ಕೆಡಿಪಿ ಸಭೆಗೆ ಪೊಲೀಸ್ ಆಯುಕ್ತ ಗೈರಾಗಿದ್ದಕ್ಕೆ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ.ಖಾದರ್ ಗರಂ

Edited By:

Updated on: Sep 15, 2026 | 4:45 PM

ಮಂಗಳೂರಿನಲ್ಲಿ ನಡೆದ ಕೆಡಿಪಿ ಸಭೆಗೆ ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ಗೈರುಹಾಜರಾದ ಕಾರಣ, ಸಚಿವ ಯು.ಟಿ. ಖಾದರ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಯಾವುದೇ ಉನ್ನತ ಅಧಿಕಾರಿ ಸಭೆಯಿಂದ ಗೈರುಹಾಜರಾಗುವ ಮುನ್ನ ಲಿಖಿತ ಮಾಹಿತಿ ನೀಡಬೇಕೆಂದು ಖಾದರ್ ಸೂಚಿಸಿದ್ದು, ಇದು ನಿಯಮ ಉಲ್ಲಂಘನೆ ಎಂದು ಆಕ್ಷೇಪಿಸಿದ್ದಾರೆ. ಸಭೆಯಲ್ಲಿ ನಿಯಮ ಪಾಲನೆ ಅಗತ್ಯವನ್ನು ಒತ್ತಿ ಹೇಳಿದ್ದಾರೆ.

ಮಂಗಳೂರು, ಸೆಪ್ಟೆಂಬರ್​​ 15: ಮಂಗಳೂರಿನಲ್ಲಿ ನಡೆದ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ (ಕೆಡಿಪಿ) ಸಭೆಗೆ ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ಗೈರುಹಾಜರಾಗಿರುವ ಸಂಬಂಧ ಸಚಿವ ಯು.ಟಿ. ಖಾದರ್ ಅವರ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ತಮ್ಮ ಬದಲಿಗೆ ಡಿಸಿಪಿ ಶ್ಯಾಮ್​ ವರ್ಗೀಸ್ ಕಳುಹಿಸಿದ್ದ ಕಮಿಷನರ್ ನಡೆ ಪ್ರಶ್ನಿಸಿದ ಸಚಿವರು, ಪೊಲೀಸ್ ಕಮಿಷನರ್ ಸಭೆಗೆ ಗೈರಾಗಿದ್ದಕ್ಕೆ ಅನುಮತಿ ಪಡೆದಿದ್ದಾರಾ? ಕಾನೂನು ಪಾಠ ಮಾಡ್ತಾರೆ, ಅವರಿಗೆ ಕಾನೂನು ಅನ್ವಯ ಆಗಲ್ವಾ? ಎಂದು ಗರಂ ಆದ ಪ್ರಸಂಗ ನಡೆದಿದೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Loading...
Unable to load recommendations.
Follow Us
ಪೃಥ್ವಿರಾಜ್​ ಬಿ.ಯು. ಮಂಗಳೂರು

ಬಿ.ಯು.ಪೃಥ್ವಿರಾಜ್. ಮೂಲತಹ ಹಾಸನ ಜಿಲ್ಲೆ ಸಕಲೇಶಪುರ ತಾಲೂಕು. ಪತ್ರಿಕೋದ್ಯಮದಲ್ಲಿ ಪದವಿ ಮತ್ತು ಸ್ನಾತಕೋತ್ತರ ಪದವಿ ಮಾಡಿದ್ದೇನೆ. ವಿದ್ಯಬ್ಯಾಸ ಆದ ತಕ್ಷಣ ಟಿವಿ9 ಕರ್ನಾಟಕದ ಬೆಂಗಳೂರು ಕಚೇರಿಯಲ್ಲಿ ಜಾಯಿನ್ ಆದೆ. ಕಳೆದ 13 ವರ್ಷಗಳಿಂದ ಟಿವಿ9 ನಲ್ಲಿ ಕಾರ್ಯನಿರ್ವಹಿಸುತ್ತಿದ್ದ, ಚಾಮರಾಜನಗರ ಜಿಲ್ಲೆ, ಬೆಂಗಳೂರು ಕೇಂದ್ರ ಕಚೇರಿಯ ಕ್ರೈಂ ಬೀಟ್ ನಲ್ಲಿ ಕಾರ್ಯನಿರ್ವಹಿಸಿ 2016 ರಿಂದ ಮಂಗಳೂರು ಬ್ಯೂರೋದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಚಾಮರಾಜನಗರ ಜಿಲ್ಲೆಯ ಮಲೆ ಮಹದೇಶ್ವರ ಬೆಟ್ಟದಲ್ಲಿ ಹರಕೆ ಗೋವುಗಳು ಕಸಾಯಿಕಾನೆಗೆ ಹೋಗುತ್ತಿದ್ದ ಬಗ್ಗೆ ಸ್ಟಿಂಗ್ ಆಪರೇಷನ್ ಮಾಡಲು ತಮಿಳುನಾಡಿನಲ್ಲಿ ಕಾರ್ಯನಿರ್ವಹಿಸಿದ ಅನುಭವ. ಈ ಸ್ಟಿಂಗ್ ಆಪರೇಷನ್ ಸ್ಟೋರಿಗೆ ರಾಮನಾಥ ಗೋಯಾಂಕ ಪ್ರಶಸ್ತಿಗೆ ನಾಮಿನಿಯಾಗಿದ್ದೆ. ರಾಜಕೀಯ, ಪ್ರವಾಹ, ರಾಷ್ಟ್ರ ಮಟ್ಟದ ಅಪರಾಧ ಪ್ರಕರಣಗಳು, ಎನ್.ಐ.ಎ ತನಿಖೆಗಳು, ಭಯೋತ್ಪಾದಕ ಚಚುವಟಿಕೆಗಳು ಆದಾಗ ಅಲ್ಲಿ ವರದಿಗಾರಿಕೆ. ಮಂಗಳೂರು ಗೋಲಿಬಾರ್, ಬೆಂಗಳೂರು ಕರ್ಫ್ಯೂ, ಏರ್ಪೋರ್ಟ್ ನಲ್ಲಿ ಜೀವಂತ ಬಾಂಬ್ ಆಪರೇಷನ್ ಗಳಲ್ಲಿ ವರದಿ ಮಾಡಿದ ಅನುಭವ.

Read More