ಶಕ್ತಿ ಪ್ರದರ್ಶನಕ್ಕೆ ಮುಂದಾದ ಸಚಿವ ಸತೀಶ್ ಜಾರಕಿಹೊಳಿ?: ನವೆಂಬರ್‌ನಲ್ಲಿ ನಾಯಕ ಸಮುದಾಯದ ಬೃಹತ್ ಸಮಾವೇಶಕ್ಕೆ ಸಿದ್ಧತೆ
ಸಚಿವ ಸತೀಶ್ ಜಾರಕಿಹೊಳಿ ಅವರು ನವೆಂಬರ್‌ನಲ್ಲಿ ನಡೆಯಲಿರುವ ನಾಯಕ ಸಮುದಾಯದ ಬೃಹತ್ ಸಮಾವೇಶಕ್ಕೆ ಸಿದ್ಧತೆಗಳನ್ನು ಆರಂಭಿಸಿದ್ದಾರೆ. ತಮ್ಮ ಗೃಹ ಕಚೇರಿಯಲ್ಲಿ ನಡೆದ ಮಹತ್ವದ ಸಭೆಯಲ್ಲಿ, ಕೆ.ಎನ್. ರಾಜಣ್ಣ ಮತ್ತು ವಾಲ್ಮೀಕಿ ಸಮುದಾಯದ ಶ್ರೀಗಳೊಂದಿಗೆ ಸಮಾವೇಶದ ಪೂರ್ವ ಸಿದ್ಧತೆಗಳ ಕುರಿತು ಚರ್ಚಿಸಿದರು. ಜಿಲ್ಲಾವಾರು ಪೂರ್ವಭಾವಿ ಸಭೆಗಳನ್ನು ನಡೆಸಲು ಸೂಚನೆ ನೀಡಿದ್ದಾರೆ.
ಬೆಂಗಳೂರು, ಸೆಪ್ಟೆಂಬರ್ 24: ನಾಯಕ ಸಮುದಾಯದ ಬೃಹತ್ ಸಮಾವೇಶವನ್ನು ನವೆಂಬರ್‌ನಲ್ಲಿ ನಡೆಸಲು ಸಚಿವ ಸತೀಶ್ ಜಾರಕಿಹೊಳಿ ಸಿದ್ಧತೆಗಳನ್ನು ಆರಂಭಿಸಿದ್ದಾರೆ. ಈ ಸಂಬಂಧ, ಸಚಿವರು ತಮ್ಮ ಗೃಹ ಕಚೇರಿಯಲ್ಲಿ ಮಹತ್ವದ ಸಭೆಯೊಂದನ್ನು ನಡೆಸಿದ್ದಾರೆ. ನವೆಂಬರ್‌ನಲ್ಲಿ ನಡೆಯುವ ಈ ಸಮಾವೇಶದ ಪೂರ್ವ ಸಿದ್ಧತೆಗಳ ಬಗ್ಗೆ ಸಚಿವರು ಸಂಬಂಧಪಟ್ಟವರೊಂದಿಗೆ ಮಾತುಕತೆ ನಡೆಸಿದರು. ಸಭೆಯಲ್ಲಿ ಕೆ.ಎನ್. ರಾಜಣ್ಣ ಮತ್ತು ವಾಲ್ಮೀಕಿ ಸಮುದಾಯದ ಶ್ರೀಗಳು ಭಾಗವಹಿಸಿದ್ದರು. ಇತ್ತೀಚೆಗೆ ಸತೀಶ್ ಜಾರಕಿಹೊಳಿ ಅವರ ಮೇಲೆ ನಡೆದ ಇಡಿ ದಾಳಿ ಮತ್ತು ಅದಾದ ನಂತರದ ಬೆಳವಣಿಗೆಗಳ ಹಿನ್ನೆಲೆಯಲ್ಲಿ ಈ ಸಮಾವೇಶಕ್ಕೆ ಹೆಚ್ಚಿನ ಮಹತ್ವ ಬಂದಿದೆ. ಈ ಮೂಲಕ ಸಚಿವರು ಶಕ್ತಿ ಪ್ರದರ್ಶನಕ್ಕೆ ಮುಂದಾಗುತ್ತಿದ್ದಾರೆಯೇ ಎಂಬ ಕುತೂಹಲಕ್ಕೆ ಕಾರಣವಾಗಿದೆ.
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.
Follow Us

