ರಾಜ್ಯ ಸರ್ಕಾರದ ವಿರುದ್ಧ ಅಶೋಕ್​​ ಸ್ಫೋಟಕ ಆರೋಪ: ಮಂತ್ರಿ ಸ್ಥಾನಕ್ಕೆ ಕೊಡಬೇಕಾ ಕೋಟಿ ಕೋಟಿ?

Edited By:

Updated on: Jul 14, 2026 | 4:54 PM

Karnataka Politics: ವಿಪಕ್ಷ ನಾಯಕ ಆರ್. ಅಶೋಕ್ ಅವರು ರಾಜ್ಯ ಸರ್ಕಾರವನ್ನು ತೀವ್ರವಾಗಿ ಟೀಕಿಸಿದ್ದಾರೆ. ಚಿವರೇ ಇಲ್ಲದೆ ಸದನ ಕರೆಯಲು ಇವರು ಹೊರಟಿದ್ದಾರೆ. ಸಚಿವ ಸ್ಥಾನಕ್ಕೆ 100ರಿಂದ 150 ಕೋಟಿ ರೂಪಾಯಿ ನೀಡಬೇಕಾದ ಸ್ಥಿತಿ ಕಾಂಗ್ರೆಸ್​​ನಲ್ಲಿದೆ. ಇದೇ ರೀತಿ ರೈತರ ಹೋರಾಟಗಳು ನಡೆದಲ್ಲಿ ಈ ಸರ್ಕಾರದಲ್ಲಿ ಮೂರನೇ ಮುಖ್ಯಮಂತ್ರಿಯನ್ನೂ ನಾವು ಕಾಣುವ ಸಾಧ್ಯತೆ ಇದೆ ಎಂದು ಅವರು ಭವಿಷ್ಯ ನುಡಿದಿದ್ದಾರೆ.

ಬೆಂಗಳೂರು, ಜುಲೈ 14: ಸಚಿವ ಸ್ಥಾನಕ್ಕೆ 100ರಿಂದ 150 ಕೋಟಿ ರೂಪಾಯಿ ಇದ್ದು, ಇದು ಪೇಮೆಂಟ್ ಸಚಿವ ಸ್ಥಾನದ ಸರ್ಕಾರ ಎಂದು ವಿಪಕ್ಷ ನಾಯಕ ಆರ್​​. ಅಶೋಕ್​​ ಆರೋಪಿಸಿದ್ದಾರೆ. ರಾಜ್ಯದಲ್ಲಿ ಮೂರನೇ ಮುಖ್ಯಮಂತ್ರಿ ಬರುವ ಸಾಧ್ಯತೆ ಇದೆ ಎಂದು ಭವಿಷ್ಯವನ್ನೂ ನುಡಿದಿರುವ ಅವರು, ನಾನೇ 5 ವರ್ಷ ಸಿಎಂ ಅಂತಿದ್ದ ಸಿದ್ದರಾಮಯ್ಯ ಎಲ್ಲಿ ಹೋದರು? ಸಿದ್ದರಾಮಯ್ಯ ಬದಲಾಗ್ತಾರೆ ಅಂತಾ ನಾನು ಹೇಳಿದ್ದು ನಿಜ ಆಗಿದೆ. ಸಚಿವರೇ ಇಲ್ಲದೆ ಸದನ ಕರೆಯಲು ಇವರು ಹೊರಟಿದ್ದಾರೆ ಎಂದು ಟೀಕಿಸಿದ್ದಾರೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

 

Published on: Jul 14, 2026 04:53 PM
Loading...
Unable to load recommendations.
Follow Us
ಕಿರಣ್​ ಹನಿಯಡ್ಕ

TV9 ಕನ್ನಡದಲ್ಲಿ ಹಿರಿಯ ರಾಜಕೀಯ ವರದಿಗಾರ. ಮಂಗಳೂರು ವಿಶ್ವವಿದ್ಯಾನಿಲಯದಿಂದ ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ. 17 ವರ್ಷಗಳಿಂದ ಮಾಧ್ಯಮ ವೃತ್ತಿ. ಮುದ್ರಣ ಮಾಧ್ಯಮದಲ್ಲಿ ಸಬ್ ಎಡಿಟರ್, ವಿದ್ಯುನ್ಮಾನ ಮಾಧ್ಯಮದಲ್ಲಿ ನ್ಯೂಸ್ ಡೆಸ್ಕ್ ಮತ್ತು ರಾಜಕೀಯ ವರದಿಗಾರಿಕೆಯಲ್ಲಿ ಅನುಭವ.

Read More