AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್ ಅಚ್ಚರಿ ಮಾತು

ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್ ಅಚ್ಚರಿ ಮಾತು

Ganapathi Sharma
|

Updated on: Dec 12, 2025 | 12:56 PM

Share

ಸಚಿವ ಜಮೀರ್ ಅಹಮದ್ ಖಾನ್ ಸಿದ್ದರಾಮಯ್ಯನವರ ನಂತರ ಡಿಕೆ ಶಿವಕುಮಾರ್ ಮುಖ್ಯಮಂತ್ರಿ ಆಗಬೇಕು ಎಂಬ ತಮ್ಮ ವೈಯಕ್ತಿಕ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಡಿಸಿಎಂ ಕರೆದಿದ್ದರೂ, ತಾವು ಸ್ನೇಹಿತರ ಮನೆಯ ಊಟಕ್ಕೆ ತೆರಳಿದ್ದರಿಂದ ಡಿನ್ನರ್‌ಗೆ ಹಾಜರಾಗಿರಲಿಲ್ಲ ಎಂದು ಸ್ಪಷ್ಟಪಡಿಸಿದರು. ಎಲ್ಲಾ ನಿರ್ಧಾರಗಳನ್ನು ಹೈಕಮಾಂಡ್ ತೆಗೆದುಕೊಳ್ಳುತ್ತದೆ ಎಂದು ಜಮೀರ್ ಒತ್ತಿಹೇಳಿದ್ದಾರೆ.

ಬೆಳಗಾವಿ, ಡಿಸೆಂಬರ್ 12: ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಕೂಡ ಮುಖ್ಯಮಂತ್ರಿ ಆಗಬೇಕೆಂದು ಆಸೆ ಇದೆ ಎಂದು ಸಚಿವ ಜಮೀರ್ ಅಹ್ಮದ್ ಖಾನ್ ಶುಕ್ರವಾರ ಹೇಳಿದ್ದಾರೆ. ಗುರುವಾರ ರಾತ್ರಿ ಬೆಳಗಾವಿಯ ಹೊರವಲಯದಲ್ಲಿರುವ ದೊಡ್ಡಣ್ಣವರ್ ಫಾರ್ಮ್‌ಹೌಸ್‌ನಲ್ಲಿ ನಡೆದಿದ್ದ ಡಿನ್ನರ್ ಮೀಟಿಂಗ್​ಗೆ ತಮಗೂ ಆಹ್ವಾನ ಇತ್ತು ಎಂದಿರುವ ಅವರು, ಸ್ನೇಹಿತರ ಮನೆಗೆ ತೆರಳಿದ್ದರಿಂದ ಔತಣ ಕೂಟಕ್ಕೆ ಹೋಗಲಾಗಿಲ್ಲ. ಡಿಕೆಶಿ ಸಿಎಂ ಆಗಲಿ ಎಂದ ನನಗೂ ಆಸೆ ಇದೆ. ಆದರೆ, ಅಂತಿಮ ನಿರ್ಧಾರವನ್ನು ಕಾಂಗ್ರೆಸ್ ಹೈಕಮಾಂಡ್ ತೆಗೆದುಕೊಳ್ಳುತ್ತದೆ ಎಂದರು.

ನಮ್ಮ ಅಭಿಪ್ರಾಯಗಳನ್ನು ನಾವು ಹೇಳಬಹುದು, ಆದರೆ ಅಂತಿಮ ತೀರ್ಮಾನ ಹೈಕಮಾಂಡ್‌ನದ್ದಾಗಿರುತ್ತದೆ. ನಮ್ಮ ಪಕ್ಷ ಹೈಕಮಾಂಡ್ ನಿರ್ದೇಶನದಲ್ಲಿ ಕಾರ್ಯನಿರ್ವಹಿಸುತ್ತದೆ ಎಂದು ಅವರು ತಿಳಿಸಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