ಮನೆಯಲ್ಲಿ ಕೋಟ್ಯಂತರ ರೂ ನಗದು ಪತ್ತೆ: ಸಚಿವ ಸತೀಶ್ ಜಾರಕಿಹೊಳಿಗೆ ಎದುರಾಯ್ತು ಇಡಿ ಸಂಕಷ್ಟ

Edited By:

Updated on: Sep 10, 2026 | 3:47 PM

ವಿದೇಶದಲ್ಲಿ ಅಕ್ರಮ ಹೂಡಿಕೆ ಸಂಬಂಧ ವಿದೇಶಿ ವಿನಿಮಯ ನಿರ್ವಹಣಾ ಕಾಯ್ದೆ (ಫೆಮಾ) ಉಲ್ಲಂಘನೆ ಆರೋಪದಡಿ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಮನೆ ಮೇಲೆ ಇಡಿ ದಾಳಿ ನಡೆಸಿದೆ. ಸತೀಶ್ ಜಾರಕಿಹೊಳಿ ಬೆಳಗಾವಿ ಹಾಗೂ ಬೆಂಗಳೂರು ಮನೆ, ಕಚೇರಿ, ಆಪ್ತರ ಮನೆ ಅಂತಾ 18 ಕಡೆ ಇಡಿ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಈ ವೇಳೆ ಹಲವು ಮಹತ್ವದ ದಾಖಲೆಗಳ ಜೊತೆಗೆ ಬರೋಬ್ಬರಿ ಸತೀಶ್ ಪುತ್ರಿ ಚಿಕ್ಕೋಡಿ ಕ್ಷೇತ್ರದ ಕಾಂಗ್ರೆಸ್ ಸಂಸದೆ ಪ್ರಿಯಾಂಕಾ ನಿವಾಸದಲ್ಲಿ 1.2 ಕೋಟಿ ರೂಪಾಯಿ ನಗದು ಪತ್ತೆಯಾಗಿದೆ. ಇದರೊಂದಿಗೆ ದಾಳಿಯಲ್ಲಿ ಒಟ್ಟು ಒಟ್ಟು 3 ಕೋಟಿ ರೂ. ಹಣ ಪತ್ತೆಯಾಗಿದ್ದು, ಇದು ಸತೀಶ್ ಜಾರಕಿಹೊಳಿಗೆ ಸಂಕಷ್ಟ ತಂದಿಟ್ಟಿದೆ.

ಬೆಳಗಾವಿ/ಬೆಂಗಳೂರು, (ಸೆಪ್ಟೆಂಬರ್ 10): ವಿದೇಶದಲ್ಲಿ ಅಕ್ರಮ ಹೂಡಿಕೆ ಸಂಬಂಧ ವಿದೇಶಿ ವಿನಿಮಯ ನಿರ್ವಹಣಾ ಕಾಯ್ದೆ (ಫೆಮಾ) ಉಲ್ಲಂಘನೆ ಆರೋಪದಡಿ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಮನೆ ಮೇಲೆ ಇಡಿ ದಾಳಿ ನಡೆಸಿದೆ. ಸತೀಶ್ ಜಾರಕಿಹೊಳಿ ಬೆಳಗಾವಿ ಹಾಗೂ ಬೆಂಗಳೂರು ಮನೆ, ಕಚೇರಿ, ಆಪ್ತರ ಮನೆ ಅಂತಾ 18 ಕಡೆ ಇಡಿ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಈ ವೇಳೆ ಹಲವು ಮಹತ್ವದ ದಾಖಲೆಗಳ ಜೊತೆಗೆ ಬರೋಬ್ಬರಿ ಸತೀಶ್ ಪುತ್ರಿ ಚಿಕ್ಕೋಡಿ ಕ್ಷೇತ್ರದ ಕಾಂಗ್ರೆಸ್ ಸಂಸದೆ ಪ್ರಿಯಾಂಕಾ ನಿವಾಸದಲ್ಲಿ 1.2 ಕೋಟಿ ರೂಪಾಯಿ ನಗದು ಪತ್ತೆಯಾಗಿದೆ. ಇದರೊಂದಿಗೆ ದಾಳಿಯಲ್ಲಿ ಒಟ್ಟು ಒಟ್ಟು 3 ಕೋಟಿ ರೂ. ಹಣ ಪತ್ತೆಯಾಗಿದ್ದು, ಇದು ಸತೀಶ್ ಜಾರಕಿಹೊಳಿಗೆ ಸಂಕಷ್ಟ ತಂದಿಟ್ಟಿದೆ.ಹೌದು… ದಾಳಿ ವೇಳೆ ಹಣ ಪತ್ತೆಯಾಗಿರುವ ಬಗ್ಗೆ ಇಡಿ ಅಧಿಕಾರಿಗಳು, ದೆಹಲಿಯಲ್ಲಿರುವ ಕೇಂದ್ರ ಕಚೇರಿಗೆ ಮಾಹಿತಿ ನೀಡಿದ್ದಾರೆ. ಹಣದ ಮಾಹಿತಿ ಜೊತೆಗೆ 34 ಗಂಟೆ ನಡೆದ ಕಾರ್ಯಾಚರಣೆಯ ಸಂಪೂರ್ಣ ಮಾಹಿತಿ ರವಾನಿಸಿದ್ದಾರೆ. ಹೀಗಾಗಿ ಕೇಂದ್ರ ಕಚೇರಿ ಏನು ಹೇಳುತ್ತೆ ಎನ್ನುವುದೇ ಸತೀಶ್ ಜಾರಕಿಹೊಳಿಯ ಭವಿಷ್ಯ ನಿಂತಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published on: Sep 10, 2026 03:43 PM
Loading...
Unable to load recommendations.
Follow Us