ನಾಯಕ ಸಮುದಾಯಕ್ಕೂ ಸಚಿವ ಸ್ಥಾನ: ಸಿಎಂ ಸಿದ್ದರಾಮಯ್ಯ ಭರವಸೆ
ಮುಂದೆ ನಡೆಯಲಿರುವ ಸಚಿವ ಸಂಪುಟ ಪುನಾರಚನೆ ವೇಳೆ ನಾಯಕ ಸಮುದಾಯದ ನಾಯಕರಿಗೂ ಮಂತ್ರಿ ಸ್ಥಾನ ನೀಡೋದಗಿ ಸಿಎಂ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ. ಮಹರ್ಷಿ ವಾಲ್ಮೀಕಿ ಜಯಂತಿ ಹಿನ್ನೆಲೆ ಶಾಸಕರ ಭವನದ ಮಹರ್ಷಿ ತಪೋವನದಲ್ಲಿರುವ ವಾಲ್ಮೀಕಿ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಮುಖ್ಯಮಂತ್ರಿಗಳು ಈ ಬಗ್ಗೆ ಆಶ್ವಾಸನೆ ನೀಡಿದ್ದಾರೆ.
ಬೆಂಗಳೂರು, ಅಕ್ಟೋಬರ್ 07: ಮಹರ್ಷಿ ವಾಲ್ಮೀಕಿ ಜಯಂತಿ ಹಿನ್ನೆಲೆ ಶಾಸಕರ ಭವನದ ಮಹರ್ಷಿ ತಪೋವನದಲ್ಲಿರುವ ವಾಲ್ಮೀಕಿ ಪ್ರತಿಮೆಗೆ ಸಿಎಂ ಸಿದ್ದರಾಮಯ್ಯ (Siddaramaiah) ಮಾಲಾರ್ಪಣೆ ಮಾಡಿದ್ದಾರೆ. ನಾಯಕ ಸಮುದಾಯದ ಇಬ್ಬರಿಗೆ ಸಚಿವ ಸ್ಥಾನ ಕೊಡಬೇಕು ಎಂಬ ಬೇಡಿಕೆ ಇದೆ ಎಂಬ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಸಿಎಂ, ಮುಂದೆ ಸಚಿವ ಸಂಪುಟ ಪುನಾರಚನೆ ವೇಳೆ ಅವರಿಗೂ ಸಚಿವ ಸ್ಥಾನ ಕೊಡುತ್ತೇವೆ ಎಂಬ ಭರವಸೆ ನೀಡಿದ್ದಾರೆ. ಕಾರ್ಯಕ್ರಮದಲ್ಲಿ ಸಚಿವರಾದ ಕೆ.ಹೆಚ್.ಮುನಿಯಪ್ಪ, ಸತೀಶ್ ಜಾರಕಿಹೊಳಿ, ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧ್ಯಕ್ಷ ಬಸನಗೌಡ ದದ್ದಲ್, ಸಿಎಸ್ ಶಾಲಿನಿ ರಜನೀಶ್, ಶಾಸಕ ರಿಜ್ವಾನ್ ಅರ್ಷದ್ ಉಪಸ್ಥಿತರಿದ್ದರು.
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.
Published on: Oct 07, 2025 12:18 PM
Latest Videos
