ಬಿಜೆಪಿ ರಾಜ್ಯಾಧ್ಯಕ್ಷ ಬದಲಾಗ್ತಾರಾ? ನಾನು ಪಕ್ಷದ ಶಿಸ್ತಿನ ಸಿಪಾಯಿ ಅಂದಿದ್ಯಾಕೆ ಸೋಮಣ್ಣ?

Edited By:

Updated on: Jul 01, 2026 | 5:13 PM

ಮುಖ್ಯಾಂಶಗಳು

  • ಕರ್ನಾಟಕ ಬಿಜೆಪಿ ಅಧ್ಯಕ್ಷ ಬದಲಾವಣೆ ಚರ್ಚೆ ಮತ್ತೆ ಮುನ್ನಲೆಗೆ
  • ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ತಮ್ಮ ಹೆಸರು ಕೇಳಿ ಬರುತ್ತಿರುವುದಕ್ಕ ಸೋಮಣ್ಣ ಸ್ಪಷ್ಟನೆ
  • ನಾನು ಪಕ್ಷದ ಶಿಸ್ತಿನ ಸಿಪಾಯಿ, ಹೈಕಮಾಂಡ್​ ಸಂದೇಶಕ್ಕೆ ಬದ್ಧ ಎಂದ ಸೋಮಣ್ಣ

ಬಿವೈ ವಿಜಯೇಂದ್ರ ಅವರನ್ನು ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಸಬೇಕೆಂಬ ಕೂಗೂ ನಿನ್ನೆ ಮೊನ್ನೇಯದ್ದಲ್ಲ. ಆರಂಭದಲ್ಲಿಂದಲೂ ಸಹ ವಿರೋಧಿ ಬಣ ವಿಜಯೇಂದ್ರ ಬದಲಾವಣೆಗೆ ಪಟ್ಟು ಹಿಡಿದಿದೆ. ಆದ್ರೆ, ಹೈಕಮಾಂಡ್ ಯಾವುದೇ ತೀರ್ಮಾನಕ್ಕೆ ಬರುತ್ತಿಲ್ಲ. ಆದರೂ ರಾಜ್ಯ ಬಿಜೆಪಿಯಲ್ಲಿ ಬದಲಾವಣೆಗಳಾಗಲಿವ ಎನ್ನುವ ಸುದ್ದಿ ಮತ್ತೆ ಮುನ್ನಲೆಗೆ ಬಂದಿದ್ದು, ರಾಜ್ಯಾಧ್ಯಕ್ಷ ಸ್ಥಾನಕ್ಕೆ ವಿ ಸೋಮಣ್ಣ ಅವರ ಹೆಸರು ಹೇಳಿ ಬರುತ್ತಿದೆ. ಇನ್ನು ಈ ಬಗ್ಗೆ ಮಾಧ್ಯಮಗಳು ಕೇಳಿದ ಅಭಿಪ್ರಾಯಕ್ಕೆ ಪ್ರತಿಕ್ರಿಯಿಸಿದ ಸೋಮಣ್ಣ, ನಾನು ಪಕ್ಷದ ಶಿಸ್ತಿನ ಸಿಪಾಯಿ. ಹೈಕಮಾಂಡ್​ ಸಂದೇಶಕ್ಕೆ ಬದ್ಧ ಎಂದಿದ್ದಾರೆ.

