ಕಾಂಗ್ರೆಸ್ ಶಾಸಕಾಂಗ ಸಭೆಯಲ್ಲಿ ಯತೀಂದ್ರ ಸಿದ್ದರಾಮಯ್ಯಗೆ ಸಿಕ್ತು ವಿಶೇಷ ಸ್ಥಾನ

Edited By:

Updated on: Jun 16, 2026 | 9:57 PM

ಇದೇ ಜೂನ್ 18ರಂದು ವಿಧಾನಪರಿಷತ್​ನ 7 ಸ್ಥಾನಗಳಿಗೆ ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯ ಕಾಂಗ್ರೆಸ್ ಶಾಸಕರು ರೆಸಾರ್ಟ್​​​ಗೆ ಶಿಫ್ಟ್ ಆಗಿದ್ದು, ಬಿಡದಿ ಬಳಿಯ ವಂಡರ್​ಲಾ ರೆಸಾರ್ಟ್​ನಲ್ಲಿ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ನಡೆದೆ. ವಿಶೇಷ ಅಂದ್ರೆ ಈ ಸಭೆಯಲ್ಲಿ ಸಿದ್ದರಾಮಯ್ಯನವರ ಪುತ್ರ, ಸಚಿವರೂ ಆಗಿರುವ ಯತೀಂದ್ರ ಅವರಿಗೆ ವಿಶೇಷ ಗೌರವ ನೀಡಲಾಗಿದೆ. ಹೌದು..ಶಾಸಕಾಂಗ ಪಕ್ಷದ ಸಭೆಯ ವೇದಿಕೆ ಮೇಲೆ ಹಿರಿಯ ಸಚಿವರಿಗೂ ಅವಕಾಶ ಇಲ್ಲ. ಆದ್ರೆ, ಯತೀಂದ್ರ ಸಿದ್ದರಾಮಯ್ಯನವರಿಗೆ ವೇದಿಕೆ ಮೇಲೆ ಅವಕಾಶ ನೀಡಿರುವುದು ಅಚ್ಚರಿ ಮೂಡಿಸಿದ್ದು, ಈ ಸಂಬಂಧ ಚರ್ಚೆಗೆ ಗ್ರಾಸವಾಗಿದೆ.

ಬೆಂಗಳೂರು, (ಜೂನ್ 16): ಇದೇ ಜೂನ್ 18ರಂದು ವಿಧಾನಪರಿಷತ್​ನ 7 ಸ್ಥಾನಗಳಿಗೆ ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯ ಕಾಂಗ್ರೆಸ್ ಶಾಸಕರು ರೆಸಾರ್ಟ್​​​ಗೆ ಶಿಫ್ಟ್ ಆಗಿದ್ದು, ಬಿಡದಿ ಬಳಿಯ ವಂಡರ್​ಲಾ ರೆಸಾರ್ಟ್​ನಲ್ಲಿ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ನಡೆದೆ. ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದಲ್ಲಿ ನಡೆಯುತ್ತಿರುವ ಸಿಎಲ್​ಪಿ ಸಭೆಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್, ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ, ಸಚಿವರು, ಶಾಸಕರು, ವಿಧಾನಪರಿಷತ್ ಸದಸ್ಯರು ಉಪಸ್ಥಿತರಿದ್ದಾರೆ. ಇನ್ನು ಸಭೆಯಲ್ಲಿ ಮಾದರಿ ಮತಪತ್ರ ಪ್ರದರ್ಶಿಸಿ ಮತದಾನ ಮಾಡುವುದು ಹೇಗೆ ಎಂದು ಮಾಹಿತಿ ನೀಡಲಾಗುತ್ತಿದೆ.

ಇನ್ನು ವಿಶೇಷ ಅಂದ್ರೆ ಈ ಸಭೆಯಲ್ಲಿ ಸಿದ್ದರಾಮಯ್ಯನವರ ಪುತ್ರ, ಸಚಿವರೂ ಆಗಿರುವ ಯತೀಂದ್ರ ಅವರಿಗೆ ವಿಶೇಷ ಗೌರವ ನೀಡಲಾಗಿದೆ. ಹೌದು..ಶಾಸಕಾಂಗ ಪಕ್ಷದ ಸಭೆಯ ವೇದಿಕೆ ಮೇಲೆ ಹಿರಿಯ ಸಚಿವರಿಗೂ ಅವಕಾಶ ಇಲ್ಲ. ಆದ್ರೆ, ಯತೀಂದ್ರ ಸಿದ್ದರಾಮಯ್ಯನವರಿಗೆ ವೇದಿಕೆ ಮೇಲೆ ಅವಕಾಶ ನೀಡಿರುವುದು  ಚರ್ಚೆಗೆ ಗ್ರಾಸವಾಗಿದೆ. ಆದ್ರೆ, ಅಸಲಿಯತ್ತು ಏನಂದ್ರೆ  ವಿಧಾನಪರಿಷತ್​​​ ಸದಸ್ಯರು ಸಚಿವರಾಗಿರುವುದು ಯತೀಂದ್ರ ಸಿದ್ದರಾಮಯ್ಯನವರು ಮಾತ್ರ. ಹೀಗಾಗಿ ಅವರಿಗೆ ವೇದಿಕೆ ಮೇಲೆ ಸ್ಥಾನ ಕಲ್ಪಿಸಲಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published on: Jun 16, 2026 09:36 PM
Loading...
Unable to load recommendations.
Follow Us
ಪ್ರಸನ್ನ ಗಾಂವ್ಕರ್​

