ಸಿದ್ದರಾಮಯ್ಯನವರಿಂದ ದೂರ: ವಿಡಿಯೋ ವೈರಲ್ ಬಗ್ಗೆ ಸ್ಪಷ್ಟನೆ ನೀಡಿದ ಸತೀಶ್ ಜಾರಕಿಹೊಳಿ

Updated on: Jul 08, 2026 | 3:54 PM

ಮುಖ್ಯಾಂಶಗಳು

  • ಸಿದ್ದರಾಮಯ್ಯ, ಸತೀಶ್ ಜಾರಕಿಹೊಳಿ ದೂರ ಇರುವ ವೀಡಿಯೋ ವೈರಲ್
  • ಕಾರ್ಯಕ್ರಮದಲ್ಲಿ ಯಾರಾದರೂ ಸೀನಿಯರ್ ಬರುತ್ತಾರೇ ಅಂತಾ ಪಕ್ಕ ಕುಳಿತರಲಿಲ್ಲ
  • ಬೆಂಗಳೂರಿನಲ್ಲಿ ಸಚಿವ ಸತೀಶ್ ಜಾರಕಿಹೊಳಿ ಸ್ಪಷ್ಟನೆ

ಸಿದ್ದರಾಮಯ್ಯ, ಸತೀಶ್ ದೂರ ಇರುವ ವಿಡಿಯೋವೊಂದು ವೈರಲ್ ಆಗಿದೆ. ಇದಕ್ಕೆ ಇದೀಗ ಸತೀಶ್ ಜಾರಕಿಹೊಳಿ ಸ್ಪಷ್ಟನೆ ನೀಡಿದ್ದು, ಹಿಂದಿನ ಎಲ್ಲಾ ವಿಡಿಯೋಗಳನ್ನು ನೋಡಿದರೂ ಹಾಗೆಯೇ ಇವೆ. ಹಿಂದೆ ಹೇಗೆ ಇದ್ದೇವೆಯೋ ಈಗಲೂ ನಾವು ಹಾಗಿಯೇ ಇದ್ದೇವೆ. ನಿನ್ನೆ ಕಾರ್ಯಕ್ರಮದಲ್ಲಿ ಸೀನಿಯರ್ ಬರ್ತಾರೆಂದು ಕುಳಿತಿರಲಿಲ್ಲ. 10 ವರ್ಷದಿಂದ ಸಿದ್ದರಾಮಯ್ಯ ಹೇಗಿದ್ದಾರೋ ಈಗಲೂ ಹಾಗೆ ಇದ್ದಾರೆ. ಜೊತೆಯಲ್ಲಿ ಕೂತಿಲ್ಲ ಅಂದಾಕ್ಷಣ ಮಾತನಾಡಲ್ಲ ಅನ್ನೋದು ಸರಿಯಲ್ಲ ಎಂದು ಹೇಳಿದ್ದಾರೆ. ಇದರೊಂದಿಗೆ ಅಂತೆ-ಕಂತೆಗಳಿಗೆ ತೆರೆ ಎಳೆದಿದ್ದಾರೆ.

ಬೆಂಗಳೂರು, (ಜುಲೈ 08): ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಸಚಿವ ಸತೀಶ್ ಜಾರಕಿಹೊಳಿ ನಡುವಿನ ಸಂಬಂಧ ಹಳಸಿದೆ ಎನ್ನುವ ಮಾತುಗಳು ಕೇಳಿಬರುತ್ತಿವೆ.ಡಿಕೆ ಶಿವಕುಮಾರ್ ಅವರು ಸಿಎಂ ಆಗುತ್ತಿದ್ದಂತೆಯೇ ಸಿದ್ದರಾಮಯ್ಯ ಮತ್ತು ಸತೀಶ್ ಜಾರಕಿಹೊಳಿ ನಡುವೆ ಆತ್ಮೀಯತೆ ಇಲ್ಲ. ಅಂತರ ಕಾಯ್ದುಕೊಳ್ಳುತ್ತಿದ್ದಾರೆ ಎನ್ನವ ಗುಸು ಗುಸು ರಾಜ್ಯ ರಾಜಖಾರಣದಲ್ಲಿ ಹರಿದಾಡುತ್ತಿದೆ.  ಸಿದ್ದರಾಮಯ್ಯನವರನ್ನು ಸಿಎಂ ಕುರ್ಚಿಯಿಂದ ಕೆಳಗಿಳಿಸಲು ಸತೀಶ್ ಜಾರಕಿಹೊಳಿ ಅವರು ಸಹಿ ಸಂಗ್ರಹಿಸಿದ್ದರು ಎನ್ನುವ ಆರೋಪ ಕೇಳಿಬಂದಿದ್ದವು. ಇದು ಇಬ್ಬರು ನಾಯಕರ ಅಭಿಮಾನಿಗಳ ನಡುವೆ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿತ್ತು. ಇದರ ಬೆನ್ನಲ್ಲೇ ಇದೀಗ ಸಿದ್ದರಾಮಯ್ಯ, ಸತೀಶ್ ದೂರ ಇರುವ ವಿಡಿಯೋವೊಂದು ವೈರಲ್ ಆಗಿದೆ.

ಇದಕ್ಕೆ ಇದೀಗ ಸತೀಶ್ ಜಾರಕಿಹೊಳಿ ಸ್ಪಷ್ಟನೆ ನೀಡಿದ್ದು, ಹಿಂದಿನ ಎಲ್ಲಾ ವಿಡಿಯೋಗಳನ್ನು ನೋಡಿದರೂ ಹಾಗೆಯೇ ಇವೆ. ಹಿಂದೆ ಹೇಗೆ ಇದ್ದೇವೆಯೋ ಈಗಲೂ ನಾವು ಹಾಗಿಯೇ ಇದ್ದೇವೆ. ನಿನ್ನೆ ಕಾರ್ಯಕ್ರಮದಲ್ಲಿ ಸೀನಿಯರ್ ಬರ್ತಾರೆಂದು ಕುಳಿತಿರಲಿಲ್ಲ. 10 ವರ್ಷದಿಂದ ಸಿದ್ದರಾಮಯ್ಯ ಹೇಗಿದ್ದಾರೋ ಈಗಲೂ ಹಾಗೆ ಇದ್ದಾರೆ. ಜೊತೆಯಲ್ಲಿ ಕೂತಿಲ್ಲ ಅಂದಾಕ್ಷಣ ಮಾತನಾಡಲ್ಲ ಅನ್ನೋದು ಸರಿಯಲ್ಲ ಎಂದು ಹೇಳಿದ್ದಾರೆ. ಇದರೊಂದಿಗೆ ಅಂತೆ-ಕಂತೆಗಳಿಗೆ ತೆರೆ ಎಳೆದಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ರಮೇಶ್ ಬಿ. ಜವಳಗೇರಾ

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More