ನೀರು ತುಂಬಿಸಿಕೊಳ್ಳಲು ಹೋದ ಮಹಿಳೆ ಸಾವು; ದೋಷವೆಲ್ಲ ಸ್ಥಳೀಯರದ್ದೇ ಎಂದು ಸಚಿವ ಜಮೀರ್ ಅಹ್ಮದ್

ಅರುಣ್​ ಕುಮಾರ್​ ಬೆಳ್ಳಿ

Updated on: Mar 13, 2025 | 12:32 PM

ಮೊನ್ನೆಯಷ್ಟೇ ಸಚಿವ ಜಮೀರ್ ಅನಂದಪುರಕ್ಕೆ ಭೇಟಿ ನೀಡಿ ಅಕ್ರಮವಾಗಿ ವಿದ್ಯುತ್ ಬಳಸುವುದರ ವಿರುದ್ಧ ಎಚ್ಚರಿಕೆಯನ್ನೂ ನೀಡಿದ್ದರಂತೆ. ಜಮೀರ್ ಬಲಭಾಗದಲ್ಲಿ ನಿಂತಿದ್ದ ಗಾಯತ್ರಿ ಹೆಸರಿನ ಮಹಿಳೆಯೊಬ್ಬರು ಕೋಲೆ ಬಸವನಂತೆ ಮಂತ್ರಿ ಹೇಳಿದ್ದಕ್ಕೆಲ್ಲ ತಲೆಯಾಡಿಸುತ್ತಾರೆ. ಸಚಿವನಿಗೆ ಉತ್ತರ ಹೊಳೆಯದಂತಾದಾಗ ಪ್ರಶ್ನೆ ಕೇಳಿದ ಮಾಧ್ಯಮದವರೊಂದಿಗೆ ಏರುಧ್ವನಿಯಲ್ಲಿ ಮಾತಾಡುವ ಪ್ರಯತ್ನವೂ ನಡೆಯುತ್ತದೆ.

ಬೆಂಗಳೂರು, 13 ಮಾರ್ಚ್: ಚಾಮರಾಜಪೇಟೆಯ ಆನಂದಪುರ ಏರಿಯಾದಲ್ಲಿ ಇಂದು ಬೆಳಗಿನ ಜಾವ ನೀರು ತರಲು ಹೋದಾಗ ವಿದ್ಯುತ್ ಪ್ರವಹಿಸಿ ಮಹಿಳೆಯೊಬ್ಬರು ಸಾವನ್ನಪ್ಪಿದ ಸ್ಥಳಕ್ಕೆ ಸ್ಥಳೀಯ ಶಾಸಕ ಜಮೀರ್ ಅಹ್ಮದ್ ಖಾನ್ ಭೇಟಿ ನೀಡಿದರು. ಮಾಧ್ಯಮಗಳೊಂದಿಗೆ ಮಾತಾಡಿದ ಅವರು ಎಲ್ಲ ದೋಷವನ್ನು (blame) ಸ್ಥಳೀಯರ ಮೇಲೆ ಹಾಕಿದರು. ಅಕ್ರಮವಾಗಿ ಮೂರ್ನಾಲ್ಕು ಅಂತಸ್ತು ಮನೆಕಟ್ಟಿ ನೀರು ಮೇಲೆ ಹತ್ತದ ಕಾರಣ ಅಕ್ರಮವಾಗಿ ಮೋಟಾರಗಳನ್ನು ಬಳಸಿ ವಿದ್ಯುತ್ ಕಂಬದಿಂದ ಮೋಟಾರುಗಳಿಗೆ ವಿದ್ಯುತ್ ಸಂಪರ್ಕ ಕಲ್ಪಸಿ ನೀರು ಪಡೆದುಕೊಳ್ಳುತ್ತಿದ್ದಾರೆ ಎಂದು ಅವರು ಹೇಳಿದರು.

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:   ಕುಡಿಯುವ ನೀರು ಹಿಡಿಯಲು ಹೋದ ಮಹಿಳೆ ವಿದ್ಯುತ್ ಪ್ರವಹಿಸಿ ಸಾವು, ಜಮೀರ್ ಅಹ್ಮದ್​ರನ್ನು ದೂರಿದ ಸ್ಥಳೀಯರು

Follow Us
ಅರುಣ್​ ಕುಮಾರ್​ ಬೆಳ್ಳಿ

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.