ನಾಯಕ ಸಮುದಾಯಕ್ಕೂ ಸಚಿವ ಸ್ಥಾನ: ಸಿಎಂ ಸಿದ್ದರಾಮಯ್ಯ ಭರವಸೆ

Edited By:

Updated on: Oct 07, 2025 | 1:51 PM

ಮುಂದೆ ನಡೆಯಲಿರುವ ಸಚಿವ ಸಂಪುಟ ಪುನಾರಚನೆ ವೇಳೆ ನಾಯಕ ಸಮುದಾಯದ ನಾಯಕರಿಗೂ ಮಂತ್ರಿ ಸ್ಥಾನ ನೀಡೋದಗಿ ಸಿಎಂ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ. ಮಹರ್ಷಿ ವಾಲ್ಮೀಕಿ ಜಯಂತಿ ಹಿನ್ನೆಲೆ ಶಾಸಕರ ಭವನದ ಮಹರ್ಷಿ ತಪೋವನದಲ್ಲಿರುವ ವಾಲ್ಮೀಕಿ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಮುಖ್ಯಮಂತ್ರಿಗಳು ಈ ಬಗ್ಗೆ ಆಶ್ವಾಸನೆ ನೀಡಿದ್ದಾರೆ.

ಬೆಂಗಳೂರು, ಅಕ್ಟೋಬರ್​ 07: ಮಹರ್ಷಿ ವಾಲ್ಮೀಕಿ ಜಯಂತಿ ಹಿನ್ನೆಲೆ ಶಾಸಕರ ಭವನದ ಮಹರ್ಷಿ ತಪೋವನದಲ್ಲಿರುವ ವಾಲ್ಮೀಕಿ ಪ್ರತಿಮೆಗೆ ಸಿಎಂ ಸಿದ್ದರಾಮಯ್ಯ (Siddaramaiah) ಮಾಲಾರ್ಪಣೆ ಮಾಡಿದ್ದಾರೆ. ನಾಯಕ ಸಮುದಾಯದ ಇಬ್ಬರಿಗೆ ಸಚಿವ ಸ್ಥಾನ ಕೊಡಬೇಕು ಎಂಬ ಬೇಡಿಕೆ ಇದೆ ಎಂಬ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಸಿಎಂ, ಮುಂದೆ ಸಚಿವ ಸಂಪುಟ ಪುನಾರಚನೆ ವೇಳೆ ಅವರಿಗೂ ಸಚಿವ ಸ್ಥಾನ ಕೊಡುತ್ತೇವೆ ಎಂಬ ಭರವಸೆ ನೀಡಿದ್ದಾರೆ. ಕಾರ್ಯಕ್ರಮದಲ್ಲಿ ಸಚಿವರಾದ ಕೆ.ಹೆಚ್.ಮುನಿಯಪ್ಪ, ಸತೀಶ್ ಜಾರಕಿಹೊಳಿ, ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧ್ಯಕ್ಷ ಬಸನಗೌಡ ದದ್ದಲ್, ಸಿಎಸ್​ ಶಾಲಿನಿ ರಜನೀಶ್, ಶಾಸಕ ರಿಜ್ವಾನ್ ಅರ್ಷದ್ ಉಪಸ್ಥಿತರಿದ್ದರು.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​ ಮಾಡಿ.

Published on: Oct 07, 2025 12:18 PM
Loading...
Unable to load recommendations.
Follow Us
ಅನಿಲ್​ ಕಲ್ಕೆರೆ

ಅನಿಲ್ ಕಲ್ಕೆರೆ ಮೂಲತಃ ಬೆಂಗಳೂರಿನವರಾಗಿದ್ದು, ಕಳೆದ 11 ವರ್ಷಗಳಿಂದ ಪತ್ರಕರ್ತರಾಗಿ ಕಾರ್ಯನಿರ್ವಹಿಸುತ್ತಿದ್ದು, ಪ್ರಸ್ತುತ ಟಿವಿ9 ಕನ್ನಡ ಸುದ್ದಿ ವಾಹಿನಿಯಲ್ಲಿ ಬೆಂಗಳೂರು ರಾಜಕೀಯ ವರದಿಗಾರರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಕೆ.ಆರ್. ಪುರಂ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಪದವಿ ಪೂರೈಸಿದ ಬಳಿಕ ಬೆಂಗಳೂರು ವಿಶ್ವವಿದ್ಯಾಲಯ (ಸೆಂಟ್ರಲ್ ಕಾಲೇಜು) ದಲ್ಲಿ Msc (ಮಾಸ್ ಕಮ್ಯುನಿಕೇಷನ್) ಸ್ನಾತಕೋತ್ತರ ಪದವಿ ಪೂರೈಸಿದ್ದಾರೆ. ಸೃಜನಶೀಲ ಬರವಣಿಗೆ ಜೊತೆಗೆ ವಿಧಾನಸೌಧದ ಆಡಳಿತಾತ್ಮಕ ಸುದ್ದಿಗಳೂ ಸೇರಿದಂತೆ, ರಾಜಕೀಯ ಪಕ್ಷಗಳು ಹಾಗೂ ರಾಜಕೀಯದ ಪ್ರಸಕ್ತ ವಿದ್ಯಮಾನಗಳನ್ನ ಒಳಗೊಂಡಂತಹ ಸುದ್ದಿಗಳತ್ತ ಗಮನ ಹರಿಸುತ್ತಿದ್ದಾರೆ. ಜೊತೆಗೆ ಪ್ರಜಾಪ್ರಭುತ್ವ ನಾಲ್ಕನೇ ಆಧಾರ ಸ್ತಂಭವಾಗಿ ಸಾಮಾನ್ಯಜನರ ಪರ ಧ್ವನಿಯಾಗಿ ಸರ್ಕಾರಕ್ಕೆ ಸಮಸ್ಯೆ ಮುಟ್ಟಿಸುವ ಸೇತುವೆಯಾಗಿ ಕಾರ್ಯ ನಿರ್ವಹಿಸುತ್ತಿದ್ದೇನೆ. ಮುಂದಿನ ದಿನಗಳಲ್ಲೂ ನಾಗರಿಕರ ಸೇವೆಯನ್ನೂ ಮುಂದುವರೆಸುವ ಗುರಿಯೊಂದಿಗೆ ಉತ್ತಮ ಸಮಾಜಕ್ಕಾಗಿ ಬದ್ಧನಾಗಿದ್ದಾರೆ.

Read More