‘ಧುರಂಧರ್ 2’, ‘ಕೇರಳ ಸ್ಟೋರಿ’ ಸಿನಿಮಾಗಳ ಬಗ್ಗೆ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದೇನು?
Priyank Kharge: ‘ಧುರಂಧರ್ 2’ ಸಿನಿಮಾ ಬಗ್ಗೆ ಪರ-ವಿರೋಧ ಎರಡೂ ವ್ಯಕ್ತವಾಗುತ್ತಿದೆ. ಇದೀಗ ರಾಜ್ಯ ಐಟಿ ಸಚಿವ ಪ್ರಿಯಾಂಕ್ ಖರ್ಗೆ ಅವರು ‘ಧುರಂಧರ್ 2’ ಸಿನಿಮಾ ಬಗ್ಗೆ ಮಾತನಾಡಿದ್ದಾರೆ. ಟಿಪ್ಪು ಸುಲ್ತಾನ್ ಸಂಬಂಧಿಸಿದ ಪುಸ್ತಕ ಬಿಡುಗಡೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ‘ಮೊದಲೆಲ್ಲ ವಾಟ್ಸ್ಆಪ್ ಯೂನಿವರ್ಸಿಟಿಯಲ್ಲಿದ್ದ ಸುಳ್ಳುಗಳನ್ನು ಈಗ ಸಿನಿಮಾ ಮಾಡಲಾಗುತ್ತಿದೆ’ ಎಂದಿದ್ದಾರೆ. ವಿಡಿಯೋ ನೋಡಿ...
‘ಧುರಂಧರ್ 2’ (Dhurandhar 2) ಸಿನಿಮಾ ಬಗ್ಗೆ ಪರ-ವಿರೋಧ ಎರಡೂ ವ್ಯಕ್ತವಾಗುತ್ತಿದೆ. ಇದೀಗ ರಾಜ್ಯ ಐಟಿ ಸಚಿವ ಪ್ರಿಯಾಂಕ್ ಖರ್ಗೆ ಅವರು ‘ಧುರಂಧರ್ 2’ ಸಿನಿಮಾ ಬಗ್ಗೆ ಮಾತನಾಡಿದ್ದಾರೆ. ಟಿಪ್ಪು ಸುಲ್ತಾನ್ ಸಂಬಂಧಿಸಿದ ಪುಸ್ತಕ ಬಿಡುಗಡೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ‘ಮೊದಲೆಲ್ಲ ವಾಟ್ಸ್ಆಪ್ ಯೂನಿವರ್ಸಿಟಿಯಲ್ಲಿದ್ದ ಸುಳ್ಳುಗಳನ್ನು ಈಗ ಸಿನಿಮಾ ಮಾಡಲಾಗುತ್ತಿದೆ. ಕಶ್ಮೀರ್ ಫೈಲ್ಸ್, ಕೇರಳ ಸ್ಟೋರಿ, ‘ಧುರಂಧರ್’, ‘ಛಾವಾ’ ಇನ್ನೂ ಏನೇನೋ. ಇವರೆಲ್ಲ ಸಿನಿಮಾ ಮಾಡಿ ಅದು 1000 ಕೋಟಿ ಗಳಿಸಿದರೆ ನನಗೆ ಬೇಸರ ಇಲ್ಲ. ಯಾರೋ ಬುದ್ಧಿ ಇಲ್ಲದ ಜನ, ಬಿಜೆಪಿ ಕಾರ್ಯಕರ್ತರು ಅದನ್ನು ನಂಬಿಕೊಂಡರೆ ಬೇಸರ ಇಲ್ಲ. ಆದರೆ ಶಿಕ್ಷಿತರು ಈ ಪ್ರೊಪೊಗಾಂಡಾಕ್ಕೆ ಒಳಗಾಗಬಾರದು’ ಎಂದಿದ್ದಾರೆ. ಪ್ರಿಯಾಂಕ್ ಖರ್ಗೆ ಹೇಳಿರುವುದೇನು? ವಿಡಿಯೋ ನೋಡಿ…
ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
ಪತ್ನಿ ಸಮೇತ ತಿರುಪತಿ ತಿಮ್ಮಪ್ಪನ ದರ್ಶನ ಪಡೆದ ಸಿಎಂ ಡಿ.ಕೆ. ಶಿವಕುಮಾರ್
ದಲಿತರ ಮೇಲೆ ದಬ್ಬಾಳಿಕೆ ಆರೋಪ: ಗ್ರಾಮದ ರಸ್ತೆ ಬಂದ್ ಮಾಡಿ ಪ್ರತಿಭಟನೆ
ಮೊಬೈಲ್ ಕಸಿದು ಪರಾರಿಯಾಗಲು ಯತ್ನಿಸಿದವ ಕ್ಷಣ ಮಾತ್ರದಲ್ಲಿ ಸಾವು!
ನೀಟ್ ಪರೀಕ್ಷೆಗೆ ಇನ್ನೊಂದೇ ದಿನ ಬಾಕಿ; ಕಟ್ಟುನಿಟ್ಟಿನ ಭದ್ರತಾ ವ್ಯವಸ್ಥೆ

