ಆಶಾ ಕಾರ್ಯಕರ್ತೆಯರು ಕೇಳಿದಾಗಲೆಲ್ಲ ಕಂಠಿ ಹಾರ ಕೊಡಲು ಸಾಧ್ಯನಾ?: ಹೇಳಿಕೆ ವಾಪಸ್ ಪಡೆದ ಸಚಿವ ನರೇಂದ್ರಸ್ವಾಮಿ

Edited By:

Updated on: Nov 25, 2026 | 2:43 PM

ಒಂದು ವಾರದಿಂದ ಮನೆ, ಕುಟುಂಬವನ್ನ ಮರೆತು ಪ್ರತಿಭಟಿಸುತ್ತಿರುವ ಆಶಾ ಕಾರ್ಯಕರ್ತೆಯರ ಬಗ್ಗೆ ಜವಾಬ್ದಾರಿಯುತ ಸ್ಥಾನದಲ್ಲಿರುವ ಸಚಿವ ನರೇಂದ್ರ ಸ್ವಾಮಿ ಹಗುರವಾಗಿ ಮಾತನಾಡಿದ್ದಾರೆ. ಆಶಾ ಕಾರ್ಯಕರ್ತೆಯರು ಕೇಳಿದಾಗಲೆಲ್ಲ 'ಕಂಠಿ ಹಾರ ಕೊಡಲು ಸಾಧ್ಯನಾ' ಎಂದು ಕೇವಲವಾಗಿ ಮಾತನಾಡಿದ್ದು, ತೀವ್ರ ವಿರೋಧಕ್ಕೆ ಕಾರಣವಾಗಿದೆ. ನಟಿ ರಮ್ಯಾದಿಂದ ಹಿಡಿದು ವಿಪಕ್ಷ ನಾಯಕರೂ ಸಹ ನರೇಂದ್ರಸ್ವಾಮಿ ಹೇಳಿಕೆಯನ್ನು ಖಂಡಿಸಿದ್ದಾರೆ. ಇದರ ಬೆನ್ನಲ್ಲೇ ನರೇಂದ್ರಸ್ವಾಮಿ, ತಮ್ಮ ಹೇಳಿಕೆಗೆ ವಿಷಾದ ವ್ಯಕ್ತಪಡಿಸಿದ್ದಾರೆ.

ಮೈಸೂರು, ನವೆಂಬರ್ 25: 15,000 ರೂ. ವೇತನಕ್ಕಾಗಿ ಆಶಾ ಕಾರ್ಯಕರ್ತೆಯರು ಹಗಲು ರಾತ್ರಿ ಎನ್ನದೇ ಚಳಿ, ಗಾಳಿಯನ್ನೂ ಲೆಕ್ಕಿಸದೇ ತಮ್ಮ ಬೇಡಿಕೆ ಈಡೇಸುವಂತೆ ಬೆಂಗಳೂರಿನ ಫ್ರೀಡಂ ಪಾರ್ಕ್​ನಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. ಒಂದು ವಾರದಿಂದ ಮನೆ, ಕುಟುಂಬವನ್ನ ಮರೆತು ಪ್ರತಿಭಟಿಸುತ್ತಿರುವ ಆಶಾ ಕಾರ್ಯಕರ್ತೆಯರ ಬಗ್ಗೆ ಜವಾಬ್ದಾರಿಯುತ ಸ್ಥಾನದಲ್ಲಿರುವ ಸಚಿವ ನರೇಂದ್ರ ಸ್ವಾಮಿ ಹಗುರವಾಗಿ ಮಾತನಾಡಿದ್ದಾರೆ. ಆಶಾ ಕಾರ್ಯಕರ್ತೆಯರು ಕೇಳಿದಾಗಲೆಲ್ಲ ‘ಕಂಠಿ ಹಾರ ಕೊಡಲು ಸಾಧ್ಯನಾ’ ಎಂದು ಕೇವಲವಾಗಿ ಮಾತನಾಡಿದ್ದು, ತೀವ್ರ ವಿರೋಧಕ್ಕೆ ಕಾರಣವಾಗಿದೆ. ನಟಿ ರಮ್ಯಾದಿಂದ ಹಿಡಿದು ವಿಪಕ್ಷ ನಾಯಕರೂ ಸಹ ನರೇಂದ್ರಸ್ವಾಮಿ ಹೇಳಿಕೆಯನ್ನು ಖಂಡಿಸಿದ್ದಾರೆ. ಇದರ ಬೆನ್ನಲ್ಲೇ ನರೇಂದ್ರಸ್ವಾಮಿ, ತಮ್ಮ ಹೇಳಿಕೆಗೆ ವಿಷಾದ ವ್ಯಕ್ತಪಡಿಸಿದ್ದಾರೆ.

