AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

'ಎತ್ತರಕ್ಕೆ ಬೆಳೆದರೆ ಅವರನ್ನು ಮುಗಿಸಲು ಪಿತೂರಿ ಮಾಡ್ತಾರೆ': ಸಚಿವ ಜಮೀರ್​​ ಹೀಗಂದಿದ್ಯಾರಿಗೆ?

‘ಎತ್ತರಕ್ಕೆ ಬೆಳೆದರೆ ಅವರನ್ನು ಮುಗಿಸಲು ಪಿತೂರಿ ಮಾಡ್ತಾರೆ’: ಸಚಿವ ಜಮೀರ್​​ ಹೀಗಂದಿದ್ಯಾರಿಗೆ?

ಬಸವರಾಜ ಮುದನೂರ್
| Edited By: |

Updated on: Aug 07, 2026 | 11:29 AM

Share

ಸಚಿವ ಸ್ಥಾನ ಕೈತಪ್ಪಿದವರ ಅಸಮಾಧಾನ ಸಹಜ, ಸಿಎಂ ಡಿ.ಕೆ. ಶಿವಕುಮಾರ್ ಸಮಾಧಾನಪಡಿಸುತ್ತಾರೆ ಎಂದು ಸಚಿವ ಜಮೀರ್ ಅಹ್ಮದ್ ಖಾನ್ ಚಿತ್ರದುರ್ಗದಲ್ಲಿ ಹೇಳಿದ್ದಾರೆ. ಯಾವುದೇ ಖಾತೆಯನ್ನು ನಿರ್ವಹಿಸಲು ಸಿದ್ಧವಿರುವುದಾಗಿ ತಿಳಿಸಿದ್ದಾರೆ. ಸಚಿವ ಬಿ. ನಾಗೇಂದ್ರ ಅವರಿಗೆ ಎಸ್​ಐಟಿ ಕ್ಲೀನ್ ಚಿಟ್ ನೀಡಿದ್ದು, ಅವರನ್ನು ಮುಳುಗಿಸಲು ಪಿತೂರಿ ನಡೆಯುತ್ತಿದೆ ಎಂದರು. ಹೈಕಮಾಂಡ್ ಸರ್ವೆ ಆಧಾರದ ಮೇಲೆ ಸಚಿವ ಸ್ಥಾನ ನೀಡುತ್ತದೆ, ಹಣದ ವದಂತಿ ಊಹಾಪೋಹ ಎಂದಿದ್ದಾರೆ.

ಚಿತ್ರದುರ್ಗ, ಆಗಸ್ಟ್​​ 07: ಯಾರಾದರೂ ಎತ್ತರಕ್ಕೆ ಬೆಳೆಯುತ್ತಾರೆ ಎಂದು ಗೊತ್ತಾದರೆ ಅವರನ್ನು ಮುಗಿಸುವ ಯತ್ನಗಳು ನಡೆಯುತ್ತವೆ ಎಂದು ಸಚಿವ ಜಮೀರ್​​ ಅಹ್ಮದ್​​ ಖಾನ್​​ ಹೇಳಿದ್ದಾರೆ. ತಮ್ಮನ್ನು ಸೇರಿ ಬಿ. ನಾಗೇಂದ್ರ ವಿಚಾರದಲ್ಲಿಯೂ ಇದೇ ರೀತಿ ಆಗಿದೆ ಎಂದವರು ತಿಳಿಸಿದ್ದಾರೆ. ಮಂತ್ರಿ ಸ್ಥಾನ ಸಿಗದಿದ್ದಾಗ ಅಸಮಾಧಾನಗಳು ಸಹಜ ಎಂದಿರುವ ಜಮೀರ್​​, ಹೈಕಮಾಂಡ್​​ಗೆ ಹಣ ಕೊಟ್ರೆ ಮಂತ್ರಿ ಆಗ್ತಾರೆ ಎಂಬ ಕೆಲ ಸ್ವಪಕ್ಷ ಶಾಸಕರ ಹೇಳಿಕೆಗಳನ್ನು ಅಲ್ಲಗಳೆದಿದ್ದಾರೆ. ಅವೆಲ್ಲವೂ ಊಹಾಪೋಹ ಎಂದವರು ತಿಳಿಸಿದ್ದಾರೆ. ತಮಗೆ ಯಾವುದೇ ಖಾತೆ ಕೊಟ್ಟರು ನಿಭಾಯಿಸೋದಾಗಿಯೂ ಅವರು ಇದೇ ವೇಳೆ ತಿಳಿಸಿದ್ದಾರೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Follow Us
ಬಸವರಾಜ ಮುದನೂರ್
ಬಸವರಾಜ ಮುದನೂರ್

