ಬೆಂಗಳೂರು ಹೋಟೆಲ್​​ ಮಾಲೀಕರಿಗೆ ಗುಡ್​​ನ್ಯೂಸ್​​ ಕೊಟ್ಟ ಸಚಿವ ಮುನಿಯಪ್ಪ

Edited By:

Updated on: Mar 30, 2026 | 3:46 PM

ಬೆಂಗಳೂರಿನ ಹೋಟೆಲ್‌ಗಳಲ್ಲಿ ಎಲ್‌ಪಿಜಿ ಗ್ಯಾಸ್ ಸಿಲಿಂಡರ್ ಕೊರತೆ ಸಮಸ್ಯೆಯನ್ನು ಪರಿಹರಿಸಲು ಸಚಿವ ಕೆ.ಹೆಚ್. ಮುನಿಯಪ್ಪ ಕ್ರಮ ಕೈಗೊಂಡಿದ್ದಾರೆ. ನಾಳೆ 17,500 ವಾಣಿಜ್ಯ ಸಿಲಿಂಡರ್‌ಗಳನ್ನು ಹೋಟೆಲ್‌ಗಳಿಗೆ ವಿತರಿಸಲಾಗುವುದು ಎಂದು ಅವರು ಘೋಷಿಸಿದ್ದಾರೆ. ದೇಶೀಯ ಸಿಲಿಂಡರ್ ವಿತರಣೆಯಲ್ಲೂ ವಿಳಂಬವಾಗಿದ್ದು, ಈ ಸಮಸ್ಯೆಯನ್ನು ಆದಷ್ಟು ಬೇಗ ಬಗೆಹರಿಸುವಂತೆ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದ್ದಾರೆ.

ಬೆಂಗಳೂರು, ಮಾರ್ಚ್​​ 30: ನಗರದ ಹೋಟೆಲ್‌ಗಳಲ್ಲಿ ಎಲ್‌ಪಿಜಿ ಗ್ಯಾಸ್ ಸಿಲಿಂಡರ್ ಕೊರತೆಯು ತೀವ್ರ ಆತಂಕ ಸೃಷ್ಟಿಸಿದೆ. ಈ ನಡುವೆ ಆಹಾರ ಸಚಿವ ಕೆ.ಹೆಚ್. ಮುನಿಯಪ್ಪ ಗುಡ್​​ ನ್ಯೂಸ್​​ ನೀಡಿದ್ದು, ನಾಳೆ ನಗರದ ಹೋಟೆಲ್‌ಗಳಿಗೆ 17,500 ಹೆಚ್ಚುವರಿ ಗ್ಯಾಸ್ ಸಿಲಿಂಡರ್‌ಗಳನ್ನು ವಿತರಿಸಲಾಗುವುದು ಎಂದು ಘೋಷಿಸಿದ್ದಾರೆ. ಈ ಆದೇಶದ ಅನ್ವಯ, ಇಂದು ವಿತರಕರಿಗೆ ಸಿಲಿಂಡರ್‌ಗಳು ತಲುಪಲಿದ್ದು, ನಾಳೆಯಿಂದ ಹೋಟೆಲ್ ಮಾಲೀಕರಿಗೆ ವಿತರಣೆ ಆರಂಭವಾಗಲಿದೆ. ಈ ಪ್ರಕ್ರಿಯೆಯು ಸ್ವಲ್ಪ ಸಮಯ ತೆಗೆದುಕೊಳ್ಳಬಹುದು. ಆದರೆ ಹೋಟೆಲ್ ಮಾಲೀಕರ ಆತಂಕ ನಾಳೆಯಿಂದ ಬಗೆಹರಿಯಲಿದೆ ಎಂದು ಸಚಿವರು ಭರವಸೆ ನೀಡಿದ್ದಾರೆ. ದೇಶೀಯ ಸಿಲಿಂಡರ್‌ಗಳ ವಿತರಣೆಯಲ್ಲೂ ವಿಳಂಬವಾಗುತ್ತಿದ್ದು, ಗ್ರಾಹಕರು ವಿನಾಕಾರಣ ಡಿಸ್ಟ್ರಿಬ್ಯೂಟರ್‌ಗಳ ಕಚೇರಿಗೆ ಹೋಗಬಾರದು. 25 ದಿನಗಳ ನಂತರ ಬುಕ್ ಮಾಡಿದರೆ ಸಿಲಿಂಡರ್ ಲಭ್ಯವಾಗುತ್ತದೆ ಮತ್ತು ಗ್ರಾಮಾಂತರ ಪ್ರದೇಶಗಳಿಗೆ ಇದು 45 ದಿನಗಳಿಗೆ ಅನ್ವಯಿಸಲಿದೆ ಎಂದು ಅವರು ತಿಳಿಸಿದ್ದಾರೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Published on: Mar 30, 2026 03:45 PM
Follow Us
Prasanna Gaonkar