ಮೈಸೂರಿನಲ್ಲಿ ಮಾತನಾಡಿರು ನರೇಂದ್ರಸ್ವಾಮಿ, ನಾನು ಮಾತಿನ ಬರದಲ್ಲಿ ಹೇಳಿಕೆ ಕೊಟ್ಟೆ. ನಾನು ಹೇಳಿರುವ ಪದವನ್ನು ವಾಪಸ್​ ಪಡೆಯುತ್ತೇನೆ. ನನ್ನ ಹೇಳಿಕೆಗೆ ವಿಷಾದ ವ್ಯಕ್ತಪಡಿಸುತ್ತೇನೆ. ನನ್ನ ಮಾತನ್ನು ಎಲ್ಲಾ ರೀತಿಯನ್ನು ವಿಶ್ಲೇಷಣೆ ಮಾಡಬಹುದು. ಹೀಗಾಗಿ ಆ ಪದಗಳನ್ನು ವಾಪಸ್​ ಪಡೆದು ವಿಷಾದ ವ್ಯಕ್ತಪಡಿಸುತ್ತೇನೆ ಎಂದರು.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published on: Nov 25, 2026 02:42 PM
Loading...
Unable to load recommendations.
Follow Us
ರಾಮ್​, ಮೈಸೂರು

ರಾಮ್ ಮೈಸೂರು ಪತ್ರಕರ್ತನಾಗಿ 20 ವರ್ಷದ ಅನುಭವ. ಕಳೆದ 14 ವರ್ಷಗಳಿಂದ ಟಿವಿ9 ಕನ್ನಡದ ಮೈಸೂರು ಜಿಲ್ಲಾ ಪ್ರತಿನಿಧಿಯಾಗಿ ಕೆಲಸ ನಿರ್ವಹಣೆ. ರಾಜ್ಯದ ವಿಧಾನಸಭಾ ಲೋಕಸಭಾ ಚುನಾವಣೆಯ ವಿಶೇಷ ವರದಿ ಹಾಗೂ ರಾಜ್ಯದ ವಿವಿಧ ಕ್ಷೇತ್ರಗಳ ಉಪಚುನಾವಣಾ ವರದಿ, ಕೇರಳದ ವಯನಾಡು ಲೋಕಸಭಾ ಕ್ಷೇತ್ರದ ರಾಹುಲ್ ಗಾಂಧಿ ಸ್ಪರ್ಧೆ ಮಾಡಿದ್ದ ಚುನಾವಣಾ ವರದಿ ಸೇರಿದಂತೆ ಹಲವು ಚುನಾವಣೆಯ ವರದಿಯ ಅನುಭವ. ಮುಂಬೈ ಮಹಾಮಳೆಯ ಕವರೇಜ್, ಕೊಡಗು ಜಿಲ್ಲೆಯ ಗುಡ್ಡ ಕುಸಿತ, ಸೇರಿದಂತೆ ಹಲವು ಸ್ಟಿಂಗ್ ಕಾರ್ಯಾಚರಣೆ, ಸಾಮಾಜಿಕ‌ ಸಮಸ್ಯೆ ಹಾಗೂ ಮಾನವೀಯ ಕಳಕಳಿಯುಳ್ಳ ವರದಿ ಮಾಡಿದ ಅನುಭವ.

Read More