AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಿತ್ತುಹೋದ ತುಂಗಭದ್ರಾ ಡ್ಯಾಂನ 19ನೇ ಕ್ರಸ್ಟ್ ಗೇಟ್.. ಜಲಾಶಯ ಸಂಪೂರ್ಣ ಖಾಲಿ ಮಾಡ್ತಾರಾ?

ಕಿತ್ತುಹೋದ ತುಂಗಭದ್ರಾ ಡ್ಯಾಂನ 19ನೇ ಕ್ರಸ್ಟ್ ಗೇಟ್.. ಜಲಾಶಯ ಸಂಪೂರ್ಣ ಖಾಲಿ ಮಾಡ್ತಾರಾ?

ರಮೇಶ್ ಬಿ. ಜವಳಗೇರಾ
|

Updated on: Aug 11, 2024 | 11:29 AM

Share

ಮಳೆಯಿಂದಾಗಿ ಹೊಸಪೇಟೆ ನಗರದ ಹೊರಭಾಗದಲ್ಲಿರೋ ತುಂಗಾಭದ್ರಾ ಡ್ಯಾಂ ಸಂಪೂರ್ಣ ಭರ್ತಿಯಾಗಿದ್ದು, ಇದೀಗ ಜಲಾಶಯ ಗೇಟ್​ಗೆ ಭಾರೀ ಹಾನಿಯಾಗಿದೆ. ಜಲಾಶಯದ 19ನೇ ಚೈನ್​ಲಿಂಕ್​ ಗೇಟ್​ ಕಟ್​ ಆಗಿದೆ. ಇದರಿಂದ ಅಪಾರ ಪ್ರಮಾಣದ ನೀರು ಹರಿದು ಹೋಗುತ್ತಿದೆ. ಇನ್ನು ಈ ಗೇಟ್ ರಿಪೇರಿಗೆ ಎಷ್ಟು ನೀರು ಖಾಲಿ ಮಾಡ್ಬೇಕು ಎನ್ನುವ ವಿವರವನ್ನು ಸಚಿವ ಶಿವರಾಜ್ ತಂಗಡಗಿ ಮಾಹಿತಿ ನೀಡಿದ್ದಾರೆ.

ವಿಜಯನಗರ, (ಆಗಸ್ಟ್ 11): ತುಂಗಾಭದ್ರಾ ಜಲಾಶಯದ ಗೇಟ್​ ನಂಬರ್ 19ರ ಚೈನ್​ ಲಿಂಕ್​ ಕಟ್ ಆಗಿದ್ದು, ಭಾರೀ ಆತಂಕಕ್ಕೆ ಕಾರಣವಾಗಿದೆ. ಸದ್ಯ ತುಂಗಾಭದ್ರಾ ಡ್ಯಾಂ ಸಂಪೂರ್ಣ ಭರ್ತಿಯಾಗಿದ್ದು, ರೈತರು ಫುಲ್ ಖುಷ್ ಆಗಿದ್ದಾರೆ. ಆದ್ರೆ, ಇದೀಗ ಆತಂಕ ಎದುರಾಗಿದೆ. ಕಟ್​ ಆಗಿರುವ ಗೇಟ್​ ರಿಪೇರಿ ಮಾಡುವುದು ದೊಡ್ಡ ಕೆಲಸವಾಗಿದೆ. ಸದ್ಯ ಜಲಾಶಯ ಸಂಪೂರ್ಣ ಭರ್ತಿಯಾಗಿದ್ದರಿಂದ ರಿಪೇರಿ ಕಾರ್ಯಕ್ಕೆ ಅಡ್ಡಿಯಾಗಿದೆ. ಹೀಗಾಗಿ ನೀರು ಖಾಲಿ ಮಾಡಬೇಕಿದೆ. ಹೌದು… ಗೇಟ್​ ದುರಸ್ತಿಗೆ 50ರಿಂದ 60 ಟಿಎಂಸಿ ನೀರು ಹೊರ ಬಿಡಬೇಕಾದ ಪರಿಸ್ಥಿತಿ ಎದುರಾಗಿದೆ. ಈ ಹಿನ್ನೆಲೆಯಲ್ಲಿ ದಿನಕ್ಕೆ 2 ಲಕ್ಷ ಕ್ಯೂಸೆಕ್ ನೀರು ತುಂಗಭದ್ರಾ ನದಿಗೆ ಹರಿಸಬೇಕಾಗಿದೆ. ಇನ್ನೊಂದೆಡೆ ನದಿ ಹೊಳಹರಿವು ಕಡಿಮೆಯಾಗಿದ್ದರಿಂದ ಮತ್ತೆ ಜಲಾಶಯ ಭರ್ತಿಯಾಗುತ್ತೋ ಇಲ್ಲವೋ ಎನ್ನುವ ಆತಂಕ ರೈತರಲ್ಲಿದೆ. ಇನ್ನು ಈ ಬಗ್ಗೆ ಸಚಿವ ಶಿವರಾಜ್ ತಂಗಡಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ್ದು, ಏನೆಲ್ಲಾ ಹೇಳಿದ್ದಾರೆ ಎನ್ನುವುದನ್ನು ನೋಡಿ.

Follow Us
ರಮೇಶ್ ಬಿ. ಜವಳಗೇರಾ
ರಮೇಶ್ ಬಿ. ಜವಳಗೇರಾ

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More