AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಚಿವ ಸ್ಥಾನಕ್ಕೆ ರಾಜೀನಾಮೆ: ಸ್ಪಷ್ಟನೆ ಕೊಟ್ಟ SS ಮಲ್ಲಿಕಾರ್ಜುನ್, ಹೇಳಿದ್ದೇನು?

ಸಚಿವ ಸ್ಥಾನಕ್ಕೆ ರಾಜೀನಾಮೆ: ಸ್ಪಷ್ಟನೆ ಕೊಟ್ಟ SS ಮಲ್ಲಿಕಾರ್ಜುನ್, ಹೇಳಿದ್ದೇನು?

ರಮೇಶ್ ಬಿ. ಜವಳಗೇರಾ
|

Updated on:Feb 16, 2026 | 8:00 PM

Share

ತೋಟಗಾರಿಕೆ, ಗಣಿ ಭೂವಿಜ್ಞಾನ ಇಲಾಖೆ ಸಚಿವ ಎಸ್‌ಎಸ್‌ ಮಲ್ಲಿಕಾರ್ಜುನ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ ಎಂಬ ಮಾತುಗಳು ಹರಿದಾಡುತ್ತಿದ್ದವು. ಅವರ ತಂದೆ ಶಾಮನೂರು ಶಿವಶಂಕರಪ್ಪ ಅವರ ನಿಧನದ ಬಳಿಕ ಎಲ್ಲಾ ಜವಾಬ್ದಾರಿಗಳು ಪುತ್ರ ಎಸ್​ಎಸ್​ ಮಲ್ಲಿಕಾರ್ಜುನ ಅವರ ಹೆಗಲಿಗೆ ಬಿದ್ದಿದ್ದು, ಈ ಒತ್ತಡಗಳಲ್ಲಿ ಸಚಿವ ಸ್ಥಾನ ನಿಭಾಯಿಸಲು ಕಷ್ಟವಾಗುತ್ತಿದೆ ಎಂದು ಎಸ್​ಎಸ್​ ಮಲ್ಲಿಕಾರ್ಜುನ ಅವರು ರಾಜೀನಾಮೆ ನೀಡಲು ಮುಂದಾಗಿದ್ದರು. ಆದ್ರೆ, ಇದಕ್ಕೆ ಸಿದ್ದರಾಮಯ್ಯ, ಆಕ್ಷೇಪಿಸಿದ್ದು, ಯಾವುದೇ ಕಾರಣಕ್ಕೂ ರಾಜೀನಾಮೆ ನೀಡಬೇಡಿ. ಇಂತಹ ಸಂದರ್ಭದಲ್ಲಿ ನೀವು ರಾಜೀನಾಮೆ ನೀಡಿದರೆ ಜನಕ್ಕೆ ಸರ್ಕಾರದ ಬಗ್ಗೆ ತಪ್ಪು ಸಂದೇಶ ಹೋಗುತ್ತೆ ಎಂದು ಸಲಹೆ ನೀಡಿದ್ದಾರೆ ಎಂದು ತಿಳಿದುಬಂದಿದೆ.

ದಾವಣಗೆರೆ, (ಫೆಬ್ರವರಿ 16): ತೋಟಗಾರಿಕೆ, ಗಣಿ ಭೂವಿಜ್ಞಾನ ಇಲಾಖೆ ಸಚಿವ ಎಸ್‌ಎಸ್‌ ಮಲ್ಲಿಕಾರ್ಜುನ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ ಎಂಬ ಮಾತುಗಳು ಹರಿದಾಡುತ್ತಿದ್ದವು. ಅವರ ತಂದೆ ಶಾಮನೂರು ಶಿವಶಂಕರಪ್ಪ ಅವರ ನಿಧನದ ಬಳಿಕ ಎಲ್ಲಾ ಜವಾಬ್ದಾರಿಗಳು ಪುತ್ರ ಎಸ್​ಎಸ್​ ಮಲ್ಲಿಕಾರ್ಜುನ ಅವರ ಹೆಗಲಿಗೆ ಬಿದ್ದಿದ್ದು, ಈ ಒತ್ತಡಗಳಲ್ಲಿ ಸಚಿವ ಸ್ಥಾನ ನಿಭಾಯಿಸಲು ಕಷ್ಟವಾಗುತ್ತಿದೆ ಎಂದು ಎಸ್​ಎಸ್​ ಮಲ್ಲಿಕಾರ್ಜುನ ಅವರು ರಾಜೀನಾಮೆ ನೀಡಲು ಮುಂದಾಗಿದ್ದರು. ಆದ್ರೆ, ಇದಕ್ಕೆ ಸಿದ್ದರಾಮಯ್ಯ, ಆಕ್ಷೇಪಿಸಿದ್ದು, ಯಾವುದೇ ಕಾರಣಕ್ಕೂ ರಾಜೀನಾಮೆ ನೀಡಬೇಡಿ. ಇಂತಹ ಸಂದರ್ಭದಲ್ಲಿ ನೀವು ರಾಜೀನಾಮೆ ನೀಡಿದರೆ ಜನಕ್ಕೆ ಸರ್ಕಾರದ ಬಗ್ಗೆ ತಪ್ಪು ಸಂದೇಶ ಹೋಗುತ್ತೆ ಎಂದು ಸಲಹೆ ನೀಡಿದ್ದಾರೆ ಎಂದು ತಿಳಿದುಬಂದಿದೆ.

ಈ ಎಲ್ಲಾ ಬೆಳವಣಿಗೆಗಳ ನಡುವೆ ಸ್ವತಃ ಎಸ್.ಎಸ್.ಮಲ್ಲಿಕಾರ್ಜುನ ಅವರೇ ಪ್ರತಿಕ್ರಿಯಿಸಿದ್ದು, ನಾನು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆಂಬುದು ಶುದ್ಧ ಸುಳ್ಳು. ರಾಜೀನಾಮೆ ಕೊಡ್ತೇನೆಂದು ಸಿಎಂ ಬಳಿ ಹೋಗಿದ್ದೆ ಎಂಬುದು ಸುಳ್ಳು. ಈ ವಿಚಾರವಾಗಿ ಸಿಎಂ ಸಿದ್ದರಾಮಯ್ಯನವರೇ ಸ್ಪಷ್ಟಪಡಿಸಿದ್ದಾರೆ ಎಂದು ಹೇಳಿದರು. ಈ ಮೂಲಕ ರಾಜೀನಾಮೆ ನೀಡಲ್ಲ ಎಂದು ಕಂತೆ ಕಂತೆಗಳಿಗೆ ತೆರೆ ಎಳೆದರು.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published on: Feb 16, 2026 07:59 PM
Follow Us
Ramesh B Jawalagera
Ramesh B Jawalagera

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More