AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯಾರನ್ನು ಕೇಳಿ ನೀರು ಬಿಟ್ಟಿದ್ದೀರಾ?: ಅಧಿಕಾರಿಗಳ ವಿರುದ್ಧ ಶೋಕಾಸ್ ನೋಟಿಸ್ ಜಾರಿ; ಸಚಿವ ತಂಗಡಗಿ ಆಕ್ರೋಶ

“ಯಾರನ್ನು ಕೇಳಿ ನೀರು ಬಿಟ್ಟಿದ್ದೀರಾ?”: ಅಧಿಕಾರಿಗಳ ವಿರುದ್ಧ ಶೋಕಾಸ್ ನೋಟಿಸ್ ಜಾರಿ; ಸಚಿವ ತಂಗಡಗಿ ಆಕ್ರೋಶ

ಶಿವಕುಮಾರ್ ಪತ್ತಾರ್
| Edited By: |

Updated on: Sep 29, 2026 | 2:39 PM

Share

ತುಂಗಭದ್ರಾ ಡ್ಯಾಮ್‌ನಿಂದ ಕಾರ್ಖಾನೆಗಳಿಗೆ ಅನಧಿಕೃತ ನೀರು ಬಿಟ್ಟಿರುವ ವಿಚಾರಕ್ಕೆ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ್ ತಂಗಡಗಿ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಯಾವ ಆದೇಶದ ಮೇಲೆ ನೀರು ಬಿಡಲಾಗಿದೆ ಎಂದು ಪ್ರಶ್ನಿಸಿರುವ ಸಚಿವರು, ಮುನಿರಾಬಾದ್‌ನ ನೀರಾವರಿ ಕಚೇರಿ ಅಧಿಕಾರಿಗಳಿಗೆ ಶೋಕಾಸ್ ನೋಟಿಸ್ ಜಾರಿಗೊಳಿಸುವಂತೆ ಸೂಚಿಸಿದ್ದಾರೆ.

ಬೆಂಗಳೂರು, ಸ.29: ತುಂಗಭದ್ರಾ ಡ್ಯಾಮ್‌ನಿಂದ ಕಾರ್ಖಾನೆಗಳಿಗೆ ಅನಧಿಕೃತವಾಗಿ ನೀರು ಬಿಟ್ಟಿರುವ ಘಟನೆಗೆ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ್ ತಂಗಡಗಿ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಸಂಬಂಧ ಸ್ಪಷ್ಟನೆ ನೀಡುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಶೋಕಾಸ್ ನೋಟಿಸ್ ಜಾರಿಗೊಳಿಸುವಂತೆ ಸಚಿವರು ಸೂಚನೆ ನೀಡಿದ್ದಾರೆ. ಯಾವ ಆದೇಶ ಇಟ್ಟುಕೊಂಡು ಕಾರ್ಖಾನೆಗಳಿಗೆ ನೀರು ಬಿಡಲಾಗಿದೆ ಎಂದು ಪ್ರಶ್ನಿಸಿರುವ ಸಚಿವರು, ಅಧಿಕಾರಿಗಳು ನೀಡುವ ಯಾವುದೇ ಅನಧಿಕೃತ ನೋಟಿಸ್‌ಗಳಿಗೆ ಮಾನ್ಯತೆ ನೀಡುವುದಿಲ್ಲ ಎಂದು ಖಡಾಖಂಡಿತವಾಗಿ ತಿಳಿಸಿದ್ದಾರೆ. ಮುನಿರಾಬಾದ್‌ನಲ್ಲಿರುವ ನೀರಾವರಿ ವಲಯದ ಕಚೇರಿಯ ಅಧಿಕಾರಿಗಳು ಯಾವ ಆದೇಶದ ಮೇಲೆ ನೀರು ಬಿಡಲು ಮುಂದಾದರು ಎಂಬುದನ್ನು ವಿವರಿಸುವಂತೆ ಸೂಚಿಸಲಾಗಿದೆ. “ನನ್ನ ಅಧ್ಯಕ್ಷತೆಯಲ್ಲಿ ನಡೆದ ಐಸಿಸಿ ಸಭೆಯಲ್ಲಿ ಇಂತಹ ಯಾವುದೇ ನಿರ್ಧಾರವಾಗಿಲ್ಲ. ರೈತರು ನನಗೆ ಮಾಹಿತಿ ನೀಡಿದ ತಕ್ಷಣವೇ ನಾನು ಅಧಿಕಾರಿಗಳೊಂದಿಗೆ ಮಾತನಾಡಿದ್ದೇನೆ. ಕಾರ್ಖಾನೆಗಳಿಗೆ ನೀರು ಬಿಡಲು ಅಧಿಕಾರ ಕೊಟ್ಟವರು ಯಾರು? ಇದಕ್ಕೆ ಅವರು ಉತ್ತರ ನೀಡಬೇಕು” ಎಂದು ಸಚಿವ ತಂಗಡಗಿ ಆಗ್ರಹಿಸಿದ್ದಾರೆ. ಈಗಾಗಲೇ ಎಂಡಿ ಅವರಿಗೆ ಮಾತನಾಡಿ ಶೋಕಾಸ್ ನೋಟಿಸ್ ಕೊಡಿಸುವ ಕೆಲಸ ಮಾಡಲಾಗಿದೆ ಎಂದರು.

ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಶಿವಕುಮಾರ್ ಪತ್ತಾರ್
ಶಿವಕುಮಾರ್ ಪತ್ತಾರ್

ಶಿವಕುಮಾರ್ ಎಸ್ ಪತ್ತಾರ.. ಹುಟ್ಟಿದ್ದು ಗದಗ ಜಿಲ್ಲೆಯ ನರಗುಂದ ತಾಲೂಕಿನ ಕೊಣ್ಣೂರ. ಪತ್ರಿಕೋದ್ಯಮ ದಲ್ಲಿ ಕರ್ನಾಟಕ ವಿವಿಯಿಂದ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.‌ಕಳೆದ 10 ವರ್ಷಗಳಿಂದ ಟಿವಿ9 ಕನ್ನಡ ಸುದ್ದಿವಾಹಿನಿಯಲ್ಲಿ ಹಿರಿಯ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದೇನೆ.ಕೊಪ್ಪಳದಿಂದ ಆರಂಭವಾಗಿರೋ ವೃತ್ತಿ ಬದುಕು ‌ಸದ್ಯ ಹುಬ್ಬಳ್ಳಿಗೆ ಬಂದು ನಿಂತಿದೆ.ಈ ಮದ್ಯೆ ರಾಯಚೂರು,ಬಳ್ಳಾರಿ,ವರದಿಗಾರನಾಗಿ ಕೆಲಸ ಮಾಡಿದ್ದೇನೆ.ರಹಸ್ಯ ಕಾರ್ಯಾಚರಣೆ ನನಗಿಷ್ಟ.ಟಿವಿ9 ನಲ್ಲಿ ಕೆಲ ರಹಸ್ಯ ಕಾರ್ಯಾಚರಣೆಗಳ ವರದಿಯನ್ನು ಮಾಡಿದ್ದೇನೆ.ಕ್ರೈಮ್, ಜನರ ಬದುಕು ಬವಣೆಯ ಸುದ್ದಿಗಳನ್ನೇ ಮಾಡಿದ್ದೇ ಹೆಚ್ಚು.

Read More