ರಾಧಿಕಾ ಕುಮಾರಸ್ವಾಮಿ ಜತೆಗಿನ ಹಣಕಾಸಿನ ವ್ಯವಹಾರದ ಬಗ್ಗೆ ಸಚಿವ ಜಮೀರ್ ಸ್ಪಷ್ಟನೆ ಹೀಗಿದೆ

Updated on: Sep 03, 2025 | 5:47 PM

ಸಚಿವ  ಜಮೀರ್ ಅಹಮ್ಮದ್ ಖಾನ್ ವಿರುದ್ಧ ಅಕ್ರಮ ಆಸ್ತಿ ಸಂಪಾದನೆ ಪ್ರಕರಣದ ತನಿಖೆ ನಡೆಯುತ್ತಿದ್ದು, ಈ ವೇಳೆ ನಟಿ ರಾಧಿಕಾ ಕುಮಾರಸ್ವಾಮಿ ಅವರು ಸಚಿವ ಜಮೀರ್ ಅಹಮ್ಮದ್ ಖಾನ್​​ಗೆ 2 ಕೋಟಿ ರೂ. ಸಾಲ ಕೊಟ್ಟಿರುವ ಬಗ್ಗೆ ಲೋಕಾಯುಕ್ತ ತನಿಖೆಯಲ್ಲಿ ಬಯಲಾಗಿದೆ. ಈ ಹಿನ್ನೆಲೆಯಲ್ಲಿ ರಾಧಿಕಾ ಕುಮಾರಸ್ವಾಮಿ ಅವರನ್ನು ಲೋಕಾಯುಕ್ತ ವಿಚಾರಣೆ ನಡೆಸಿತ್ತು. ಇನ್ನು ಈ ಬಗ್ಗೆ ಸಚಿವ ಜಮೀರ್ ಅಹಮ್ಮದ್ ಖಾನ್ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ್ದು,  ಮನೆ ತೆಗೆದುಕೊಳ್ಳುವಾಗ ರಾಧಿಕಾ ಕುಮಾರಸ್ವಾಮಿ ಅವರು ಎರಡು ಕೋಟಿ ಸಾಲ ಕೊಟ್ಟಿದ್ದಾರೆ.ಈ ಬಗ್ಗೆ ನಾನು ಆದಾಯ ತೆರಿಗೆಯಲ್ಲಿ ತೋರಿಸಿದ್ದೇನೆ. ನನ್ನ ಮನೆ ಮೇಲೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳ ದಾಳಿಯಾಗಿತ್ತು. ಈ ಪ್ರಕರಣವನ್ನು ಇಡಿ ಅಧಿಕಾರಿಗಳು ಎಸಿಬಿಗೆ ಶಿಫಾರಸು ಮಾಡಿದ್ದರು. ಎಸಿಬಿ ರದ್ದಾದ ಬಳಿಕ ಲೋಕಾಯುಕ್ತ ಕೇಸ್ ಹ್ಯಾಂಡಲ್ ಮಾಡುತ್ತಿದೆ. ಹೀಗಾಗಿ ರಾಧಿಕಾ ಕುಮಾರಸ್ವಾಮಿ ಹೇಳಿಕೆ ಪಡೆಯಲು ಕರೆದಿದ್ದರು. ಆದಾಯ ತೆರಿಗೆಯಲ್ಲಿ ನಾನೂ ತೋರಿಸಿದ್ದೇನೆ, ಅವರೂ ತೋರಿಸಿದ್ದಾರೆ ಎಂದು ಸ್ಪಷ್ಟಪಡಿಸಿದ್ದಾರೆ.

ಬೆಂಗಳೂರು, (ಸೆಪ್ಟೆಂಬರ್ 03): ಸಚಿವ  ಜಮೀರ್ ಅಹಮ್ಮದ್ ಖಾನ್ ವಿರುದ್ಧ ಅಕ್ರಮ ಆಸ್ತಿ ಸಂಪಾದನೆ ಪ್ರಕರಣದ ತನಿಖೆ ನಡೆಯುತ್ತಿದ್ದು, ಈ ವೇಳೆ ನಟಿ ರಾಧಿಕಾ ಕುಮಾರಸ್ವಾಮಿ ಅವರು ಸಚಿವ ಜಮೀರ್ ಅಹಮ್ಮದ್ ಖಾನ್​​ಗೆ 2 ಕೋಟಿ ರೂ. ಸಾಲ ಕೊಟ್ಟಿರುವ ಬಗ್ಗೆ ಲೋಕಾಯುಕ್ತ ತನಿಖೆಯಲ್ಲಿ ಬಯಲಾಗಿದೆ. ಈ ಹಿನ್ನೆಲೆಯಲ್ಲಿ ರಾಧಿಕಾ ಕುಮಾರಸ್ವಾಮಿ ಅವರನ್ನು ಲೋಕಾಯುಕ್ತ ವಿಚಾರಣೆ ನಡೆಸಿತ್ತು. ಇನ್ನು ಈ ಬಗ್ಗೆ ಸಚಿವ ಜಮೀರ್ ಅಹಮ್ಮದ್ ಖಾನ್ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ್ದು,  ಮನೆ ತೆಗೆದುಕೊಳ್ಳುವಾಗ ರಾಧಿಕಾ ಕುಮಾರಸ್ವಾಮಿ ಅವರು ಎರಡು ಕೋಟಿ ಸಾಲ ಕೊಟ್ಟಿದ್ದಾರೆ.ಈ ಬಗ್ಗೆ ನಾನು ಆದಾಯ ತೆರಿಗೆಯಲ್ಲಿ ತೋರಿಸಿದ್ದೇನೆ. ನನ್ನ ಮನೆ ಮೇಲೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳ ದಾಳಿಯಾಗಿತ್ತು. ಈ ಪ್ರಕರಣವನ್ನು ಇಡಿ ಅಧಿಕಾರಿಗಳು ಎಸಿಬಿಗೆ ಶಿಫಾರಸು ಮಾಡಿದ್ದರು. ಎಸಿಬಿ ರದ್ದಾದ ಬಳಿಕ ಲೋಕಾಯುಕ್ತ ಕೇಸ್ ಹ್ಯಾಂಡಲ್ ಮಾಡುತ್ತಿದೆ. ಹೀಗಾಗಿ ರಾಧಿಕಾ ಕುಮಾರಸ್ವಾಮಿ ಹೇಳಿಕೆ ಪಡೆಯಲು ಕರೆದಿದ್ದರು. ಆದಾಯ ತೆರಿಗೆಯಲ್ಲಿ ನಾನೂ ತೋರಿಸಿದ್ದೇನೆ, ಅವರೂ ತೋರಿಸಿದ್ದಾರೆ ಎಂದು ಸ್ಪಷ್ಟಪಡಿಸಿದ್ದಾರೆ.

Loading...
Unable to load recommendations.
Follow Us
ರಮೇಶ್ ಬಿ. ಜವಳಗೇರಾ

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More