದಿಂದ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. ಟಿವಿ9 ನಲ್ಲಿ ಹಲವಾರು ಉತ್ತಮ ವರದಿಗಳನ್ನು ನೀಡಿದ ಹೆಮ್ಮೆ ತೃಪ್ತಿ ನನಗಿದೆ. ಆಲಮೇಲದ ವಿದ್ಯಾರ್ಥಿನಿಯರ ಮೇಲಿನ ಲೈಂಗಿಕ ದೌರ್ಜನ್ಯ ಬಹಿರಂಗ ಮಾಡಿದ್ದು, ವಿಜಯಪುರ ಬಾಗಲಕೋಟೆಯಲ್ಲಿ ಕೊಳವೆ ಬಾವಿಯಲ್ಲಿ ಬಿದ್ದಿದ್ದ ಮಕ್ಕಳ ಕುರಿತ ವರದಿ. ಹಾವಿನ ಸೇಡಿಗೆ ಒಳಗಾಗಿದ್ದ ಯುವಕನ ಸಮಸ್ಯೆ ಬಗೆ ಹರಿಸಿದ್ದು. ಉಷ್ಣ ವಿದ್ಯುತ್ ಸ್ಥಾವರದ ಗಲಾಟೆ ಹೀಗೆ ಹಲವಾರು ವಿಶೇಷ ಸುದ್ದಿಗಳು, ಚುನಾವಣೆ, ರಾಜಕೀಯ, ಕ್ರೀಡೆ, ಹೀಗೂ ಉಂಟೇ, ವಾರೆಂಟ್, ಮಾರುವೇಷ, ಸಾಧನೆ, ಕೃಷಿ ಹೀಗೆ ಅನೇಕ ವಿಚಾರಗಳ ಕುರಿತ ಸುದ್ದಿಗಳಿಗೆ ನ್ಯಾಯ ಒದಗಿಸಿದ್ದೇನೆಂದು ನಂಬಿದ್ದೇನೆ. ಭವಿಷ್ಯದಲ್ಲಿ ಇನ್ನೂ ಹೆಚ್ಚಿನ ಉತ್ತಮ ವರದಿಗಳನ್ನು ಮಾಡುವ ಹಂಬಲ - ಆಸಕ್ತಿಯಿದೆ. ಕ್ರೀಡೆ, ಸಾಮಾಜಿಕ, ಕೃಷಿಯಲ್ಲಿ ಹೆಚ್ಚಿನ ಆಸಕ್ತಿಯಿದೆ. ಧನ್ಯವಾದಗಳು.......

Read More