ಕರ್ನಾಟಕದಲ್ಲಿ ಗುಟ್ಕಾ ಬ್ಯಾನ್ ಬಗ್ಗೆ ಸಚಿವ ಯುಟಿ ಖಾದರ್ ಹೇಳಿದ್ದಿಷ್ಟು
ಆರೋಗ್ಯ ಸಚಿವ ಯುಟಿ ಖಾದರ್ ಪ್ರತಿಕ್ರಿಯಿಸಿದ್ದು, ಮಸಾಲಾ ಜೊತೆಯಲ್ಲಿ ನಿಕೋಟಿನ್ ಇರಬಾರದು. ಆದರೂ ಮಸಾಲಾ ಜೊತೆ ಮಿಕ್ಸ್ ಮಾಡಿ ನಿಕೋಟಿನ್ ಮಾರಾಟ ಮಾಡಲಾಗುತ್ತಿದೆ. ಇದು ನಮ್ಮ ಗಮನಕ್ಕೆ ಬಂದಿದೆ, ಹೀಗಾಗಿ ನಿಷೇಧಕ್ಕೆ ಆದೇಶ ನೀಡಿದ್ದು, ಮುಂದೆ ಯಾವ ರೀತಿ ನಿಯಮ ರೂಪಿಸಬೇಕೆಂದು ನಿರ್ಧರಿಸ್ತೇವೆ. ಇನ್ನು ಅಡಕೆ ಮಾರಾಟಗಾರರಿಗೆ ತೊಂದರೆ ಆಗದ ರೀತಿ ಕ್ರಮ ಕೈಗೊಳ್ಳುತ್ತೇವೆ ಎಂದು ಸ್ಪಷ್ಟಪಡಿಸಿದರು.
ಬೆಂಗಳೂರು, (ಆಗಸ್ಟ್ 13): ಕರ್ನಾಟಕ ಸರ್ಕಾರವು ಸಾರ್ವಜನಿಕ ಆರೋಗ್ಯದ ಹಿತದೃಷ್ಟಿಯಿಂದ ರಾಜ್ಯಾದ್ಯಂತ ಗುಟ್ಕಾ ಮತ್ತು ಪಾನ್ ಮಸಾಲಾ ಸೇರಿದಂತೆ ತಂಬಾಕು ಮತ್ತು ನಿಕೋಟಿನ್ ಹೊಂದಿರುವ ಉತ್ಪನ್ನಗಳ ಮಾರಾಟ ಹಾಗೂ ಬಳಕೆಯನ್ನು ಒಂದು ವರ್ಷದ ಅವಧಿಗೆ ಸಂಪೂರ್ಣವಾಗಿ ನಿಷೇಧಿಸಿದೆ. ಗುಟ್ಕಾ ಸೇವನೆಯು ಜೀವಕ್ಕೆ ಅಪಾಯಕಾರಿ. ಹೀಗಾಗಿ ತಂಬಾಕು ಮತ್ತು ನಿಕೋಟಿನ್ ಮಿಶ್ರಿತ ಗುಟ್ಕಾ ಹಾಗೂ ಪಾನ್ ಮಸಾಲಾಗಳ ತಯಾರಿಕೆ, ಸಂಗ್ರಹಣೆ, ಸಾಗಾಟ ಮತ್ತು ಮಾರಾಟವನ್ನು ಸಂಪೂರ್ಣವಾಗಿ ತಡೆಹಿಡಿಯಲಾಗಿದೆ. ಆದ್ರೆ, ಇದಕ್ಕೆ ಅಡಿಕೆ ಬೆಳೆಗಾರರು ಆಕ್ಷೇಪ ವ್ಯಕ್ತಪಡಿಸಿದ್ದು, ಈ ಸಂಬಂಧ ಬಿಜೆಪಿ ಶಾಸಕ ಅರಗ ಜ್ಞಾನೇಂದ್ರ ನಿಯೋಗ ಸಿಎಂ ಡಿಕೆ ಶಿವಕುಮಾರ್ ಅವರನ್ನು ಭೇಟಿ ಮಾಡಿ ಗುಟ್ಕಾ ನಿಷೇಧದಿಂದ ಅಡಿಕೆ ಬೆಳೆಗಾರರ ಮೇಲಾಗುವ ಪರಿಣಾಮಗಳನ್ನು ಗಮನಕ್ಕೆ ತಂದಿದ್ದಾರೆ.
ಇನ್ನು ಈ ಬಗ್ಗೆ ಆರೋಗ್ಯ ಸಚಿವ ಯುಟಿ ಖಾದರ್ ಪ್ರತಿಕ್ರಿಯಿಸಿದ್ದು, ಮಸಾಲಾ ಜೊತೆಯಲ್ಲಿ ನಿಕೋಟಿನ್ ಇರಬಾರದು. ಆದರೂ ಮಸಾಲಾ ಜೊತೆ ಮಿಕ್ಸ್ ಮಾಡಿ ನಿಕೋಟಿನ್ ಮಾರಾಟ ಮಾಡಲಾಗುತ್ತಿದೆ. ಇದು ನಮ್ಮ ಗಮನಕ್ಕೆ ಬಂದಿದೆ, ಹೀಗಾಗಿ ನಿಷೇಧಕ್ಕೆ ಆದೇಶ ನೀಡಿದ್ದು, ಮುಂದೆ ಯಾವ ರೀತಿ ನಿಯಮ ರೂಪಿಸಬೇಕೆಂದು ನಿರ್ಧರಿಸ್ತೇವೆ. ಇನ್ನು ಅಡಕೆ ಮಾರಾಟಗಾರರಿಗೆ ತೊಂದರೆ ಆಗದ ರೀತಿ ಕ್ರಮ ಕೈಗೊಳ್ಳುತ್ತೇವೆ ಎಂದು ಸ್ಪಷ್ಟಪಡಿಸಿದರು.
ಇದನ್ನೂ ನೋಡಿ: ಕರ್ನಾಟಕದಲ್ಲಿ ಗುಟ್ಕಾ-ತಂಬಾಕು ಬ್ಯಾನ್ ಗೆ ವಿರೋಧ: ಸಿಎಂ ಭೇಟಿಯಾದ ಆರಗ ಜ್ಞಾನೇಂದ್ರ ನೇತೃತ್ವದ ನಿಯೋಗ
ಮುಖ್ಯರಸ್ತೆಗೆ ವೈದ್ಯಕೀಯ ತ್ಯಾಜ್ಯ ಸುರಿದ ಕ್ಲಿನಿಕ್ಗೆ 15 ಸಾವಿರ ರೂ.ದಂಡ
ಹನಿಟ್ರ್ಯಾಪ್ ವಿಡಿಯೋ ಭೀತಿ: ಮಾಧ್ಯಮಗಳ ವಿರುದ್ಧ ಮಾಜಿ ಸಿಎಂ ನಿರ್ಬಂಧಕಾಜ್ಞೆ
ಚಿತ್ರದುರ್ಗಕ್ಕೆ ಸುದೀಪ್ ಭೇಟಿ: ಚಪ್ಪಲಿ ಧರಿಸದೇ ನಡೆದುಬಂದ ನಟ
ಸೌಜನ್ಯ ಪ್ರಕರಣ ಮರು ತನಿಖೆ ಬಗ್ಗೆ ಎಸ್ಐಟಿಯಿಂದ ಹೈವೋಲ್ಟೇಜ್ ಸಭೆ

