Sign In

By signing in or creating an account, you agree with Associated Broadcasting Company's Terms & Conditions and Privacy Policy.

ನ್ಯಾಯಾಂಗ ನಿಂದನೆ ತೂಗುಗತ್ತಿ ಬೆನ್ನಲ್ಲೇ ಎಚ್ಚೆತ್ತುಕೊಂಡ ಜಮೀರ್ ಅಹ್ಮದ್ ಖಾನ್

ನ್ಯಾಯಾಂಗ ನಿಂದನೆ ತೂಗುಗತ್ತಿ ಬೆನ್ನಲ್ಲೇ ಎಚ್ಚೆತ್ತುಕೊಂಡ ಜಮೀರ್ ಅಹ್ಮದ್ ಖಾನ್

ಪ್ರಸನ್ನ ಗಾಂವ್ಕರ್​
| Updated By: ಗಂಗಾಧರ​ ಬ. ಸಾಬೋಜಿ

Updated on: Sep 26, 2024 | 7:17 PM

ಹೈಕೋರ್ಟ್ ತೀರ್ಪಿನ ಬಗ್ಗೆ ಆಕ್ಷೇಪಾರ್ಹ ಹೇಳಿಕೆ ವಿಚಾರವಾಗಿ ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ಕರೆದು ಮಾತನಾಡಿದ ವಸತಿ ಇಲಾಖೆ ಸಚಿವ ಜಮೀರ್ ಅಹ್ಮದ್​, ನ್ಯಾಯಾಲಯದ ಬಗ್ಗೆ ಗೌರವವಿದೆ, ಬಾಯಿತಪ್ಪಿ ಬಂದಿರಬಹುದು ಅಷ್ಟೇ. ಪೊಲಿಟಿಕಲ್ ಬೆನಿಫಿಟ್ ತೆಗೆದುಕೊಳ್ಳುತ್ತಿದ್ದಾರೆ ಎಂದು ಹೇಳಿದ್ದೆ ಅಷ್ಟೇ ಎಂದಿದ್ದಾರೆ. ಆ ಮೂಲಕ ನ್ಯಾಯಾಂಗ ನಿಂದನೆ ತೂಗುಗತ್ತಿಯಿಂದ ಎಚ್ಚೆತ್ತುಕೊಂಡಿದ್ದಾರೆ.

ಬೆಂಗಳೂರು, ಸೆಪ್ಟೆಂಬರ್ 26: ಕೋರ್ಟ್​ ತೀರ್ಪಿನ ಬಗ್ಗೆ ಸಚಿವ ಜಮೀರ್ ಅಹ್ಮದ್ ಖಾನ್​ (Zameer Ahmed Khan) ಮಾತನಾಡಿದ್ದಕ್ಕೆ ವಿಪಕ್ಷ ಮಾತ್ರವಲ್ಲ ಸ್ವಪಕ್ಷದ ನಾಯಕರ ಅಸಮಾಧಾನಕ್ಕೆ ಕಾರಣವಾಗಿದೆ. ಈ ಸಂಬಂಧ ಇಂದಿನ ಸಚಿವ ಸಂಪುಟ ಸಭೆಯಲ್ಲೂ ಈ ಬಗ್ಗೆ ಚರ್ಚೆಯಾಗಿದ್ದು, ಜಮೀರ್ ಹೇಳಿಕೆ ಬಗ್ಗೆ ಸಚಿವರು ಅಸಮಾಧಾನ ಹೊರಹಾಕಿದ್ದಾರೆ. ಅಸಮಾಧಾನ ವ್ಯಕ್ತವಾಗುತ್ತಿದ್ದಂತೆ ಸಚಿವ ಜಮೀರ್ ಅಹ್ಮದ್ ಖಾನ್ ಸುದ್ದಿಗೋಷ್ಠಿ ಕರೆದು ತಮ್ಮ ಹೇಳಿಕೆಗೆ ಸ್ಪಷ್ಟನೆ ನೀಡಿದ್ದಾರೆ. ನ್ಯಾಯಾಲಯದ ಬಗ್ಗೆ ಗೌರವವಿದೆ, ಬಾಯಿತಪ್ಪಿ ಬಂದಿರಬಹುದು ಅಷ್ಟೇ. ಪೊಲಿಟಿಕಲ್ ಬೆನಿಫಿಟ್ ತೆಗೆದುಕೊಳ್ಳುತ್ತಿದ್ದಾರೆ ಎಂದು ಹೇಳಿದ್ದೆ ಅಷ್ಟೇ. ಪೊಲಿಟಿಕಲ್ ಜಡ್ಜ್‌ಮೆಂಟ್‌ ಅಂತಾ ನಾನು ಹೇಳಿಲ್ಲ ಎಂದಿದ್ದಾರೆ. ಸಿಎಂ ವಿರುದ್ಧ ಪ್ರಾಸಿಕ್ಯೂಷನ್​ಗೆ ಕೊಡಬಾರದು ಅಂತ ಕೇಳಿದ್ದೇವೆ. ಕೇವಲ ತನಿಖೆಗೆ ಕೊಟ್ಟಿದ್ದಾರೆ, ಅದು ನಮಗೆ ಒಂದು ರೀತಿಯ ಜಯ ಎಂದಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.