ಹುಟ್ಟೂರು ಯಲ್ಲಾಪುರ, ಬೆಳೆದೂರು ದಾಂಡೇಲಿಯ ದಟ್ಟ ಕಾಡುಗಳ ನಡುವೆ. ರವಿ ಬೆಳಗೆರೆ ಎಂಬ ಅಕ್ಷರ ರಾಕ್ಷಸನ ಕಟ್ಟಾಭಿಮಾನದಿಂದ ಹಾಳಾಗಿ, ಸೈನ್ಸ್ ನಲ್ಲಿ ಡಿಗ್ರಿ ಪಡೆದು ಜರ್ನಲಿಸಂಗೆ ಹಿಂಬದಿ ಕಿಟಕಿಯಿಂದ ನುಸುಳಿದ್ದು 2010 ರ ಅಕ್ಟೋಬರ್ ನಲ್ಲಿ. ಉಡುಪಿಯಲ್ಲಿ ಮೊದಲ ಪತ್ರಿಕೋದ್ಯಮ ಕರ್ತವ್ಯ ಪ್ರಾರಂಭಿಸಿದ್ದು 2010 ರಲ್ಲಿಯೇ. ಜನಶ್ರೀ ನ್ಯೂಸ್ ಮೊದಲು ಅನ್ನ ನೀಡಿದ ಸಂಸ್ಥೆ. ಉಡುಪಿ ಜಿಲ್ಲಾ ವರದಿಗಾರನಾಗಿ ಮೂರು ವರ್ಷ ಕೆಲಸ ಮಾಡಿ 2013 ರ ಅಂತ್ಯಕ್ಕೆ ಸಮಯ ನ್ಯೂಸ್ ಮೂಲಕ ಬೆಂಗಳೂರಿಗೆ ಎಂಟ್ರಿ. ಬಿಗ್ ೩, ಬೆಂಗಳೂರ್ ಲೈವ್, ಸಮಯ ಸಕಾಲ ಕಾರ್ಯಕ್ರಮದಲ್ಲಿ ವರದಿಗಾರಿಕೆ ಮಾಡಿದ ಖುಷಿ. 2014 ರ ಡಿಸೆಂಬರ್ ನಿಂದ ಟಿವಿ9 ನಲ್ಲಿ ಕೆಲಸ ಪ್ರಾರಂಭ. ಟಿವಿ9 ನಲ್ಲಿ ಮೊದಲು ಮೆಟ್ರೋ ರಿಪೋರ್ಟಿಂಗ್ ಮೂಲಕ ಬೆಂಗಳೂರು ಸುತ್ತುವ ಅರಿಯುವ ರಾಜಧಾನಿಯ ನಾಡಿಮಿಡಿತ ಹುಡುಕುವ ಅವಕಾಶ. ಮೆಟ್ರೋ ಬ್ಯೂರೋ ದಲ್ಲಿ ಶೈಕ್ಷಣಿಕ ಹಾಗೂ ಬಿಬಿಎಂಪಿ ವರದಿಗಾರಿಕೆ. ಚಪ್ಪಲಿಯಿಂದ ಹಿಡಿದು ಚಾದರ್ ತನಕ ಸ್ಟೋರಿ ಮಾಡಿದ ಅನುಭವ. ಮೆಟ್ರೋ ಟೀಂ ನಿಂದ ರಾಜಕೀಯ ವರದಿಗಾರಿಕೆಗೆ ಶಿಫ್ಟ್ ಆದ ತಕ್ಷಣ- ಮುಂದುವರಿದಿದೆ ನಿರಂತರ ಪಯಣ. ಕಥೆ, ಕಾದಂಬರಿ, ಕವನ, ಸಿನಿಮಾ, ಸುತ್ತಾಟ, ಆಗಾಗ ಕಿತ್ತಾಟ, ಸ್ನೇಹಿತರೊಂದಿಗೆ ಒಡನಾಟ ಇವೆಲ್ಲ ಮಾಮೂಲಿ ದಿನಚರಿ. ಇವತ್ತಿಗೂ ಬರವಣಿಗೆಯೊಂದೇ ಖುಷಿ ಕೊಡುವ ಖರ್ಜೂರ. ಸ್ಟಾಕ್ ಮಾರ್ಕೆಟ್ ನಲ್ಲಿ 2019 ರಿಂದ ಆ್ಯಕ್ಟಿವ್.

Read More