ಸಚಿವ ಮಲ್ಲಿಕಾರ್ಜುನ್ ರಾಜೀನಾಮೆ ಪ್ರಸ್ತಾಪ: ಪುತ್ರನಿಗೆ ಬೈ ಎಲೆಕ್ಷನ್ ಟಿಕೆಟ್‌ಗಾಗಿ ರಾಜಕೀಯ ದಾಳ?

Edited By:

Updated on: Feb 19, 2026 | 2:23 PM

ವ್ಯವಹಾರಿಕ ಮತ್ತು ಕ್ಷೇತ್ರದ ಒತ್ತಡ ಕಾರಣ ನೀಡಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ತಮ್ಮ ಸಚಿವ ಸ್ಥಾನದಿಂದ ಬಿಡುಗಡೆಗೊಳಿಸುವಂತೆ ಮನವಿ ಮಾಡಿದ್ದಾರೆ. ದಾವಣಗೆರೆ ದಕ್ಷಿಣ ಕ್ಷೇತ್ರದ ಉಪಚುನಾವಣೆ ಹಿನ್ನೆಲೆಯಲ್ಲಿ ಈ ಬೆಳವಣಿಗೆ ಮಹತ್ವ ಪಡೆದಿದೆ. ಪುತ್ರನಿಗೆ ಟಿಕೆಟ್ ಕೊಡಿಸುವ ರಾಜಕೀಯ ತಂತ್ರದ ಭಾಗವಾಗಿ ಈ ನಿರ್ಧಾರ ಕೈಗೊಂಡಿರಬಹುದು ಎಂಬ ಚರ್ಚೆಗಳು ನಡೆಯುತ್ತಿವೆ.

ಬೆಂಗಳೂರು, ಫೆಬ್ರವರಿ 19: ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯನವರ ಬಳಿ ತಮ್ಮನ್ನು ಸಚಿವ ಸ್ಥಾನದಿಂದ ಬಿಡುಗಡೆಗೊಳಿಸುವಂತೆ ಮನವಿ ಮಾಡಿದ್ದಾರೆ. ವ್ಯವಹಾರಿಕ ಒತ್ತಡ ಮತ್ತು ಕ್ಷೇತ್ರದ ಕೆಲಸಗಳ ಕಾರಣ ನೀಡಿ, ಕಳೆದ ವಾರವೇ ಸಿಎಂ ಎದುರು ಈ ವಿಚಾರವನ್ನು ಪ್ರಸ್ತಾಪ ಮಾಡಿದ್ದಾರಂತೆ. ಈ ಬೆಳವಣಿಗೆ ದಾವಣಗೆರೆ ದಕ್ಷಿಣ ಕ್ಷೇತ್ರದ ಉಪಚುನಾವಣೆ ಹಿನ್ನೆಲೆಯಲ್ಲಿ ಮಹತ್ವ ಪಡೆದುಕೊಂಡಿದೆ.  ಸಾಮಾನ್ಯವಾಗಿ ಸಚಿವ ಸ್ಥಾನಕ್ಕಾಗಿ ಲಾಬಿ ನಡೆಯುವ ಸಂದರ್ಭದಲ್ಲಿ, ಹಾಲಿ ಸಚಿವರೊಬ್ಬರು ರಾಜೀನಾಮೆ ನೀಡಲು ಮುಂದಾಗಿರುವುದು ರಾಜಕೀಯ ವಲಯದಲ್ಲಿ ಕುತೂಹಲ ಮೂಡಿಸಿದೆ. ಇದು ತಮ್ಮ ಪುತ್ರನಿಗೆ ಉಪಚುನಾವಣೆಯಲ್ಲಿ ಟಿಕೆಟ್ ಪಡೆಯುವ ಉದ್ದೇಶದಿಂದ ಮಲ್ಲಿಕಾರ್ಜುನ್ ಅವರು ನಡೆಸಿದ ರಾಜಕೀಯ ತಂತ್ರಗಾರಿಕೆ ಇರಬಹುದೇ ಎಂಬ ಲೆಕ್ಕಾಚಾರವೂ ಶುರುವಾಗಿದೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Published on: Feb 19, 2026 02:22 PM