ಕಾಂಗ್ರೆಸ್ ಶಾಸಕಾಂಗ ಸಭೆಯಲ್ಲಿ ಯತೀಂದ್ರ ಸಿದ್ದರಾಮಯ್ಯಗೆ ಸಿಕ್ತು ವಿಶೇಷ ಸ್ಥಾನ
ಇದೇ ಜೂನ್ 18ರಂದು ವಿಧಾನಪರಿಷತ್ನ 7 ಸ್ಥಾನಗಳಿಗೆ ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯ ಕಾಂಗ್ರೆಸ್ ಶಾಸಕರು ರೆಸಾರ್ಟ್ಗೆ ಶಿಫ್ಟ್ ಆಗಿದ್ದು, ಬಿಡದಿ ಬಳಿಯ ವಂಡರ್ಲಾ ರೆಸಾರ್ಟ್ನಲ್ಲಿ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ನಡೆದೆ. ವಿಶೇಷ ಅಂದ್ರೆ ಈ ಸಭೆಯಲ್ಲಿ ಸಿದ್ದರಾಮಯ್ಯನವರ ಪುತ್ರ, ಸಚಿವರೂ ಆಗಿರುವ ಯತೀಂದ್ರ ಅವರಿಗೆ ವಿಶೇಷ ಗೌರವ ನೀಡಲಾಗಿದೆ. ಹೌದು..ಶಾಸಕಾಂಗ ಪಕ್ಷದ ಸಭೆಯ ವೇದಿಕೆ ಮೇಲೆ ಹಿರಿಯ ಸಚಿವರಿಗೂ ಅವಕಾಶ ಇಲ್ಲ. ಆದ್ರೆ, ಯತೀಂದ್ರ ಸಿದ್ದರಾಮಯ್ಯನವರಿಗೆ ವೇದಿಕೆ ಮೇಲೆ ಅವಕಾಶ ನೀಡಿರುವುದು ಅಚ್ಚರಿ ಮೂಡಿಸಿದ್ದು, ಈ ಸಂಬಂಧ ಚರ್ಚೆಗೆ ಗ್ರಾಸವಾಗಿದೆ.
ಬೆಂಗಳೂರು, (ಜೂನ್ 16): ಇದೇ ಜೂನ್ 18ರಂದು ವಿಧಾನಪರಿಷತ್ನ 7 ಸ್ಥಾನಗಳಿಗೆ ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯ ಕಾಂಗ್ರೆಸ್ ಶಾಸಕರು ರೆಸಾರ್ಟ್ಗೆ ಶಿಫ್ಟ್ ಆಗಿದ್ದು, ಬಿಡದಿ ಬಳಿಯ ವಂಡರ್ಲಾ ರೆಸಾರ್ಟ್ನಲ್ಲಿ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ನಡೆದೆ. ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದಲ್ಲಿ ನಡೆಯುತ್ತಿರುವ ಸಿಎಲ್ಪಿ ಸಭೆಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್, ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ, ಸಚಿವರು, ಶಾಸಕರು, ವಿಧಾನಪರಿಷತ್ ಸದಸ್ಯರು ಉಪಸ್ಥಿತರಿದ್ದಾರೆ. ಇನ್ನು ಸಭೆಯಲ್ಲಿ ಮಾದರಿ ಮತಪತ್ರ ಪ್ರದರ್ಶಿಸಿ ಮತದಾನ ಮಾಡುವುದು ಹೇಗೆ ಎಂದು ಮಾಹಿತಿ ನೀಡಲಾಗುತ್ತಿದೆ.
ಇನ್ನು ವಿಶೇಷ ಅಂದ್ರೆ ಈ ಸಭೆಯಲ್ಲಿ ಸಿದ್ದರಾಮಯ್ಯನವರ ಪುತ್ರ, ಸಚಿವರೂ ಆಗಿರುವ ಯತೀಂದ್ರ ಅವರಿಗೆ ವಿಶೇಷ ಗೌರವ ನೀಡಲಾಗಿದೆ. ಹೌದು..ಶಾಸಕಾಂಗ ಪಕ್ಷದ ಸಭೆಯ ವೇದಿಕೆ ಮೇಲೆ ಹಿರಿಯ ಸಚಿವರಿಗೂ ಅವಕಾಶ ಇಲ್ಲ. ಆದ್ರೆ, ಯತೀಂದ್ರ ಸಿದ್ದರಾಮಯ್ಯನವರಿಗೆ ವೇದಿಕೆ ಮೇಲೆ ಅವಕಾಶ ನೀಡಿರುವುದು ಚರ್ಚೆಗೆ ಗ್ರಾಸವಾಗಿದೆ. ಆದ್ರೆ, ಅಸಲಿಯತ್ತು ಏನಂದ್ರೆ ವಿಧಾನಪರಿಷತ್ ಸದಸ್ಯರು ಸಚಿವರಾಗಿರುವುದು ಯತೀಂದ್ರ ಸಿದ್ದರಾಮಯ್ಯನವರು ಮಾತ್ರ. ಹೀಗಾಗಿ ಅವರಿಗೆ ವೇದಿಕೆ ಮೇಲೆ ಸ್ಥಾನ ಕಲ್ಪಿಸಲಾಗಿದೆ.
ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published on: Jun 16, 2026 09:36 PM
ಗಣೇಶ ವಿಸರ್ಜನಾ ಮೆರವಣಿಗೆಯಲ್ಲಿ ಹರತಾಳು ಹಾಲಪ್ಪ ಭರ್ಜರಿ ಡ್ಯಾನ್ಸ್
ವಿಷ್ಣುವರ್ಧನ್ ಅಮೃತ ಮಹೋತ್ಸವಕ್ಕಾಗಿ ಒಂದಾಗುತ್ತಿದೆ ಇಡೀ ಕನ್ನಡ ಚಿತ್ರರಂಗ
ಸುದೀಪ್ ಸಿನಿ ಜರ್ನಿಗೆ 30 ವರ್ಷ: ಶುಭಕೋರಿದ ಸಲ್ಮಾನ್, ಗಂಗೂಲಿ, ಮೋಹನ್ಲಾಲ್
ಸೆಪ್ಟೆಂಬರ್ 28 ರಿಂದ ಅಕ್ಟೋಬರ್ 4ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ

