ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಭೇಟಿ ನೀಡದ ಟಿಹೆಚ್ಒಗಳಿಗೆ ಸಚಿವ ಯು.ಟಿ. ಖಾದರ್ ತರಾಟೆ

Edited By:

Updated on: Oct 08, 2026 | 2:22 PM

ಸಚಿವ ಯು.ಟಿ. ಖಾದರ್ ತುಮಕೂರು ಟಿ.ಹೆಚ್.ಒ.ಗಳಿಗೆ ಪ್ರಾಥಮಿಕ ಆರೋಗ್ಯ ಕೇಂದ್ರಗಳ (ಪಿ.ಎಚ್.ಸಿ.) ಭೇಟಿ ನೀಡದ ಬಗ್ಗೆ ತರಾಟೆ ತೆಗೆದುಕೊಂಡಿದ್ದಾರೆ. ತಿಂಗಳಿಗೆ ಮೂರು ಬಾರಿ ಪಿ.ಎಚ್.ಸಿ.ಗಳಿಗೆ ಭೇಟಿ ನೀಡುವಂತೆ ಸೂಚಿಸಿದ ಅವರು, ನಿರ್ಲಕ್ಷ್ಯ ಮುಂದುವರೆದರೆ ಎ.ಐ. ಕ್ಯಾಮೆರಾಗಳ ಮೂಲಕ ನಿಗಾ ವಹಿಸುವುದಾಗಿ ಎಚ್ಚರಿಕೆ ನೀಡಿದ್ದಾರೆ. ಆರೋಗ್ಯ ಸೇವೆಗಳನ್ನು ಬಲಪಡಿಸುವಂತೆ ಆದೇಶಿಸಿದ್ದಾರೆ.

ತುಮಕೂರು, ಅಕ್ಟೋಬರ್​​ 08: ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಭೇಟಿ ನೀಡದ ಟಿಹೆಚ್ಒಗಳಿಗೆ ಆರೋಗ್ಯ ಸಚಿವ ಯು.ಟಿ. ಖಾದರ್​​ ಕ್ಲಾಸ್​​ ತಗೆದುಕೊಂಡಿರುವ ಘಟನೆ ನಡೆದಿದೆ. ತುಮಕೂರು ಡಿಹೆಚ್​​ಒ ಕಚೇರಿಯಲ್ಲಿ ನಡೆದ ಸಭೆ ವೇಳೆ ಗರಂ ಆದ ಸಚಿವರು, ಸರ್ಕಾರಿ ಸೌಲಭ್ಯ ನೀಡಿದರೂ ಆಸ್ಪತ್ರೆಗಳಿಗೆ ಯಾಕೆ ಹೋಗುತ್ತಿಲ್ಲ? ಒಂದು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ತಿಂಗಳಿಗೆ ಮೂರು ಸಲವಾದರೂ ಭೇಟಿನೀಡಬೇಕು ಎಂದು ಸೂಚಿಸಿದ್ದಾರೆ. ಗಾಡಿ, ಡ್ರೈವರ್ ಎಲ್ಲವೂ ಇದ್ದರೂ ಕಚೇರಿಯಲ್ಲಿ ಏನ್ ಮಾಡ್ತೀರಿ ಎಂದು ಪ್ರಶ್ನಿಸಿದ ಸಚಿವರು, ನಿಮ್ಮ ಕಳ್ಳಾಟ ಕಂಡು ಹಿಡಿಯೋಕೆ ಎಐ ಕ್ಯಾಮರಾ ಅಳವಡಿಸ್ತೀನಿ. ಅದ್ರಲ್ಲಿ ನೀವು ಬರೋದು, ಹೋಗೋದು, ಕೆಲಸ ಮಾಡೋದು ಎಲ್ಲವೂ ಗೊತ್ತಾಗುತ್ತೆ ಎಂದು ಎಚ್ಚರಿಸಿದ್ದಾರೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Loading...
Unable to load recommendations.
Follow Us
ಜಗದೀಶ ಬಿ.

ಜಗದೀಶ್​ ಬಸವರಾಜು ಟಿವಿ9 ಕನ್ನಡದ ಜಿಲ್ಲಾ ವರದಿಗಾರರಾಗಿದ್ದಾರೆ. ಪ್ರಸ್ತುತ ಅವರು ತುಮಕುರು ಜಿಲ್ಲಾ ಸುದ್ದಿಗಳ ವರದಿ ಮಾಡುತ್ತಿದ್ದಾರೆ. ಹುಟ್ಟಿದ್ದು, ಬೆಳೆದಿದ್ದು ಬೆಂಗಳೂರಿನಲ್ಲಿ. ಪತ್ರಿಕೋದ್ಯಮ ಓದಿದ್ದು, ವೃತ್ತಿ ಬದುಕು ಆರಂಭಿಸಿದ್ದು ಕೂಡಾ ಬೆಂಗಳೂರಿನಲ್ಲಿ. ಟಿವಿ9ನಲ್ಲಿ ಎಂಟು ವರ್ಷ ಸಹಿತ ಹತ್ತು ವರ್ಷದ ಕ್ರೈಂ ವರದಿಗಾರಿಕೆಯ ಅನುಭವದ ಜೊತೆ ಸದ್ಯ ೨೦೨೫ರಿಂದ ತುಮಕೂರು ಜಿಲ್ಲಾವರದಿಗಾರನಾಗಿ ಮಾದ್ಯಮದ ವೃತ್ತಿ ಬದುಕು ಮುಂದುವರೆದಿದೆ.

Read More