ಬೆಳೆ ವಿಮೆ ವಿಚಾರಕ್ಕೆ ಪ್ರಗತಿ ಪರಿಶೀಲನಾ ಸಭೆಯಲ್ಲಿ ಸಚಿವ ಶಿವಲಿಂಗೇಗೌಡ ಗರಂ: ಅಧಿಕಾರಿಗಳಿಗೆ ಖಡಕ್​​ ಸೂಚನೆ

Edited By:

Updated on: Aug 16, 2026 | 10:47 AM

ಬೆಳೆ ವಿಮೆ ಪಾವತಿ ವಿಳಂಬದಿಂದ ರೈತರು ಸಂಕಷ್ಟದಲ್ಲಿರುವ ಬಗ್ಗೆ ಸಚಿವ ಶಿವಲಿಂಗೇಗೌಡರು ಅಧಿಕಾರಿಗಳ ಮೇಲೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ವಿಮಾ ಕಂಪನಿಗಳ ಬದಲು ಜಿಲ್ಲಾ ಕೃಷಿ ಅಧಿಕಾರಿಗಳೇ ರೈತರ ಖಾತೆಗೆ ಪರಿಹಾರ ತಲುಪಿಸುವ ಜವಾಬ್ದಾರಿ ತೆಗೆದುಕೊಳ್ಳಬೇಕು ಎಂದು ಸಚಿವರು ತಾಕೀತು ಮಾಡಿದ್ದಾರೆ. ತಪ್ಪು ವರದಿಗಳಿಂದ ರೈತರಿಗೆ ಆಗಿರುವ ಅನ್ಯಾಯ ಸರಿಪಡಿಸಲು ಕೂಡಲೇ ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದಾರೆ.

ಹಾಸನ, ಆಗಸ್ಟ್​​ 16: ರೈತರ ಬೆಳೆ ವಿಮೆ ವಿಚಾರದಲ್ಲಿ ವಿಮಾ ಕಂಪನಿ ಹಾಗೂ ಕೃಷಿ ಅಧಿಕಾರಿಗಳ ವಿರುದ್ಧ ಹಾಸನ ಜಿಲ್ಲಾ ಉಸ್ತುವಾರಿ ಸಚಿವ ಶಿವಲಿಂಗೇಗೌಡ ಗರಂ ಆದ ಪ್ರಸಂಗ ಪ್ರಗತಿ ಪರಿಶೀಲನಾ ಸಭೆಯಲ್ಲಿ ನಡೆದಿದೆ. ರೈತರು ವಿಮೆ ಹಣ ಕಟ್ಟಿದ್ರೆ ಅವರಿಗೆ ಪರಿಹಾರವೇ ಸಿಗಲಿಲ್ಲ. ಬೆಳೆ ಚೆನ್ನಾಗಿರುವ ಕಡೆ ಸಮೀಕ್ಷೆ ನಡೆಸಿ ಬೆಳೆ ಹಾನಿಯೇ ಇಲ್ಲ ಎಂದು ಸುಳ್ಳು ವರದಿ ಕೊಡ್ತಿದ್ದರು. ಹಾಗಾಗಿ ರೈತರು ಈ ವಿಮೆ ಮೇಲೆ ಆಸಕ್ತಿಯನ್ನೇ ಬಿಟ್ಟರು. ಆದರೆ ಇನ್ಮುಂದೆ ಇದೆಲ್ಲ ನಡೆಯಲ್ಲ. ಈ ಬಾರಿ ರೈತರು ಸಂಪೂರ್ಣ ಬೆಳೆ ಕಳೆದುಕೊಂಡಿದ್ದಾರೆ. ಬಿತ್ತನೆ ಆಗದಿರುವ ಕಡೆ ಶೇ.25ರಷ್ಟು ಪರಿಹಾರ ಕೊಡಬೇಕು. ವಿಮಾ ಕಂಪನಿಯವರನ್ನು ನಾನು ಕೇಳಲ್ಲ. ಕೃಷಿ ಇಲಾಖೆಯ ಅಧಿಕಾರಿಗಳೇ ಇದು ನಿಮ್ಮ ಜವಾಬ್ದಾರಿ. ನೀವೇ ಗಮನಹರಿಸಿ ಪರಿಹಾರ ಕೊಡಿಸಲು ಕ್ರಮವಹಿಸಿ ಎಂದು ಸಚಿವರು ಸೂಚಿಸಿದ್ದಾರೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Loading...
Unable to load recommendations.
Follow Us
ಮಂಜುನಾಥ ಕೆಬಿ

ಮಂಜುನಾಥ ಕೆಬಿ ಪತ್ರಿಕೋದ್ಯಮದಲ್ಲಿ ಕಳೆದ 17 ವರ್ಷಗಳಿಂದ ಸೇವೆ ಮಾಡುತ್ತಿದ್ದೇನೆ. ಕರುನಾಡಿನ ಹೆಮ್ಮೆಯ ಸುದ್ದಿ ವಾಹಿನಿ ಟಿವಿ9 ಕನ್ನಡ ಜೊತೆಗೆ 15ನೇ ವರ್ಷದ ಪಯಣ ನನ್ನದು. ಓದಿದ್ದು, ಮೈಸೂರು ವಿವಿಯಲ್ಲಿ ಕಾನೂನು ಪದವಿ, ಎರಡು ವರ್ಷ ವಕೀಲ ವೃತ್ತಿ ಬಳಿಕ ಮಾಧ್ಯಮ ಕ್ಷೇತ್ರಕ್ಕೆ ಆಗಮಿಸಿ ಟಿವಿ9 ವಾಹಿನಿ ಮೂಲಕ ಸಮಸ್ಯೆಗೆ ಧ್ವನಿಯಾಗಿ ಕಾಯಕ. ಕೊಡಗಿನಲ್ಲಿ ಐದುವರೆ ವರ್ಷ ವರದಿಗಾರನಾಗಿ ಕರ್ತವ್ಯ ನಿರ್ವಹಿಸಿದ್ದು, ಇದೀಗ ಹಾಸನದ ಹಿರಿಯ ವರದಿಗಾರನಾಗಿ ಕರ್ತವ್ಯ ನಿರ್ವಹಣೆ ಮಾಡುತ್ತಿದ್ದೇನೆ.

Read More