ಕಲಬುರಗಿಯಲ್ಲಿ ಸಿದ್ದರಾಮಯ್ಯ ಪ್ರತಿಮೆ ತೆರವು ಸಮರ್ಥಿಸಿಕೊಂಡ ಪ್ರಿಯಾಂಕ್ ಖರ್ಗೆ

Updated on: Sep 19, 2026 | 7:04 PM

ಸಿದ್ದರಾಮಯ್ಯ ಅವರ 9 ಅಡಿ ಎತ್ತರದ ಪ್ರತಿಮೆಯನ್ನು ಸ್ಥಾಪಿಸಿದ್ದರು. ವಿಷಯ ತಿಳಿದ ತಕ್ಷಣ ಎಚ್ಚೆತ್ತ ಮಹಾನಗರ ಪಾಲಿಕೆ ಅಧಿಕಾರಿಗಳು ಮತ್ತು ಪೊಲೀಸರು ಬೆಳಗಿನ ಜಾವವೇ ಪ್ರತಿಮೆಯನ್ನು ತೆರವುಗೊಳಿಸಿದ್ದು, ರಾಜ್ಯ ರಾಜಕಾರಣದಲ್ಲಿ ಬೇರೆ ಬೇರೆ ರೀತಿಯ ಚರ್ಚೆಗೆ ಗ್ರಾಸವಾಗಿದೆ. ಇನ್ನೊಂದೆಡೆ ಸಿದ್ದರಾಮಯ್ಯನವರ ಅಭಿಮಾನಿಗಳ ಆಕ್ರೋಶಕ್ಕೆ ಕಾರಣವಾಗಿದೆ. ಇನ್ನು ಈ ಬಗ್ಗೆ ಪ್ರತಿಕ್ರಿಯಿಸಿರುವ ಗೃಹ ಸಚಿವ ಪ್ರಿಯಾಂಕ್ ಖರ್ಗೆ, ಸಿದ್ದರಾಮ್ಯಯನವರ ಪ್ರತಿಮೆ ತೆರವುಗೊಳಿಸಿದ್ದನ್ನು ಸಮರ್ಥಿಸಿಕೊಂಡಿದ್ದಾರೆ.

ಬೆಂಗಳೂರು, (ಸೆಪ್ಟೆಂಬರ್ 19): ಕಲಬುರಗಿಯ ಹೈಕೋರ್ಟ್ ವೃತ್ತದಲ್ಲಿ ಅಭಿಮಾನಿಗಳು ರಾತ್ರೋರಾತ್ರಿ ಅನಧಿಕೃತವಾಗಿ ಮಾಜಿ ಸಿಎಂ ಸಿದ್ದರಾಮಯ್ಯ ಅವರ 9 ಅಡಿ ಎತ್ತರದ ಪ್ರತಿಮೆಯನ್ನು ಸ್ಥಾಪಿಸಿದ್ದರು. ವಿಷಯ ತಿಳಿದ ತಕ್ಷಣ ಎಚ್ಚೆತ್ತ ಮಹಾನಗರ ಪಾಲಿಕೆ ಅಧಿಕಾರಿಗಳು ಮತ್ತು ಪೊಲೀಸರು ಬೆಳಗಿನ ಜಾವವೇ ಪ್ರತಿಮೆಯನ್ನು ತೆರವುಗೊಳಿಸಿದ್ದು, ರಾಜ್ಯ ರಾಜಕಾರಣದಲ್ಲಿ ಬೇರೆ ಬೇರೆ ರೀತಿಯ ಚರ್ಚೆಗೆ ಗ್ರಾಸವಾಗಿದೆ. ಇನ್ನೊಂದೆಡೆ ಸಿದ್ದರಾಮಯ್ಯನವರ ಅಭಿಮಾನಿಗಳ ಆಕ್ರೋಶಕ್ಕೆ ಕಾರಣವಾಗಿದೆ. ಇನ್ನು ಈ ಬಗ್ಗೆ ಪ್ರತಿಕ್ರಿಯಿಸಿರುವ ಗೃಹ ಸಚಿವ ಪ್ರಿಯಾಂಕ್ ಖರ್ಗೆ, ಸಿದ್ದರಾಮ್ಯಯನವರ ಪ್ರತಿಮೆ ತೆರವುಗೊಳಿಸಿದ್ದನ್ನು ಸಮರ್ಥಿಸಿಕೊಂಡಿದ್ದಾರೆ.

ಈ ಬಗ್ಗೆ ಬೆಂಗಳೂರಿಲ್ಲಿಂದು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಪ್ರಿಯಾಂಕ್ ಖರ್ಗೆ, ಯಾರದ್ದೇ ಪ್ರತಿಮೆ ಹಾಕಬೇಕಾದರೂ ಅನುಮತಿ ಬೇಕು. ಇದನ್ನು ಖುದ್ದು ಸಿದ್ದರಾಮಯ್ಯ ಅವರೇ ಒಪ್ಪಲ್ಲ. ಕೆಲವರು ಅಭಿಮಾನಿಗಳು ಇರ್ತಾರೆ, ಈ ರೀತಿ ರಾತ್ರೋರಾತ್ರಿ ಪ್ರತಿಮೆ ಇಡ್ತಾರೆ. ಇದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮಾಡಿದ ಅಪಮಾನ. ಪ್ರತಿಮೆ ಇಡಲಿ, ಆದರೆ ಸೂಕ್ತ ಅನುಮತಿ ಪಡೆಯಲಿ ಎಂದು ಹೇಳಿದರು. ಈ ಮೂಲಕ ಸಿದ್ದರಾಮ್ಯಯನವರ ಪ್ರತಿಮೆ ತೆರವುಗೊಳಿಸಿದ್ದನ್ನು ಸಮರ್ಥಿಸಿಕೊಂಡರು.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ರಮೇಶ್ ಬಿ. ಜವಳಗೇರಾ

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More