ಹುಟ್ಟೂರು ಯಲ್ಲಾಪುರ, ಬೆಳೆದೂರು ದಾಂಡೇಲಿಯ ದಟ್ಟ ಕಾಡುಗಳ ನಡುವೆ. ರವಿ ಬೆಳಗೆರೆ ಎಂಬ ಅಕ್ಷರ ರಾಕ್ಷಸನ ಕಟ್ಟಾಭಿಮಾನದಿಂದ ಹಾಳಾಗಿ, ಸೈನ್ಸ್ ನಲ್ಲಿ ಡಿಗ್ರಿ ಪಡೆದು ಜರ್ನಲಿಸಂಗೆ ಹಿಂಬದಿ ಕಿಟಕಿಯಿಂದ ನುಸುಳಿದ್ದು 2010 ರ ಅಕ್ಟೋಬರ್ ನಲ್ಲಿ. ಉಡುಪಿಯಲ್ಲಿ ಮೊದಲ ಪತ್ರಿಕೋದ್ಯಮ ಕರ್ತವ್ಯ ಪ್ರಾರಂಭಿಸಿದ್ದು 2010 ರಲ್ಲಿಯೇ. ಜನಶ್ರೀ ನ್ಯೂಸ್ ಮೊದಲು ಅನ್ನ ನೀಡಿದ ಸಂಸ್ಥೆ. ಉಡುಪಿ ಜಿಲ್ಲಾ ವರದಿಗಾರನಾಗಿ ಮೂರು ವರ್ಷ ಕೆಲಸ ಮಾಡಿ 2013 ರ ಅಂತ್ಯಕ್ಕೆ ಸಮಯ ನ್ಯೂಸ್ ಮೂಲಕ ಬೆಂಗಳೂರಿಗೆ ಎಂಟ್ರಿ. ಬಿಗ್ ೩, ಬೆಂಗಳೂರ್ ಲೈವ್, ಸಮಯ ಸಕಾಲ ಕಾರ್ಯಕ್ರಮದಲ್ಲಿ ವರದಿಗಾರಿಕೆ ಮಾಡಿದ ಖುಷಿ. 2014 ರ ಡಿಸೆಂಬರ್ ನಿಂದ ಟಿವಿ9 ನಲ್ಲಿ ಕೆಲಸ ಪ್ರಾರಂಭ. ಟಿವಿ9 ನಲ್ಲಿ ಮೊದಲು ಮೆಟ್ರೋ ರಿಪೋರ್ಟಿಂಗ್ ಮೂಲಕ ಬೆಂಗಳೂರು ಸುತ್ತುವ ಅರಿಯುವ ರಾಜಧಾನಿಯ ನಾಡಿಮಿಡಿತ ಹುಡುಕುವ ಅವಕಾಶ. ಮೆಟ್ರೋ ಬ್ಯೂರೋ ದಲ್ಲಿ ಶೈಕ್ಷಣಿಕ ಹಾಗೂ ಬಿಬಿಎಂಪಿ ವರದಿಗಾರಿಕೆ. ಚಪ್ಪಲಿಯಿಂದ ಹಿಡಿದು ಚಾದರ್ ತನಕ ಸ್ಟೋರಿ ಮಾಡಿದ ಅನುಭವ. ಮೆಟ್ರೋ ಟೀಂ ನಿಂದ ರಾಜಕೀಯ ವರದಿಗಾರಿಕೆಗೆ ಶಿಫ್ಟ್ ಆದ ತಕ್ಷಣ- ಮುಂದುವರಿದಿದೆ ನಿರಂತರ ಪಯಣ. ಕಥೆ, ಕಾದಂಬರಿ, ಕವನ, ಸಿನಿಮಾ, ಸುತ್ತಾಟ, ಆಗಾಗ ಕಿತ್ತಾಟ, ಸ್ನೇಹಿತರೊಂದಿಗೆ ಒಡನಾಟ ಇವೆಲ್ಲ ಮಾಮೂಲಿ ದಿನಚರಿ. ಇವತ್ತಿಗೂ ಬರವಣಿಗೆಯೊಂದೇ ಖುಷಿ ಕೊಡುವ ಖರ್ಜೂರ. ಸ್ಟಾಕ್ ಮಾರ್ಕೆಟ್ ನಲ್ಲಿ 2019 ರಿಂದ ಆ್ಯಕ್ಟಿವ್.

Read More