ಮುತ್ತತ್ತಿಯಲ್ಲಿ ಐದು ಜನ ಜಲಸಮಾಧಿ: ಕಾವೇರಿ ನದಿ ದಡದಲ್ಲಿ ಬ್ಯಾರಿಕೇಡ್ ಅಳವಡಿಕೆಗೆ ಸಚಿವರ ಸೂಚನೆ

Updated on: Jun 26, 2026 | 4:34 PM

ಮುಖ್ಯಾಂಶಗಳು

  • ಮಂಡ್ಯ ಜಿಲ್ಲೆ ಮಳವಳ್ಳಿ ತಾಲೂಕಿನ ಮುತ್ತತ್ತಿಯಲ್ಲಿ ಐವರು ಕಾವೇರಿ ನದಿ ಪಾಲು
  • ಕಾವೇರಿ ನದಿಯಲ್ಲಿ ಬ್ಯಾರಿಕೇಡ್ ಅಳವಡಿಕೆಗೆ ಸಚಿವ ರಾಮಲಿಂಗಾರೆಡ್ಡಿ ಸೂಚನೆ
  • ನಿಗದಿತ ಸ್ಥಳದ ಹೊರಗೆ ಈಜುವುದನ್ನು ಕಟ್ಟುನಿಟ್ಟಾಗಿ ನಿಷೇಧಿಸುವಂತೆ ಮಂಡ್ಯ ಡಿಸಿಗೆ ನಿರ್ದೇಶನ

ಮಂಡ್ಯ ಜಿಲ್ಲೆ ಮಳವಳ್ಳಿ ತಾಲೂಕಿನ ಮುತ್ತತ್ತಿಯಲ್ಲಿ ಇತ್ತೀಚೆಗೆ ಒಂದೇ ಕುಟುಂಬದ ಐವರು ಕಾವೇರಿ ನದಿಯಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. ಈ ಹಿನ್ನೆಲೆಯಲ್ಲಿ ಜಲಸಂಪನ್ಮೂಲ ಸಚಿವ ರಾಮಲಿಂಗಾರೆಡ್ಡಿ ಎಚ್ಚೆತ್ತುಕೊಂಡಿದ್ದು, ಈ ರೀತಿಯ ಘಟನೆಗಳು ಮರುಕಳಿಸದಂತೆ ಎಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಜಿಲ್ಲಾಧಿಕಾರಿಗಳಿಗೆ ಸೂಚಿಸಿದ್ದಾರೆ. ಕಾವೇರಿ ನದಿ ಸಾರ್ವಜನಿಕರ ರಕ್ಷಣೆಗಾಗಿ ‘ಸೇಫ್ ಜೋನ್’ ಬ್ಯಾರಿಕೇಡ್‌ಗಳು, ಜಾಗೃತಿ ಫಲಕಗಳು ಹಾಗೂ ಗೈಡ್‌ಗಳನ್ನು ನಿಯೋಜಿಸಿ, ನಿಗದಿತ ಸ್ಥಳದ ಹೊರಗೆ ಈಜುವುದನ್ನು ಕಟ್ಟುನಿಟ್ಟಾಗಿ ನಿಷೇಧಿಸುವಂತೆ ನಿರ್ದೇಶನ ನೀಡಿದ್ದಾರೆ. ಅಲ್ಲದೇ ಗೈಡ್‌ಗಳನ್ನು ನಿಯೋಜಿಸಿ, ನಿಗದಿತ ಸ್ಥಳದ ಹೊರಗೆ ಈಜುವುದನ್ನು ಕಟ್ಟುನಿಟ್ಟಾಗಿ ನಿಷೇಧಿಸುವಂತೆ ಸೂಚಿಸಿದ್ದಾರೆ.

ಬೆಂಗಳೂರು/ಮಂಡ್ಯ, (ಜೂನ್ 26): ಮಂಡ್ಯ ಜಿಲ್ಲೆ ಮಳವಳ್ಳಿ ತಾಲೂಕಿನ ಮುತ್ತತ್ತಿಯಲ್ಲಿ ಇತ್ತೀಚೆಗೆ ಒಂದೇ ಕುಟುಂಬದ ಐವರು ಕಾವೇರಿ ನದಿಯಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. ಈ ಹಿನ್ನೆಲೆಯಲ್ಲಿ ಜಲಸಂಪನ್ಮೂಲ ಸಚಿವ ರಾಮಲಿಂಗಾರೆಡ್ಡಿ ಎಚ್ಚೆತ್ತುಕೊಂಡಿದ್ದು, ಈ ರೀತಿಯ ಘಟನೆಗಳು ಮರುಕಳಿಸದಂತೆ ಎಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಜಿಲ್ಲಾಧಿಕಾರಿಗಳಿಗೆ ಸೂಚಿಸಿದ್ದಾರೆ. ಕಾವೇರಿ ನದಿ ಸಾರ್ವಜನಿಕರ ರಕ್ಷಣೆಗಾಗಿ ‘ಸೇಫ್ ಜೋನ್’ ಬ್ಯಾರಿಕೇಡ್‌ಗಳು, ಜಾಗೃತಿ ಫಲಕಗಳು ಹಾಗೂ ಗೈಡ್‌ಗಳನ್ನು ನಿಯೋಜಿಸಿ, ನಿಗದಿತ ಸ್ಥಳದ ಹೊರಗೆ ಈಜುವುದನ್ನು ಕಟ್ಟುನಿಟ್ಟಾಗಿ ನಿಷೇಧಿಸುವಂತೆ ನಿರ್ದೇಶನ ನೀಡಿದ್ದಾರೆ. ಅಲ್ಲದೇ ಗೈಡ್‌ಗಳನ್ನು ನಿಯೋಜಿಸಿ, ನಿಗದಿತ ಸ್ಥಳದ ಹೊರಗೆ ಈಜುವುದನ್ನು ಕಟ್ಟುನಿಟ್ಟಾಗಿ ನಿಷೇಧಿಸುವಂತೆ ಸೂಚಿಸಿದ್ದಾರೆ.

ಇದನ್ನೂ ಓದಿ: ಚನ್ನಪಟ್ಟಣ ಮೂಲದ ಐವರು ಕಾವೇರಿ ನದಿ ಪಾಲು: ದೇವಸ್ಥಾನಕ್ಕೆ ಹೋದವರು ಮಸಣಕ್ಕೆ

Published on: Jun 26, 2026 04:32 PM
Loading...
Unable to load recommendations.
Follow Us
ರಮೇಶ್ ಬಿ. ಜವಳಗೇರಾ

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More