AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೀದಿಬದಿ ವ್ಯಾಪಾರಿಗಳು ಬಡವರು, ಅವರಿಗೆ ಪರ್ಯಾಯ ವ್ಯವಸ್ಥೆ ಕಲ್ಪಿಸುವುದು ಸರ್ಕಾರದ ಕರ್ತವ್ಯ

ಬೀದಿಬದಿ ವ್ಯಾಪಾರಿಗಳು ಬಡವರು, ಅವರಿಗೆ ಪರ್ಯಾಯ ವ್ಯವಸ್ಥೆ ಕಲ್ಪಿಸುವುದು ಸರ್ಕಾರದ ಕರ್ತವ್ಯ

ಅಕ್ಷಯ್​ ಪಲ್ಲಮಜಲು​​
|

Updated on: Jul 17, 2026 | 5:43 PM

Share

ಬೆಂಗಳೂರಿನ ಫುಟ್‌ಪಾತ್ ಒತ್ತುವರಿ ಕುರಿತು ಮಾತನಾಡಿದ ಸಚಿವ ರಾಮಲಿಂಗಾರೆಡ್ಡಿ, ಪಾದಚಾರಿಗಳ ಓಡಾಟಕ್ಕೆ ಫುಟ್‌ಪಾತ್‌ಗಳನ್ನು ಮುಕ್ತಗೊಳಿಸಬೇಕು ಎಂದರು. ಬೀದಿಬದಿ ವ್ಯಾಪಾರಿಗಳಿಗಾಗಿ ಹಾಕರ್ಸ್ ಝೋನ್ ವ್ಯವಸ್ಥೆ ಕಲ್ಪಿಸುವುದು ಸರ್ಕಾರದ ಜವಾಬ್ದಾರಿ. ಬಡ ವ್ಯಾಪಾರಿಗಳಿಗೆ ಪರ್ಯಾಯ ವ್ಯವಸ್ಥೆ ಕಲ್ಪಿಸದೆ ಅವರನ್ನು ಸ್ಥಳಾಂತರಿಸಬಾರದು ಎಂದು ಅವರು ಪ್ರತಿಪಾದಿಸಿದರು.

ಬೆಂಗಳೂರು, ಜು.17: ರಾಜಧಾನಿಯಲ್ಲಿ ಫುಟ್‌ಪಾತ್ ಒತ್ತುವರಿ ಸಮಸ್ಯೆ ಮತ್ತು ಬೀದಿಬದಿ ವ್ಯಾಪಾರಿಗಳ ಭವಿಷ್ಯದ ಕುರಿತು ಸಚಿವ ರಾಮಲಿಂಗಾರೆಡ್ಡಿ ಮಾತನಾಡಿದ್ದಾರೆ. ಫುಟ್‌ಪಾತ್‌ಗಳು ಸಾರ್ವಜನಿಕರ ಓಡಾಟಕ್ಕಾಗಿ ಇವೆ. ಅಲ್ಲಿರುವ ವ್ಯಾಪಾರಿಗಳನ್ನು ತೆರವುಗೊಳಿಸಲು ಯಾರೂ ಆಕ್ಷೇಪಿಸುವುದಿಲ್ಲ, ಆದರೆ ಅವರಿಗೆ ಪರ್ಯಾಯ ವ್ಯವಸ್ಥೆ ಕಲ್ಪಿಸುವುದು ಸರ್ಕಾರದ ಜವಾಬ್ದಾರಿ ಎಂದು ಅವರು ಹೇಳಿದರು. ಹಾಕರ್ಸ್ ಝೋನ್ ವ್ಯವಸ್ಥೆ ಪ್ರಪಂಚದಾದ್ಯಂತ ಇದೆ. ಬೆಂಗಳೂರಿನಲ್ಲೂ ಈ ವ್ಯವಸ್ಥೆಯನ್ನು ಜಾರಿಗೆ ತರಬೇಕು. ಬೀದಿಬದಿ ವ್ಯಾಪಾರಿಗಳು ಬಡವರಲ್ಲಿ ಬಡವರು. ಅವರಿಗೆ ಸೂಕ್ತ ಹಾಕರ್ಸ್ ಝೋನ್ ಒದಗಿಸಿ, ಪಾದಚಾರಿಗಳಿಗೆ ಫುಟ್‌ಪಾತ್‌ಗಳನ್ನು ಬಿಟ್ಟುಕೊಡುವುದು ಸೂಕ್ತ. ಕಾಂಗ್ರೆಸ್ ಪಕ್ಷದ ಪ್ರಣಾಳಿಕೆಯಲ್ಲಿಯೂ ಫುಟ್‌ಪಾತ್ ವ್ಯಾಪಾರಿಗಳಿಗೆ 20,000 ರೂ. ಒನ್ ಟೈಮ್ ನೆರವು ನೀಡುವುದಾಗಿ ಭರವಸೆ ನೀಡಲಾಗಿತ್ತು ಎಂದು ರಾಮಲಿಂಗಾರೆಡ್ಡಿ ನೆನಪಿಸಿದರು. ರಾಹುಲ್ ಗಾಂಧಿಯವರು ಕೂಡ ಇವರೊಂದಿಗೆ ಚರ್ಚೆ ನಡೆಸಿದ್ದರು. ಯುಪಿಎ ಸರ್ಕಾರದ ಅವಧಿಯಲ್ಲಿ ಸೋನಿಯಾ ಗಾಂಧಿ ಮತ್ತು ಮನಮೋಹನ್ ಸಿಂಗ್ ನೇತೃತ್ವದಲ್ಲಿ ಬೀದಿಬದಿ ವ್ಯಾಪಾರಿಗಳ ರಕ್ಷಣೆಗೆ ತಿದ್ದುಪಡಿ ತರಲಾಗಿತ್ತು ಎಂದು ಸಚಿವರು ವಿವರಿಸಿದರು. ಸಾರ್ವಜನಿಕರಿಗೆ ತೊಂದರೆಯಾಗದಂತೆ, ವ್ಯಾಪಾರಿಗಳಿಗೆ ಹಾಕರ್ಸ್ ಝೋನ್ ವ್ಯವಸ್ಥೆ ಕಲ್ಪಿಸುವುದು ರಾಜ್ಯ ಸರ್ಕಾರದ ಕರ್ತವ್ಯವಾಗಿದೆ ಎಂದು ಹೇಳಿದರು.

ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಅಕ್ಷಯ್​ ಪಲ್ಲಮಜಲು​​
ಅಕ್ಷಯ್​ ಪಲ್ಲಮಜಲು​​

ಅಕ್ಷಯ್ ಕುಮಾರ್ ಪಲ್ಲಮಜಲು ಅವರು ದಕ್ಷಿಣ ಕನ್ನಡ ಜಿಲ್ಲೆ, ಬಂಟ್ವಾಳ ತಾಲ್ಲೂಕಿನವರು. ಡಿಜಿಟಲ್ ಸುದ್ದಿ ಮಾಧ್ಯಮದಲ್ಲಿ​ 3 ವರ್ಷಗಳ ಅನುಭವ ಇದೆ. ಇದರ ಜತೆಗೆ ಸೋಶಿಯಲ್ ಮೀಡಿಯಾದ ಬಗ್ಗೆ ಹೆಚ್ಚಿನ ಆಸಕ್ತಿಯನ್ನು ಹೊಂದಿದ್ದಾರೆ, ಪ್ರಸ್ತುತ ಟಿವಿ9 ಕನ್ನಡದಲ್ಲಿ ಸೋಶಿಯಲ್​​​ ಮೀಡಿಯಾವನ್ನು ನೋಡಿಕೊಳ್ಳುತ್ತಿದ್ದಾರೆ. ಡಿಜಿಟಲ್ ಕ್ಷೇತ್ರದಲ್ಲಿ ಆಸಕ್ತಿಯನ್ನು ಹೊಂದಿದ್ದು, ಸೋಶಿಯಲ್​​​ ಮೀಡಿಯಾದಲ್ಲಿ ಇನ್ನೂ ಹೆಚ್ಚಿನ ವಿಚಾರಗಳನ್ನು ತಿಳಿದುಕೊಳ್ಳವ ಆಸಕ್ತಿ ಇದೆ. ಇದರ ಜತೆಗೆ ರಾಷ್ಟ್ರೀಯ ಸುದ್ದಿ ಮತ್ತು ಬ್ರೇಕಿಂಗ್​ ಸುದ್ದಿಗಳನ್ನು ಬರೆಯುತ್ತಾರೆ.

Read More