ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದೇನು?
ಸಚಿವ ಸಂಪುಟ ವಿಸ್ತರಣೆಯ ಕುರಿತು ಪ್ರತಿಕ್ರಿಯಿಸಿದ ಸಚಿವ ಸತೀಶ್ ಜಾರಕಿಹೊಳಿ, ಪ್ರಾದೇಶಿಕತೆ ಮತ್ತು ಜಾತಿ ಆಧಾರದ ಮೇಲೆ ನಿರ್ಧಾರ ಕೈಗೊಳ್ಳಲಾಗುವುದು ಎಂದಿದ್ದಾರೆ. ಹಾಸನಕ್ಕೆ ಇನ್ನೂ ಪ್ರಾತಿನಿಧ್ಯ ಸಿಕ್ಕಿಲ್ಲ ಎಂದು ತಿಳಿಸಿದ ಅವರು, ಪಕ್ಷಕ್ಕೆ ಅನುಕೂಲವಾಗುವಂತೆ ಮುಸ್ಲಿಂ ಸಮುದಾಯಕ್ಕೆ ಇನ್ನಿಬ್ಬರಿಗೆ ಸ್ಥಾನ ನೀಡುವ ಬಗ್ಗೆ ಹೇಳಲಾಗಿದೆ. ಸಂಪುಟ ವಿಸ್ತರಣೆ ದಿನಾಂಕ ನಿಗದಿಯಾಗಿಲ್ಲ, ಶೀಘ್ರ ನಿರ್ಧಾರದ ನಿರೀಕ್ಷೆಯಿದೆ.
ಬೆಳಗಾವಿ, ಜೂ.23: ಮುಂಗಾರು ಅಧಿವೇಶನ ಹಾಗೂ ಸಚಿವ ಸಂಪುಟ ವಿಸ್ತರಣೆಯ ಕುರಿತು ಮಾಧ್ಯಮದವರ ಪ್ರಶ್ನೆಗಳಿಗೆ ಪ್ರತಿಕ್ರಿಯಿಸಿದ ಸಚಿವ ಸತೀಶ್ ಜಾರಕಿಹೊಳಿ, ಸಚಿವ ಸಂಪುಟ ರಚನೆಯಲ್ಲಿ ಪ್ರಾದೇಶಿಕತೆ ಮತ್ತು ಜಾತಿ ಆಧಾರಿತ ಪ್ರಾತಿನಿಧ್ಯವನ್ನು ಗಮನದಲ್ಲಿಟ್ಟುಕೊಳ್ಳಲಾಗುವುದು ಎಂದು ಹೇಳಿದ್ದಾರೆ. ಹಾಸನ ಜಿಲ್ಲೆಗೆ ಸಚಿವ ಸ್ಥಾನ ಸಿಕ್ಕಿಲ್ಲ ಎಂಬ ಕುರಿತು ಮಾತನಾಡಿದ ಅವರು, ಇನ್ನು ಹಾಸನಕ್ಕೆ ಸಿಕ್ಕಿಲ್ಲ ಎಂದಿದ್ದಾರೆ. ಪಕ್ಷದ ನಿಲುವು ಸ್ಪಷ್ಟಪಡಿಸಿದ ಸಚಿವ ಜಾರಕಿಹೊಳಿ, ಮುಸ್ಲಿಂ ಸಮುದಾಯದ ಮತ್ತೆ ಇಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಪಕ್ಷದಲ್ಲಿ ಚರ್ಚೆಯಾಗಿದೆ. ಮುಂದಿನ ನಿರ್ಧಾರ ಪಕ್ಷಕ್ಕೆ ಬಿಟ್ಟಿದ್ದು. ಪಕ್ಷಕ್ಕೆ ಯಾವ ರೀತಿ ಅನುಕೂಲ ಆಗುತ್ತದೆ ಎಂಬುದನ್ನು ನೋಡಿ, ಪ್ರಾಂತ್ಯ ವೈಸ್, ಜಾತಿ ಆಧಾರದ ಮೇಲೆ ಇವನ್ನೆಲ್ಲಾ ಪರಿಗಣಿಸಿ ನಿರ್ಧಾರ ಕೈಗೊಳ್ಳಲಾಗುವುದು ಎಂದು ಹೇಳಿದರು. ಸಂಪುಟ ವಿಸ್ತರಣೆಯ ಬಗ್ಗೆ ದಿನಾಂಕ ನಿಗದಿ ಕುರಿತು ಕೇಳಿದಾಗ, ಯಾವುದೇ ನಿರ್ದಿಷ್ಟ ದಿನಾಂಕದ ಬಗ್ಗೆ ನನಗೆ ಮಾಹಿತಿ ಇಲ್ಲ. ಶೀಘ್ರವಾಗಿ ನಿರ್ಧಾರ ಕೈಗೊಳ್ಳಬೇಕು ಎಂಬುದು ನಮ್ಮ ಆಸೆ ಎಂದರು. ಹಿಂದಿನ ಸಿದ್ದರಾಮಯ್ಯ ಸರ್ಕಾರದ ಅವಧಿಗೂ, ಈಗಿನ ಮುಖ್ಯಮಂತ್ರಿಯವರ ಅವಧಿಗೂ ಬದಲಾವಣೆಗಳಿವೆ ಎಂದು ಸ್ಪಷ್ಟಪಡಿಸಿದರು.
ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
