ಸಾರಿಗೆ ಸಚಿವ ಶ್ರೀರಾಮುಲು ಸರ್ಕಾರದಿಂದ ಭ್ರಮನಿರಸನಗೊಂಡಿದ್ದಾರೆ: ಸಿದ್ದರಾಮಯ್ಯ

| Updated By: ಅರುಣ್​ ಕುಮಾರ್​ ಬೆಳ್ಳಿ

Updated on: Aug 16, 2022 | 4:50 PM

ರಾಮುಲು ವಾಲ್ಮೀಕಿ ಸಮುದಾಯಕ್ಕೆ ಸೇರಿದವರು, ಅವರನ್ನು ಉಪ-ಮುಖ್ಯಮಂತ್ರಿ ಮಾಡುವುದಾಗಿ ಹೇಳಲಾಗಿತ್ತು, ಆದರೆ ಮಾಡಲಿಲ್ಲ. ವಾಲ್ಮೀಕಿ ಸಮುದಾಯಕ್ಕೆ ಮೀಸಲಾತಿ ಹೆಚ್ಚಿಸಿ ಅಂತ ಸಮುದಾಯದ ಸ್ವಾಮೀಜಿ ಮತ್ತು ಜನ ರಾಜ್ಯಾದ್ಯಂತ ಪ್ರತಿಭಟನೆ ಮಾಡುತ್ತಿದ್ದಾರೆ.

ಬೆಂಗಳೂರು: ನಗರದಲ್ಲಿ ಮಾಧ್ಯಮದವರೊಂದಿಗೆ ಮಾತಾಡಿದ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯನವರು (Siddaramaiah) ಸಾರಿಗೆ ಸಚಿವ ಬಿ ಶ್ರೀರಾಮುಲು (B Sriramulu) ಅವರು ತಮ್ಮ ಸರ್ಕಾರದಿಂದಲೇ ಭ್ರಮನಿರಸಗೊಂಡಿದ್ದಾರೆ ಎಂದು ಹೇಳಿದರು. ರಾಮುಲು ವಾಲ್ಮೀಕಿ ಸಮುದಾಯಕ್ಕೆ ಸೇರಿದವರು, ಅವರನ್ನು ಉಪ-ಮುಖ್ಯಮಂತ್ರಿ ಮಾಡುವುದಾಗಿ ಹೇಳಲಾಗಿತ್ತು, ಆದರೆ ಮಾಡಲಿಲ್ಲ. ವಾಲ್ಮೀಕಿ ಸಮುದಾಯಕ್ಕೆ ಮೀಸಲಾತಿ ಹೆಚ್ಚಿಸಿ ಅಂತ ಸಮುದಾಯದ ಸ್ವಾಮೀಜಿ ಮತ್ತು ಜನ ರಾಜ್ಯಾದ್ಯಂತ ಪ್ರತಿಭಟನೆ ಮಾಡುತ್ತಿದ್ದಾರೆ, ಆದರೆ ಬಿಜೆಪಿ ಸರ್ಕಾರ ಅವರ ಬೇಡಿಕೆಗೆ ಸ್ಪಂದಿಸಲಿಲ್ಲ. ನ್ಯಾಯಮೂರ್ತಿ ನಾಗಮೋಹನ್ ದಾಸ್ ಸಮಿತಿ ಮಾಡಿದ ಶಿಫಾರಸ್ಸುಗಳನ್ನು ಸರ್ಕಾರ ಜಾರಿಗೊಳಿಸಲಿಲ್ಲ, ಹಾಗಾಗಿ ಶ್ರೀರಾಮುಲು ಅವರು ಭ್ರಮನಿರಸನಗೊಂಡಿದ್ದಾರೆ ಎಂದು ಸಿದ್ದರಾಮಯ್ಯ ಹೇಳಿದರು.