ಉದ್ಯೋಗಸ್ಥ ಮಹಿಳೆಯರಿಗೆ ಗುಡ್ ನ್ಯೂಸ್: ಕಾರ್ಮಿಕ ಸಚಿವ ಸಂತೋಷ್ ಲಾಡ್ ಹೇಳಿದ್ದೇನು?
ಕಂಪನಿಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಮಹಿಳಾ ಉದ್ಯೋಗಿಗಳಿಗೆ ಕರ್ನಾಟಕ ಕಾಂಗ್ರೆಸ್ ಸರ್ಕಾರ ಶುಭ ಸುದ್ದಿ ನೀಡಿದೆ. ಮಹಿಳೆಯರಿಗೆ ಪ್ರತಿ ತಿಂಗಳು ವೇತನ ಸಹಿತ ಒಂದು ದಿನ ಮುಟ್ಟಿನ ರಜೆ ನೀಡುವ ಪ್ರಸ್ತಾವನೆಗೆ ಕರ್ನಾಟಕ ಸಚಿವ ಸಂಪುಟ ಗುರುವಾರ ಅನುಮೋದನೆ ನೀಡಿದೆ.ಇನ್ನು ಈ ಬಗ್ಗೆ ಕಾರ್ಮಿಕ ಸಚಿವ ಸಂತೋಷ್ ಲಾಡ್ ಪ್ರತಿಕ್ರಿಯಿಸಿದ್ದು,ಮುಟ್ಟಿನ ರಜೆ ಕೊಡುವ ನಿಯಮ ಜಾರಿಗೆ ತರಲು ಕಳೆದ ಒಂದು ವರ್ಷದದಿಂದ ಪ್ರಯತ್ನ ಮಾಡಿದ್ದೆವು ಎಂದರು.
ಬೆಂಗಳೂರು, (ಅಕ್ಟೋಬರ್ 09): ಕಂಪನಿಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಮಹಿಳಾ ಉದ್ಯೋಗಿಗಳಿಗೆ ಕರ್ನಾಟಕ ಕಾಂಗ್ರೆಸ್ ಸರ್ಕಾರ ಶುಭ ಸುದ್ದಿ ನೀಡಿದೆ. ಮಹಿಳೆಯರಿಗೆ ಪ್ರತಿ ತಿಂಗಳು ವೇತನ ಸಹಿತ ಒಂದು ದಿನ ಮುಟ್ಟಿನ ರಜೆ ನೀಡುವ ಪ್ರಸ್ತಾವನೆಗೆ ಕರ್ನಾಟಕ ಸಚಿವ ಸಂಪುಟ ಗುರುವಾರ ಅನುಮೋದನೆ ನೀಡಿದೆ.ಇನ್ನು ಈ ಬಗ್ಗೆ ಕಾರ್ಮಿಕ ಸಚಿವ ಸಂತೋಷ್ ಲಾಡ್ ಪ್ರತಿಕ್ರಿಯಿಸಿದ್ದು,ಮುಟ್ಟಿನ ರಜೆ ಕೊಡುವ ನಿಯಮ ಜಾರಿಗೆ ತರಲು ಕಳೆದ ಒಂದು ವರ್ಷದದಿಂದ ಪ್ರಯತ್ನ ಮಾಡಿದ್ದೆವು. ಮಹಿಳೆಯರು ಹಲವು ಕೆಲಸಗಳನ್ನು ಮಾಡುತ್ತಾರೆ. ಮನೆ ಕೆಲಸದ ಜೊತೆ ಮಕ್ಕಳನ್ನು ನೋಡಿಕೊಳ್ಳಬೇಕು. ಮುಟ್ಟಿನ ಸಂದರ್ಭದಲ್ಲಿ ಮಾನಸಿಕವಾಗಿಯೂ ಒತ್ತಡ ಅನುಭವಿಸುತ್ತಾರೆ. ಹೀಗಾಗಿ ಮುಟ್ಟಿನ ರಜೆ ನೀಡುವ ಬಗ್ಗೆ ಪರಾಮರ್ಶೆ ನಡೆಸಲು ಸಮಿತಿ ರಚನೆ ಮಾಡಿದ್ದೆವು. ಸಮಿತಿ 6 ದಿನಗಳ ಕಾಲ ರಜೆ ಕೊಡಬೇಕು ಎಂದು ಅಲಹೆ ನೀಡಿತ್ತು. ಸರಕಾರ ವಾರ್ಷಿಕ 12 ದಿನ ರಜೆ ಕೊಡುವ ನಿರ್ಧಾರವನ್ನು ಮಾಡಿದೆ. ಬೇರೆ ರಾಜ್ಯಗಳಲ್ಲಿ ಹೇಗೆ ಅನುಷ್ಠಾನವಾಗಿದೆ ಗೊತ್ತಿಲ್ಲ. ಕರ್ನಾಟಕಲ್ಲಿ ನಾವು ಅನುಷ್ಠಾನ ಮಾಡುತ್ತೇವೆ. ಎಲ್ಲ ವಲಯದಲ್ಲೂ ಅನ್ವಯವಾಗುತ್ತೆ. ಸರಕಾರಿ, ಖಾಸಗಿ ವಲಯದಲ್ಲೂ ಅನ್ವಯವಾಗಲಿದೆ ಎಂದು ತಿಳಿಸಿದರು.

