‘ಧುರಂಧರ್ 2’, ‘ಕೇರಳ ಸ್ಟೋರಿ’ ಸಿನಿಮಾಗಳ ಬಗ್ಗೆ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದೇನು?

Updated on: Mar 29, 2026 | 9:10 PM

Priyank Kharge: ‘ಧುರಂಧರ್ 2’ ಸಿನಿಮಾ ಬಗ್ಗೆ ಪರ-ವಿರೋಧ ಎರಡೂ ವ್ಯಕ್ತವಾಗುತ್ತಿದೆ. ಇದೀಗ ರಾಜ್ಯ ಐಟಿ ಸಚಿವ ಪ್ರಿಯಾಂಕ್ ಖರ್ಗೆ ಅವರು ‘ಧುರಂಧರ್ 2’ ಸಿನಿಮಾ ಬಗ್ಗೆ ಮಾತನಾಡಿದ್ದಾರೆ. ಟಿಪ್ಪು ಸುಲ್ತಾನ್ ಸಂಬಂಧಿಸಿದ ಪುಸ್ತಕ ಬಿಡುಗಡೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ‘ಮೊದಲೆಲ್ಲ ವಾಟ್ಸ್​​ಆಪ್ ಯೂನಿವರ್ಸಿಟಿಯಲ್ಲಿದ್ದ ಸುಳ್ಳುಗಳನ್ನು ಈಗ ಸಿನಿಮಾ ಮಾಡಲಾಗುತ್ತಿದೆ’ ಎಂದಿದ್ದಾರೆ. ವಿಡಿಯೋ ನೋಡಿ...

‘ಧುರಂಧರ್ 2’ (Dhurandhar 2) ಸಿನಿಮಾ ಬಗ್ಗೆ ಪರ-ವಿರೋಧ ಎರಡೂ ವ್ಯಕ್ತವಾಗುತ್ತಿದೆ. ಇದೀಗ ರಾಜ್ಯ ಐಟಿ ಸಚಿವ ಪ್ರಿಯಾಂಕ್ ಖರ್ಗೆ ಅವರು ‘ಧುರಂಧರ್ 2’ ಸಿನಿಮಾ ಬಗ್ಗೆ ಮಾತನಾಡಿದ್ದಾರೆ. ಟಿಪ್ಪು ಸುಲ್ತಾನ್ ಸಂಬಂಧಿಸಿದ ಪುಸ್ತಕ ಬಿಡುಗಡೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ‘ಮೊದಲೆಲ್ಲ ವಾಟ್ಸ್​​ಆಪ್ ಯೂನಿವರ್ಸಿಟಿಯಲ್ಲಿದ್ದ ಸುಳ್ಳುಗಳನ್ನು ಈಗ ಸಿನಿಮಾ ಮಾಡಲಾಗುತ್ತಿದೆ. ಕಶ್ಮೀರ್ ಫೈಲ್ಸ್, ಕೇರಳ ಸ್ಟೋರಿ, ‘ಧುರಂಧರ್’, ‘ಛಾವಾ’ ಇನ್ನೂ ಏನೇನೋ. ಇವರೆಲ್ಲ ಸಿನಿಮಾ ಮಾಡಿ ಅದು 1000 ಕೋಟಿ ಗಳಿಸಿದರೆ ನನಗೆ ಬೇಸರ ಇಲ್ಲ. ಯಾರೋ ಬುದ್ಧಿ ಇಲ್ಲದ ಜನ, ಬಿಜೆಪಿ ಕಾರ್ಯಕರ್ತರು ಅದನ್ನು ನಂಬಿಕೊಂಡರೆ ಬೇಸರ ಇಲ್ಲ. ಆದರೆ ಶಿಕ್ಷಿತರು ಈ ಪ್ರೊಪೊಗಾಂಡಾಕ್ಕೆ ಒಳಗಾಗಬಾರದು’ ಎಂದಿದ್ದಾರೆ. ಪ್ರಿಯಾಂಕ್ ಖರ್ಗೆ ಹೇಳಿರುವುದೇನು? ವಿಡಿಯೋ ನೋಡಿ…

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ಮಂಜುನಾಥ ಸಿ.

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More