ಆದ್ಯ ವಚನಕಾರ ದೇವರ ದಾಸಿಮಯ್ಯನ 'ಮುದನೂರು' ನಮ್ಮ ಮೂಲ ಊರು. ಸಂತಗುಣದ ತಾತ ಕಿರಿ ವಯಸ್ಸಿನಲ್ಲೇ ಊರು-ಮನೆ ತೊರೆದು ಬರಿಗೈಲಿ ಬಂದು ಯಾದಗಿರಿ ಜಿಲ್ಲೆಯ ಶಹಾಪುರದಲ್ಲಿ ಸ್ವಾಭಿಮಾನದ ಬದುಕು ಕಟ್ಟಿಕೊಂಡರು. ಅಪ್ಪ ಶಿಕ್ಷಕರಾಗಿ ಬದುಕು ರೂಪಿಸಿಕೊಂಡರು. ನನಗೂ ಜೀವನ ಪಾಠ ಕಲಿಸಿದ 'ಗುರು' & 'ಗಾಡ್ ಫಾದರ್' ನನ್ನಪ್ಪ. ಓದು ಮತ್ತು ಬರವಣಿಗೆ ನನ್ನ ಹವ್ಯಾಸ. ಕೋಟೆ-ಕೊತ್ತಲು‌, ಕಾಡು-ಮೇಡು‌‌‌ ಸುತ್ತಾಟ, ಚಾರಣವೆಂದರೆ ಪ್ರಾಣಪ್ರೀತಿ. ಹಳೇ ಹಿಂದಿ ಹಾಡು, ಗಝಲ್, ಜನಪದ, ಭಾವಗೀತೆಗಳು ಮತ್ತು ಭಜನೆ ನನಗಿಷ್ಟ. ಕಾಲೇಜು ದಿನಗಳಲ್ಲಿದ್ದ ಕ್ರಿಕೆಟ್ ಹುಚ್ಚು ಕಡಿಮೆ ಆಗಿದೆ. ಕೋಟೆನಾಡು‌ ಚಿತ್ರದುರ್ಗ ಜಿಲ್ಲೆಯ ಟಿವಿ9 ಪ್ರತಿನಿಧಿಯಾಗಿ ಒಂದೂವರೆ ದಶಕದಿಂದ ಕಾರ್ಯ ನಿರ್ವಹಿಸುತ್ತಿದ್ದೇನೆ. 'ಹೆಣ್ಣಾಗಿದ್ದೇ ತಪ್ಪಾ?' ಅಭಿಯಾನದ ಮೂಲಕ ಮೌಢ್ಯದ ವಿರುದ್ಧ ಜಾಗೃತಿ, 'ವಿಷಾಮೃತ' ಅಭಿಯಾನದ ಮೂಲಕ ನೀರಿನ ಕುರಿತು ಸರ್ಕಾರದ ಕಣ್ತೆರೆಸುವ ಕಾರ್ಯ, 'ಕೆರೆ ಉಳಿಸಿ' ಅಭಿಯಾನದ ಮೂಲಕ ಜಲಮೂಲಗಳ ಸಂರಕ್ಷಣೆ, 'ಆಪರೇಷನ್ ಚಿನ್ನ' ಸರಣಿ ವರದಿ ಮೂಲಕ ವಂಚಕರ ಜಾಲ ಬೇಧಿಸುವ ಕರ್ತವ್ಯ, ಬುಡಕಟ್ಟು ಸಮುದಾಯಗಳ ಜೀವನ, ಸಂಸ್ಕೃತಿ, ಆಚರಣೆಗಳ ಅನಾವರಣ, ಬಯಲುಸೀಮೆಯ ರೈತರ ಸಂಕಷ್ಟ, ಭದ್ರಾ ಮೇಲ್ದಂಡೆ ಯೋಜನೆ ಅಗತ್ಯತೆ ಕುರಿತು ವರದಿ, ಭ್ರಷ್ಟರ ಮುಖವಾಡ ಬಯಲು, ಕಾವಿಧಾರಿಗಳ ಕಪಟತನ ತೆರೆದಿಡುವುದು ಸೇರಿ ಅನೇಕ ಜೀವಪರ, ಜನಪರ ವರದಿಗಾರಿಕೆಗೆ ಟಿವಿ9 ವಾಹಿನಿಯಲ್ಲಿ ಅವಕಾಶ ಸಿಕ್ಕಿದ್ದು ಹೆಮ್ಮೆಯ ಸಂಗತಿ.

Read More