Karnataka Assembly Polls: ಬಜರಂಗದ ದಳದ ಸದಸ್ಯರೊಂದಿಗೆ ಹನುಮಾನ್ ಚಾಲೀಸ ಪಠಿಸಿದ ಸಚಿವೆ ಶಶಿಕಲಾ ಜೊಲ್ಲೆ

ಅರುಣ್​ ಕುಮಾರ್​ ಬೆಳ್ಳಿ

Updated on: May 06, 2023 | 1:37 PM

ಹನುಮಾನ್ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ಬಳಿಕ ಅವರು ಅಲ್ಲಿ ನೆರದಿದ್ದ 300 ಕ್ಕೂ ಹೆಚ್ಚು ಬಜರಂಗ ದಳದ ಕಾರ್ಯಕರ್ತರೊಂದಿಗೆ ಸೇರಿ ಹನುಮಾನ ಚಾಲೀಸ ಪಠಿಸಿದರು.

ಚಿಕ್ಕೋಡಿ: ನಿಮಗೆ ನೆನಪಿರಬಹುದು, 2-3 ದಿನಗಳ ಹಿಂದೆ ಬೆಂಗಳೂರಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡುವಾಗ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್(DK Shivakumar), ತಮ್ಮೊಂದಿಗೆ ಹನುಮಾನ್ ಚಾಲೀಸ (Hanuman Chalisa) ಪಠಿಸುವಂತೆ ಬಿಜೆಪಿ ನಾಯಕರಿಗೆ ಸವಾಲೆಸೆದಿದ್ದರು. ಪ್ರಾಯಶಃ ಸಚಿವೆ ಶಶಿಕಲಾ ಜೊಲ್ಲೆ (Shashikala Jolle) ಅವರ ಸವಾಲು ಸ್ವೀಕರಿಸಿದಂತೆ ಕಾಣುತ್ತಿದೆ. ಬೆಳಗಾವಿ ಜಿಲ್ಲೆಯ ನಿಪ್ಪಾಣಿ ತಾಲ್ಲೂಕಿನ ಸಾಕರವಾಡಿಯಲ್ಲಿರುವ ಹನುಮಾನ್ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ಬಳಿಕ ಅವರು ಅಲ್ಲಿ ನೆರದಿದ್ದ 300 ಕ್ಕೂ ಹೆಚ್ಚು ಬಜರಂಗ ದಳದ ಕಾರ್ಯಕರ್ತರೊಂದಿಗೆ ಸೇರಿ ಹನುಮಾನ ಚಾಲೀಸ ಪಠಿಸಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಮತ್ತಷ್ಟು ಚುನಾವಣಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.