ಬೆಂಗಳೂರು, (ಜುಲೈ 01): ಕರ್ನಾಟಕ (Karnataka) ಕಾಂಗ್ರೆಸ್​​​ನಲ್ಲಿ ಅಧಿಕಾರ ಹಂಚಿಕೆ ಸಮರ ಮುಗಿದೆ. ಇದೀಗ ಬಿಜೆಪಿ (BJP) ಪಾಳಯದಲ್ಲೂ ಬಣ ಬಡಿದಾಟಗಳು ನಡೆಯುತ್ತಿವೆ. ಸಂಸದ ಡಾ ಕೆ ಸುಧಾಕರ್ ಹಾಗೂ ಎಸ್​​ಆರ್ ವಿಶ್ವನಾಥ್ ಸೇರಿದಂತೆ ಇತರೆ ಕೆಲ ನಾಯಕರ ನಡುವೆ ಆರೋಪ ಪ್ರತ್ಯಾರೋಪಗಳು ಜೋರಾಗಿವೆ. ಇದರ ನಡುವೆ ರಾಜ್ಯಾಧ್ಯಕ್ಷ ಸ್ಥಾನದ ಕುರಿತು ಹಗ್ಗ ಜಗ್ಗಾಟ ನಡೆಯುತ್ತಿದೆ. ಹೌದು…ಬಿವೈ ವಿಜಯೇಂದ್ರ ಅವರನ್ನು ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಸಬೇಕೆಂಬ ಕೂಗೂ ನಿನ್ನೆ ಮೊನ್ನೇಯದ್ದಲ್ಲ. ಆರಂಭದಲ್ಲಿಂದಲೂ ಸಹ ವಿರೋಧಿ ಬಣ ವಿಜಯೇಂದ್ರ ಬದಲಾವಣೆಗೆ ಪಟ್ಟು ಹಿಡಿದಿದೆ. ಆದ್ರೆ, ಹೈಕಮಾಂಡ್ ಯಾವುದೇ ತೀರ್ಮಾನಕ್ಕೆ ಬರುತ್ತಿಲ್ಲ. ಆದರೂ ರಾಜ್ಯ ಬಿಜೆಪಿಯಲ್ಲಿ ಬದಲಾವಣೆಗಳಾಗಲಿವ ಎನ್ನುವ ಸುದ್ದಿ ಮತ್ತೆ ಮುನ್ನಲೆಗೆ ಬಂದಿದ್ದು, ರಾಜ್ಯಾಧ್ಯಕ್ಷ ಸ್ಥಾನಕ್ಕೆ ವಿ ಸೋಮಣ್ಣ ಅವರ ಹೆಸರು ಹೇಳಿ ಬರುತ್ತಿದೆ. ಇನ್ನು ಈ ಬಗ್ಗೆ ಮಾಧ್ಯಮಗಳು ಕೇಳಿದ ಅಭಿಪ್ರಾಯಕ್ಕೆ ಪ್ರತಿಕ್ರಿಯಿಸಿದ ಸೋಮಣ್ಣ, ನಾನು ಪಕ್ಷದ ಶಿಸ್ತಿನ ಸಿಪಾಯಿ. ಹೈಕಮಾಂಡ್​ ಸಂದೇಶಕ್ಕೆ ಬದ್ಧ ಎಂದಿದ್ದಾರೆ.

ಬೆಂಗಳೂರಿನಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸೋಮಣ್ಣ, ನಾನು ಪಕ್ಷದ ಶಿಸ್ತಿನ ಸಿಪಾಯಿ, ಹೈಕಮಾಂಡ್​ ಸಂದೇಶಕ್ಕೆ ಬದ್ಧ. ಅಮಿತ್ ಶಾ ವರುಣದಲ್ಲಿ ಸ್ಪರ್ಧಿಸು ಎಂದಿದ್ದಕ್ಕೆ ಅಲ್ಲಿ ಸ್ಪರ್ಧಿಸಿದ್ದೆ. ತುಮಕೂರಿನಲ್ಲಿ ಸ್ಪರ್ಧೆ ಮಾಡು ಎಂದರು, ಅಲ್ಲಿ ಸ್ಪರ್ಧಿಸಿ ಗೆದ್ದೆ. ಹೈಕಮಾಂಡ್ ಏನು ಹೇಳುತ್ತದೋ ಅದನ್ನು ನಾನು ಕೇಳುತ್ತೇನೆ ಎಂದು ಸ್ಪಷ್ಟಪಡಿಸಿದರು. ಈ ಮೂಲಕ ಕರ್ನಾಟಕ ಬಿಜೆಪಿ ರಾಜ್ಯಾಧ್ಯಕ್ಷ ಜವಾಬ್ದಾರಿ ಹೊತ್​ತುಕೊಳ್ಳಲು ರೆಡಿ ಎನ್ನುವ ಅರ್ಥದಲ್ಲಿ ಹೇಳಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published on: Jul 01, 2026 05:12 PM
Loading...
Unable to load recommendations.
Follow Us
ಕಿರಣ್​ ಹನಿಯಡ್ಕ

TV9 ಕನ್ನಡದಲ್ಲಿ ಹಿರಿಯ ರಾಜಕೀಯ ವರದಿಗಾರ. ಮಂಗಳೂರು ವಿಶ್ವವಿದ್ಯಾನಿಲಯದಿಂದ ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ. 17 ವರ್ಷಗಳಿಂದ ಮಾಧ್ಯಮ ವೃತ್ತಿ. ಮುದ್ರಣ ಮಾಧ್ಯಮದಲ್ಲಿ ಸಬ್ ಎಡಿಟರ್, ವಿದ್ಯುನ್ಮಾನ ಮಾಧ್ಯಮದಲ್ಲಿ ನ್ಯೂಸ್ ಡೆಸ್ಕ್ ಮತ್ತು ರಾಜಕೀಯ ವರದಿಗಾರಿಕೆಯಲ್ಲಿ ಅನುಭವ.

Read More