ಕುಮಾರಸ್ವಾಮಿ ವಿರುದ್ಧ ಜನಾಂಗೀಯ ನಿಂದನೆ, ತಿಪ್ಪೆ ಸಾರಿಸುವ ಕೆಲಸ ಮಾಡಿದ ಜಮೀರ್

ಅರುಣ್​ ಕುಮಾರ್​ ಬೆಳ್ಳಿ

Updated on: Nov 11, 2024 | 6:54 PM

ಕುಮಾರಸ್ವಾಮಿಯವರ ಕುಟುಂಬವನ್ನು ಖರೀದಿಸುತ್ತೇನೆ ಎಂದು ಹೇಳಿದ ಮಾತಿಗೂ ಜಮೀರ್ ಅಹ್ಮದ್ ಅಸಂಬದ್ಧ ವ್ಯಾಖ್ಯಾನ ನೀಡಿದರು. ದುಡ್ಡಿನ ಮೂಲಕ ಮುಸಲ್ಮಾನರ ವೋಟು ಖರೀದಿಸುತ್ತೇನೆ ಅಂತ ಕುಮಾರಸ್ವಾಮಿಯವರು ಹೇಳಿರುವುದಕ್ಕೆ ಮುಸ್ಲಿಂ ಸಮುದಾಯದ ವೋಟುಗಳು ಮಾರಾಟಕ್ಕಿಲ್ಲ ಅಂತ ಹೇಳಿದ್ದು ಎಂದು ಜಮೀರ್ ಹೇಳಿದರು.

ರಾಮನಗರ: ಭಾಷಣವೊಂದರಲ್ಲಿ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಅವರ ವಿರುದ್ಧ ‘ಕಾಲಿಯ’ ಪದ ಬಳಸಿ ಜನಾಂಗೀಯ ನಿಂದನೆಯ ಗುರುತರವಾದ ಅಪರಾಧವೆಸಗಿರುವ ಸಚಿವ ಜಮೀರ್ ಅಹ್ಮದ್ ಇವತ್ತು ಪತ್ರಿಕಾ ಗೋಷ್ಠಿಯಲ್ಲಿ ತಿಪ್ಪೆ ಸಾರಿಸುವ ಕೆಲಸ ಮಾಡಿದರು. ಅವರು ನನ್ನ ಹಳೆಯ ಸ್ನೇಹಿತರು ಹಾಗಾಗಿ ಅವರನ್ನು ಯಾವಾಗಲೂ ಕರಿಯಣ್ಣ ಅಂತ ಕರೆಯೋದು, ಅವರು ನನ್ನನ್ನು ಕುಳ್ಳ ಎಂದು ಕರೆಯುತ್ತಾರೆ ಎಂದು ಜಮೀರ್ ಹೇಳಿದರು. ಕುಮಾರಸ್ವಾಮಿನ್ನು ತಾನು ಪ್ರೀತಿಯಿಂದ ಹಾಗೆ ಕರೆಯುತ್ತೇನೆಯೇ ಹೊರತು ಅದರ ಹಿಂದೆ ಯಾವುದೇ ದುರುದ್ದೇಶ ಇಲ್ಲ ಎಂದು ಸಚಿವ ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:   ಸಚಿವ ಜಮೀರ್ ಅಹ್ಮದ್ ವಿರುದ್ಧ ಸಿಡಿದೆದ್ದ ಕಾಂಗ್ರೆಸ್ ಶಾಸಕರು: ಎಐಸಿಸಿ ಅಧ್ಯಕ್ಷರಿಗೆ ದೂರು

Loading...
Unable to load recommendations.
Follow Us
ಅರುಣ್​ ಕುಮಾರ್​ ಬೆಳ್ಳಿ

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.