AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಾವಣಗೆರೆ: ಉಪಚುನಾವಣಾ ಪ್ರಚಾರಕ್ಕೆ ಕರೆದಿಲ್ಲ; ಜಬ್ಬಾರ್​ಗೆ ಸಚಿವ ಮಲ್ಲಿಕಾರ್ಜುನ್​​ ಖಡಕ್ ಕೌಂಟರ್

ದಾವಣಗೆರೆ: ಉಪಚುನಾವಣಾ ಪ್ರಚಾರಕ್ಕೆ ಕರೆದಿಲ್ಲ; ಜಬ್ಬಾರ್​ಗೆ ಸಚಿವ ಮಲ್ಲಿಕಾರ್ಜುನ್​​ ಖಡಕ್ ಕೌಂಟರ್

ಬಸವರಾಜ್​ ದೊಡ್ಡಮನಿ, ದಾವಣಗೆರೆ
| Edited By: |

Updated on: Apr 11, 2026 | 9:49 PM

Share

ದಾವಣಗೆರೆ ಉಪಚುನಾವಣೆ ಸಂದರ್ಭದಲ್ಲಿ ಪ್ರಚಾರಕ್ಕೆ ಕರೆದಿಲ್ಲ ಎಂಬ ಅಬ್ದುಲ್ ಜಬ್ಬಾರ್ ಹೇಳಿಕೆಗೆ ಮಲ್ಲಿಕಾರ್ಜುನ್ ಖಡಕ್ ಉತ್ತರ ನೀಡಿದ್ದಾರೆ. ಮೂರು ಬಾರಿ ಎಂಎಲ್‌ಸಿ ಆಗಲು ಸಹಕರಿಸಿದ ಋಣವನ್ನು ಸ್ಮರಿಸಿದ ಮಲ್ಲಿಕಾರ್ಜುನ್, ಕಾಂಗ್ರೆಸ್ ಪಕ್ಷದ ಅನ್ನ ತಿಂದ ಮೇಲೆ ಅದಕ್ಕಾಗಿ ಕೆಲಸ ಮಾಡಬೇಕು ಎಂದರು. ಹೈಕಮಾಂಡ್ ನಿರ್ಧಾರಕ್ಕೆ ಬದ್ಧ ಎಂದು ತಿಳಿಸಿದರು.

ದಾವಣಗೆರೆ, ಏಪ್ರಿಲ್​ 11: ಒಂದು ಚಹಾ ಕುಡಿದರೆ ಋಣ ಇಟ್ಟುಕೊಳ್ಳಬೇಕು. ಎಂಎಲ್​ಸಿ ಮಾಡಿದ್ದು ನಾವು. ಕಾಂಗ್ರೆಸ್ ಪಕ್ಷದ ಅನ್ನ ತಿಂದ ಮೇಲೆ ಕೆಲಸ ಮಾಡಬೇಕಿತ್ತು ಎಂದು ಸಚಿವ ಎಸ್​ಎಸ್​ ಮಲ್ಲಿಕಾರ್ಜುನ್​​ ಹೇಳಿದ್ದಾರೆ. ಚುನಾವಣಾ ಪ್ರಚಾರಕ್ಕೆ ಕರೆದಿಲ್ಲ ಎಂಬ ಕಾಂಗ್ರೆಸ್​ ಮುಖಂಡ ಅಬ್ದುಲ್​​ ಜಬ್ಬಾರ್​ ಆರೋಪಕ್ಕೆ ಟಾಂಗ್​ ನೀಡಿದ್ದಾರೆ. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ ಅವರು, ಪಕ್ಷದ ಕಾರ್ಯಕರ್ತರಾಗಿ ನಾವು ನಮ್ಮ ಪಾಡಿಗೆ, ಕರೆಗಾಗಿ ಕಾಯದೆ ಪಕ್ಷಕ್ಕಾಗಿ ಕೆಲಸ ಮಾಡಬೇಕು. ಮುಸ್ಲಿಂ ಸಮುದಾಯದ ನಾಯಕರಿಗೆ ಟಿಕೆಟ್ ನೀಡುವ ಬಗ್ಗೆ ನಡೆದ ಚರ್ಚೆಗಳು ಅನಗತ್ಯವಾಗಿದ್ದು, ಎಲ್ಲಾ ನಿರ್ಧಾರಗಳನ್ನು ಹೈಕಮಾಂಡ್ ತೆಗೆದುಕೊಳ್ಳುತ್ತದೆ ಎಂದರು.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Follow Us
ಬಸವರಾಜ್​ ದೊಡ್ಡಮನಿ, ದಾವಣಗೆರೆ
ಬಸವರಾಜ್​ ದೊಡ್ಡಮನಿ, ದಾವಣಗೆರೆ

ಬಸವರಾಜ್ ದೊಡಮನಿ. 2007ರಿಂದ ಟಿವಿ9 ಕನ್ನಡದ ದಾವಣಗೆರೆ ಜಿಲ್ಲಾ ವರದಿಗಾರರಾಗಿದ್ದಾರೆ. ಹುಟ್ಟಿದ್ದು ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನ ತಳಕಟನಾಳದಲ್ಲಿ. ತಂದೆ ಗಂಗಪ್ಪ ದೊಡಮನಿ ಕೃಷಿಕ. ತಾಯಿ ಲಕ್ಕಮ್ಮ ದೊಡಮನಿ. ಇವರದ್ದು ನಾಟಿ ವೈದ್ಯರ ಕುಟುಂಬ. ಜನ ಜಾನುವಾರುಗಳು ರೋಗಕ್ಕೆ ಔಷಧಿ ನೀಡುವುದು ಇವರ ಕುಟುಂಬದ ಕಾಯಕ. 2000 ನಲ್ಲಿ ಧಾರವಾಡ ಕರ್ನಾಟಕ ವಿಶ್ವವಿದ್ಯಾಲಯದಿಂದ ಸಮೂಹ ಸಂವಹನ‌ ಮತ್ತು ಪತ್ರಿಕೋದ್ಯಮದಲ್ಲಿ ಎಂಎ ಪದವಿ ಪಡೆದಿದ್ದಾರೆ. ವೃತ್ತಿ ಜೀವನ ಆರಂಭವಾಗಿದ್ದು ಕನ್ನಡ ಪ್ರಭ ಪತ್ರಿಕೆಯಿಂದ. ಧಾರವಾಡ ಜಿಲ್ಲಾ ವರದಿಗಾರನಾಗಿ ಸೇವೆ. ಹತ್ತಕ್ಕೂ ಹೆಚ್ಚು ಲೋಕಸಭೆ ಹಾಗೂ ವಿಧಾನ ಸಭೆ ಸದನದ ವರದಿ ಮಾಡಿದ ಅನುಭವ. ಪುಸ್ತಕ ಓದುವುದು, ಜಾನಪದ ಕಲೆ ಉಳಿವಿಗೆ ದಾಖಲೆ ಸಂಗ್ರಹಿಸಿವುದು ಇವರ ಹವ್ಯಾಸ.

Read More